
ಡೆಹ್ರಾಡೂನ್ (ಮಾ.11): ಉತ್ತರಾಖಂಡದಲ್ಲಿ( Uttarakhand ) ಮರಳಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿರುವ ಬಿಜೆಪಿಯ ( BJP ) ನೂತನ ಮುಖ್ಯಮಂತ್ರಿ ( New Chief Minister )ಆಯ್ಕೆ ಹೊಣೆಯನ್ನು, ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ (Piyush Goyal ) ಮತ್ತು ಧಮೇಂದ್ರ ಪ್ರಧಾನ್‌ಗೆ ( Dharmendra Pradhan ) ವಹಿಸಲಾಗಿದೆ. ಜೊತೆಗೆ ಇವರಿಗೆ ರಾಜ್ಯದಲ್ಲಿ ಚುನಾವಣಾ ಉಸ್ತುವಾರಿಯಾಗಿದ್ದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ( Prahlad Joshi )ಮತ್ತು ಕೈಲಾಶ್ ವಿಜಯ್ ವರ್ಗೀಯ ನೆರವು ನೀಡಲಿದ್ದಾರೆ. ಹಾಲಿ ಸಿಎಂ ಆಗಿದ್ದ ಪುಷ್ಕರ ಸಿಂಗ್ ಧಮಿ (Pushkar Singh Dhami), ಚುನಾವಣೆಯಲ್ಲಿ ಸೋತಿದ್ದಾರೆ. ಆದರೆ ಅವರನ್ನೇ ಸಿಎಂ ಹುದ್ದೆಗೆ ನೇಮಿಸಲು ಪ್ರಧಾನಿ ಮೋದಿಯಾಗಿ ( PM MOdi ) ಕೇಂದ್ರ ನಾಯಕರು ಒಲವು ಹೊಂದಿದ್ದಾರೆ. ಇವರ ಜೊತೆಗೆ ಸತ್ಪಾಲ್ ಮಹಾರಾಜ್ ಮತ್ತು ಧನ್‌ಸಿಂಗ್ ರಾವಂತ್ ಮುಖ್ಯಮಂತ್ರಿ ಅಭ್ಯರ್ಥಿ ರೇಸ್‌ನಲ್ಲಿದ್ದಾರೆ.
ಪಂಚ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಬಂಡಾಯ ನಾಯಕರ ತುರ್ತು ಸಭೆ
ನವದೆಹಲಿ: ಪಂಚರಾಜ್ಯ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋತ ಬೆನ್ನಲ್ಲೇ, ಗುಲಾಂ ನಬೀ ಆಜಾದ್ ನಿವಾಸದಲ್ಲಿ ಪಕ್ಷದ ಹಿರಿಯ ಭಿನ್ನಮತೀಯ ನಾಯಕರು ಶುಕ್ರವಾರ ಸಭೆ ಸೇರಿದ್ದಾರೆ. ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್, ಮನೀಶ್ ತಿವಾರಿ (Manish Tiwari ) ಆಜಾದ್ ನಿವಾಸಕ್ಕೆ ಆಗಮಿಸಿದ್ದರು. ಜೊತೆಗೆ ಆನಂದ ಶರ್ಮಾ ಕೂಡಾ ಚರ್ಚೆಯಲ್ಲಿ ಭಾಗವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 2 ವರ್ಷಗಳ ಹಿಂದೆಯೇ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಯವರಿಗೆ ಕಾಂಗ್ರೆಸ್ ಪಕ್ಷ ಬಲಪಡಿಸಲು ಪೂರ್ಣಪ್ರಮಾಣದ ನಾಯಕತ್ವ ಹಾಗೂ ವ್ಯಾಪಕ ಸಾಂಸ್ಥಿಕ ಬದಲಾವಣೆ ತರುವಂತೆ ಇವರು ಪತ್ರ ಬರೆದಿದ್ದರು. ಉತ್ತರಪ್ರದೇಶದಲ್ಲಿ ಹೈವೋಲ್ಟೇಜ್ ಪ್ರಚಾರ ನಡೆಸಿಯೂ ಪ್ರಿಯಾಂಕಾ ವಿಫಲವಾಗಿದ್ದ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಭಿನ್ನಮತೀಯ ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಪಂಜಾಬ್ ಸಿಎಂ ಚನ್ನಿ ರಾಜೀನಾಮೆ
ಚಂಡೀಗಢ: ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ವಿಫಲವಾಗುವುದರ ಜೊತೆಗೆ ಸ್ವತಃ ತಾವೂ ಎರಡೂ ಕ್ಷೇತ್ರಗಳಲ್ಲಿ ಸೋತಿರುವ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ, ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿದ ಚನ್ನಿ ರಾಜೀನಾಮೆ ಸಲ್ಲಿಸಿದರು. ಇದಕ್ಕೂ ಮುನ್ನ ಕಡೆಯ ಕಾಂಗ್ರೆಸ್ ಸರ್ಕಾರ ತನ್ನ ಕಡೆಯ ಸಚಿವ ಸಂಪುಟ ಸಭೆ ನಡೆಸಿ ವಿಧಾನಸಭೆ ವಿಸರ್ಜಿಸಲು ರಾಜ್ಯಪಾಲರಿಗೆ ಶಿಫಾರಸು ಮಾಡಿತು.
ಜನರಿಗೆ ಮೋದಿ ಬಗ್ಗೆ ವಿಶ್ವಾಸವಿತ್ತು ಅಭಿವೃದ್ಧಿ ಕಾರ್ಯಕ್ಕೆ ಮನ್ನಣೆ: ಸಚಿವ ಜೋಶಿ
ಮಣಿಪುರ ಸಿಎಂ ಸ್ಥಾನಕ್ಕೆ ಬೀರೆನ್ ರಾಜೀನಾಮೆ
ಇಂಪಾಲ: ಮಣಿಪುರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಎನ್. ಬೀರೆನ್ ಸಿಂಗ್ (biren singh) ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ಮಾ.19ಕ್ಕೆ ಮುನ್ನ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 60 ಸ್ಥಾನಗಳ ಪೈಕಿ 32 ಸ್ಥಾನ ಗೆದ್ದು ಬಹುಮತ ಪಡೆದುಕೊಂಡಿದೆ.
ಜನರಿಗೆ ಮೋದಿ ಬಗ್ಗೆ ವಿಶ್ವಾಸ, ಅಭಿವೃದ್ಧಿ ಕಾರ್ಯ, ಉತ್ತರಾಖಂಡ್‌ನಲ್ಲಿ ಗೆದ್ದೆವು: ಪ್ರಹ್ಲಾದ್ ಜೋಶಿ
ಯೋಗಿ ಸಂಪುಟದ 10 ಸಚಿವರಿಗೆ ಸೋಲು
ಸಿಎಂ ಯೋಗಿ ಆದಿತ್ಯನಾಥ್ ಸಚಿವ ಸಂಪುಟದ 10 ಸಚಿವರು ಈ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಅದರಲ್ಲೂ ಉಪ ಮುಖ್ಯಮಂತ್ರಿಯಾಗಿದ್ದ ಕೇಶವ್ ಪ್ರಸಾದ್ ಮೌರ್ಯ ಅವರೇ 7337 ಮತಗಳ ಅಂತರದಿಂದ ಆಘಾತಕಾರಿ ಸೋಲು ಕಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ