
ಇಡುಕ್ಕಿ (ಕೇರಳ)(ಡಿ.3): ರಾಜ್ಯದಲ್ಲಿ ನಡೆಯುತ್ತಿರುವ ಪಂಚಾಯಿತಿ ಚುನಾವಣೆಯಲ್ಲಿ, ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್‌ನಲ್ಲಿ ಒಂದು ಅಚ್ಚರಿಯ ಹೆಸರು ಸ್ಪರ್ಧೆಯಲ್ಲಿದೆ - ಅದುವೇ ಸೋನಿಯಾ ಗಾಂಧಿ!
ಆದರೆ, ಗಾಬರಿ ಬೇಡ. ಇವರು ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅಲ್ಲ. ಬದಲಾಗಿ, ಇವರು ಬಿಜೆಪಿಯ ಸ್ಥಳೀಯ ಅಭ್ಯರ್ಥಿ.
ಈ ಅಭ್ಯರ್ಥಿಯ ತಂದೆ, ಕಾಂಗ್ರೆಸ್ ನಾಯಕರಾಗಿದ್ದ ದುರೈ ರಾಜ್, ತಮ್ಮ ಮಗಳಿಗೆ ಕಾಂಗ್ರೆಸ್ ಪಕ್ಷದ ಮೇಲಿನ ನಿಷ್ಠೆಯನ್ನು ಪ್ರದರ್ಶಿಸಲು ಆಕೆಗೆ 'ಸೋನಿಯಾ ಗಾಂಧಿ' ಎಂದು ನಾಮಕರಣ ಮಾಡಿದ್ದರು. ಆದರೆ, ವಿಪರ್ಯಾಸವೆಂದರೆ, ಈ ಸೋನಿಯಾ ಗಾಂಧಿ ನಂತರ ಪಂಚಾಯತ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಿಜೆಪಿಯ ಸುಭಾಷ್ ಅವರನ್ನು ವಿವಾಹವಾದರು. ಬಳಿಕ, ಇವರೂ ಕೂಡ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಇದೇ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ಈ ಕ್ಷೇತ್ರದ ಅಭ್ಯರ್ಥಿಗಳ ರಾಜಕೀಯ ಬಲಾಬಲಕ್ಕಿಂತ, ಅಭ್ಯರ್ಥಿಯ ಹೆಸರೇ ಭಾರೀ ಕುತೂಹಲ ಮೂಡಿಸಿದೆ. ಈ ಸೋನಿಯಾ ಗಾಂಧಿ (ಬಿಜೆಪಿ) ಅವರ ವಿರುದ್ಧ ಕಾಂಗ್ರೆಸ್‌ನಿಂದ ಮಂಜುಳಾ ರಮೇಶ್ ಎಂಬುವವರು ಕಣದಲ್ಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ