ಮಧ್ಯಪ್ರದೇಶಕ್ಕೆ ಮೋಹನ್ ಯಾದವ್ ನೂತನ ಸಿಎಂ; ಶಿವರಾಜ್ ಸಿಂಗ್ ಬದಲು ಹೊಸಬರಿಗೆ ಮಣೆಹಾಕಿದ ಬಿಜೆಪಿ!

By Suvarna NewsFirst Published Dec 11, 2023, 4:52 PM IST
Highlights

ಕಳೆದ ಹಲವು ದಿನಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮಧ್ಯಪ್ರದೇಶ ಸಿಎಂ ಆಯ್ಕೆ ಕೊನೆಗೂ ಅಂತ್ಯಗೊಂಡಿದೆ. ಶಿವರಾಜ್ ಸಿಂಗ್ ಚವ್ಹಾಣ್ ಬದಲು ಹೊಸ ಮುಖಕ್ಕೆ ಕೇಂದ್ರ ಬಿಜೆಪಿ ಮಣೆ ಹಾಕಿದೆ. ಇದೀಗ ಮಧ್ಯಪ್ರದೇಶದ ನೂತನ ಸಿಎಂ ಆಗಿ ಮೋಹನ್ ಯಾದವ್ ಆಯ್ಕೆ ಮಾಡಲಾಗಿದೆ.

ಭೋಪಾಲ್(ಡಿ.11) ಪಂಚ ರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯ ಗೆದ್ದ ಬಿಜೆಪಿ ಸಿಎಂ ಆಯ್ಕೆಯಲ್ಲಿ ಕೊಂಚ ವಿಳಂಬ ಮಾಡಿತ್ತು. ಛತ್ತೀಸಘಡದ ಬೆನ್ನಲ್ಲೇ ಇದೀಗ ಮಧ್ಯಪ್ರದೇಶದ ಹೊಸ ಸಿಎಂ ಹೆಸರು ಘೋಷಣೆ ಮಾಡಲಾಗಿದೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮೋಹನ್ ಯಾದವ್ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸುದೀರ್ಘ ವರ್ಷಗಳ ಕಾಲ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಶಿವರಾಜ್ ಸಿಂಗ್ ಚವ್ಹಾಣ್ ಬದಲು ಒಬಿಸಿ ನಾಯಕ ಯಾದವ್‌ಗೆ ಮಣೆ ಹಾಕಿದೆ. 

ಮೋಹನ್ ಯಾದವ್‌ಗೆ ಸಿಎಂ ಪಟ್ಟ ನೀಡಿದ್ದರೆ, ಇಬ್ಬರು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಜಗದೀಶ್ ದೇವ್ಡ ಹಾಗೂ ರಾಜೇಂದ್ರ ಶುಕ್ಲಾ ಮಧ್ಯಪ್ರದೇಶ ಉಪಮುಖ್ಯಮಂತ್ರಿಗಳಾಗಿ ಆಯ್ಕೆ ಮಾಡಲಾಗಿದೆ. ಶಿವರಾಜ್ ಸಿಂಗ್‌ಗೆ ಮತ್ತೆ ಸಿಎಂ ಪಟ್ಟ ನೀಡಲಾಗುತ್ತದೆ ಅನ್ನೋ ಮಾತುಗಳು ಕೇಳಿಬಂದಿತ್ತು. ಇದರ ಜೊತೆಗೆ ಕೆಲ ಪ್ರಮುಖರ ಹೆಸರು ಕೇಳಿಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್ ಅಚ್ಚರಿ ಆಯ್ಕೆ ಮಾಡಿದೆ. 

ಛತ್ತೀಸ್‌ಗಢದ ನೂತನ ಸಿಎಂ ಹೆಸರಲ್ಲಿದೆ 66 ಲಕ್ಷದ ಸಾಲ, ಇರುವ ಒಟ್ಟು ಆಸ್ತಿ ಎಷ್ಟು?

ಮಧ್ಯಪ್ರದೇಶಕ್ಕೆ ಬಿಜೆಪಿ ವೀಕ್ಷಕರಾದ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌, ಒಬಿಸಿ ಮೋರ್ಚಾ ಮುಖ್ಯಸ್ಥ ಕೆ ಲಕ್ಷ್ಮಣ್‌ ಹಾಗೂ ಕಾರ್ಯದರ್ಶಿ ಆಶಾ ಲಕ್ರಾ  163 ಬಿಜೆಪಿ ಶಾಸಕರ ಸಭೆ ನಡೆಸಿದ್ದಾರೆ. ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ , ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗೀಯ ಮತ್ತು ಬಿಜೆಪಿ ಅಧ್ಯಕ್ಷ ವಿ.ಡಿ. ವರ್ಮಾ ಸೇರಿದಂತೆ ಕಲ ನಾಯಕರ ಹೆಸರು ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ತೀವ್ರವಾಗಿ ಕೇಳಿಬಂದಿತ್ತು.

ಉಜ್ಜೈನಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ 58 ವರ್ಷದ ಮೋಹನ್ ಯಾದವ್ , 2020ರಲ್ಲಿ ಶಿವರಾಜ್ ಸಿಂಗ್ ಚವ್ಹಾಣ್ ಸಂಪುಟ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 2013, 2018 ಹಾಗೂ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಮೋಹನ್ ಯಾದವ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರೇಮ್‌ನಾರಾಯಣ್ ಯಾದವ್ ವಿರುದ್ಧ 12,941 ಮತಗಳ ಅಂತರದಲ್ಲಿ ಗೆದ್ದ ಮೋಹನ್ ಯಾದವ್, ಸತತ 3ನೇ ಬಾರಿಗೆ ಶಾಸಕರಾಗಿ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ಮೋಹನ್ ಯಾದವ್ 95,699 ಮತಗಳನ್ನು ಪಡೆದಿದ್ದರು.

ಮಧ್ಯಪ್ರದೇಶ ಬಿಜೆಪಿಯಲ್ಲಿ ಪ್ರಶ್ನಾತೀತ ನಾಯಕರಾಗಿರುವ ಶಿವರಾಜ್‌ ಸಿಂಗ್‌ ಚೌಹಾಣ್‌ 2018 ರಿಂದ 2020ರವರೆಗೆ 18 ತಿಂಗಳನ್ನು ಹೊರತುಪಡಿಸಿ 2005ರಿಂದ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. 2005ರಿಂದಲೂ ಸತತ ಅಧಿಕಾರದಲ್ಲಿರುವ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ 5ನೇ ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಸಿಗಲಿಲ್ಲ. 
 

click me!