
ತಿರುವನಂತಪುರ(ಜ.13): ಕೇರಳದ ಪಾಲಕ್ಕಾಡ್ ಸ್ಥಳೀಯ ಸಂಸ್ಥೆ ಕಟ್ಟಡದ ಆವರಣದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಬಿಜೆಪಿ ಚಿಹ್ನೆಯಿರುವ ಧ್ವಜ ಹೊದಿಸಲಾದ ಘಟನೆ ಸೋಮವಾರ ನಡೆದಿದ್ದು, ಇದು ಬಿಜೆಪಿ ವಿರುದ್ಧದ ಕಾಂಗ್ರೆಸ್ ಮತ್ತು ಎಡಪಕ್ಷಗಳ ಪ್ರತಿಭಟನೆಗೆ ಕಾರಣವಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತಪ್ಪಿತಸ್ಥರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ ಉದ್ದೇಶಪೂರಕವಾಗಿಯೇ ಬಿಜೆಪಿ ಈ ಕೃತ್ಯದಲ್ಲಿ ತೊಡಗಿದ್ದು, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೇರಳ ಆಡಳಿತಾರೂಢ ಎಡಪಕ್ಷ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಪ್ರತ್ಯೇಕ ಪ್ರತಿಭಟನೆ ಕೈಗೊಂಡಿವೆ. ಆದರೆ ಈ ಘಟನೆಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಹೇಳುತ್ತಿದೆ.
ಈ ಹಿಂದೆ ಇದೇ ಕಟ್ಟಡದ ಮೇಲೆ ‘ಜೈ ಶ್ರೀ ರಾಮ್’ ಎಂಬ ಘೋಷವಾಕ್ಯವಿರುವ ಬ್ಯಾನರ್ ಹಾರಾಡಿತ್ತು. ಈ ಬಗ್ಗೆ ಬಿಜೆಪಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ