ನಾಲ್ಕಾಯ್ತು, ಕರ್ನಾಟಕ, ಗುಜರಾತ್ ಸೇರಿ ಇನ್ನೂ 6 ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ!

Published : Jul 04, 2023, 05:22 PM IST
ನಾಲ್ಕಾಯ್ತು, ಕರ್ನಾಟಕ, ಗುಜರಾತ್ ಸೇರಿ ಇನ್ನೂ 6 ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ!

ಸಾರಾಂಶ

ತೆಲಂಗಾಣ, ಆಂಧ್ರ ಪ್ರದೇಶ ಸೇರಿ ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರ ಘೋಷಣೆ ಮಾಡಲಾಗಿದೆ. ಇದೀಗ ಕರ್ನಾಟಕ ಸೇರಿದಂತೆ ಇನ್ನೂ 6 ರಾಜ್ಯದಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಮುಂದಾಗಿದೆ. ಕರ್ನಾಟಕ ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ 6 ರಾಜ್ಯದ ನೂತನ ರಾಜ್ಯಾಧ್ಯಕ್ಷರ ಘೋಷಣೆಯಾಗಲಿದೆ

ನವದೆಹಲಿ(ಜು.04) ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ಪಕ್ಷ ಸಂಘಟನಗೆ ಹೆಚ್ಚಿನ ಒತ್ತು ನೀಡುತ್ತಿದೆ. ಇದರ ಬೆನ್ನಲ್ಲೇ ಹಲವು ರಾಜ್ಯಗಳ ರಾಜ್ಯಾಧ್ಯಕ್ಷರ ಬದಲಾವಣೆ ಮಾಡುತ್ತಿದೆ. ಪಂಜಾಬ್, ತೆಲಂಗಾಣ, ಆಂಧ್ರ ಪ್ರದೇಶ ಹಾಗೂ ಜಾರ್ಖಂಡ್ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲಾಗಿದೆ. ಇದೀಗ ಕರ್ನಾಟಕ, ಗುಜರಾತ್ ಸೇರಿದಂತೆ ಇನ್ನೂ 6 ರಾಜ್ಯದ ರಾಜ್ಯಾಧ್ಯಕ್ಷರ ಬದಲಾವಣೆ ಶೀಘ್ರದಲ್ಲೇ ಆಗಲಿದೆ. ಕರ್ನಾಟಕದಲ್ಲಿ ವಿಪಕ್ಷ ನಾಯಕನ ಆಯ್ಕೆ ಕಸರತ್ತು ಅಂತಿಮ ಹಂತ ತಲುಪಿದೆ. ವಿಪಕ್ಷ ನಾಯಕನ ಆಯ್ಕೆ ಬೆನ್ನಲ್ಲೇ 6 ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರ ಘೋಷಣೆಯಾಗಲಿದೆ.

ಕರ್ನಾಟಕ, ಗುಜರಾತ್, ಕೇರಳ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ ಹಾಗೂ ಮಧ್ಯ ಪ್ರದಶದಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಲಿದೆ. ಕರ್ನಾಟಕದಲ್ಲಿ ಶೋಭಾಕರಂದ್ಲಾಜೆ ಹಾಗೂ ಆಶ್ವತ್ಥ್ ನಾರಾಯಣ್ ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಇನ್ನು ಕೇರಳದಲ್ಲಿ ವಿ ಮುರಳೀಧರನ್ ಹೆಗಲಿಗೆ ರಾಜ್ಯಾಧ್ಯಕ್ಷ ಜವಾಬ್ದಾರಿ ವಹಿಸುವ ಸಾಧ್ಯತೆ ದಟ್ಟವಾಗಿದೆ.

ಕರ್ನಾಟಕ ಬಿಜೆಪಿಗೆ ಮಹಿಳಾ ಸಾರಥ್ಯ? ಉಳಿದ ನಾಲ್ಕು ರಾಜ್ಯಗಳಿಗೆ ಅಧ್ಯಕ್ಷರ ಘೋಷಣೆ!

ಗುಜರಾತ್‌ನಲ್ಲಿ ಪೈಪೋಟಿ ಶುರುವಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವಿಯಾ ಹಾಗೂ ಪುರುಷೋತ್ತಮ ರೂಪಾಲ ನಡುವೆ ಭಾರಿ ಪೈಪೋಟಿ ಶುರುವಾಗಿದೆ. ಹರ್ಯಾಣದಲ್ಲಿ ಕಷ್ಣಪಾಲ್ ಗುಜ್ಜಾರ್ ಹಾಗೂ ರಾಮ್ ವಿಲಾಸ್ ಶರ್ಮಾ ರಾಜ್ಯಾಧ್ಯಕ್ಷರ ಸ್ಥಾನದ ರೇಸ್‌ನಲ್ಲಿದ್ದಾರೆ.ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಡಾ ಜಿತೇಂದ್ರ ಸಿಂಗ್ ಅಥವಾ ಸಂಸದ ಜುಗುಲ್ ಕಿಶೋರ್ ನಡುವೆ ಪೈಪೋಟಿ ಇದೆ.ಇತ್ತ ಮಧ್ಯ ಪ್ರದೇಶದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ಪ್ರಹ್ಲಾದ್ ಪಟೇಲ್ ಹೆಗಲಿಗೆ ರಾಜ್ಯಾಧ್ಯಕ್ಷ ಜವಾಬ್ದಾರಿ ನೀಡುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ವಿಪಕ್ಷ ನಾಯಕನ ಆಯ್ಕೆ ವಿಳಂಬ ಕಾರಣ ಮೊದಲ ಹಂತದ ರಾಜ್ಯಾಧ್ಯಕ್ಷರ ಬದಲಾವಣೆಯಲ್ಲಿ ಕರ್ನಾಟಕವನ್ನು ಕೈಬಿಡಲಾಗಿತ್ತು. ಪಕ್ಷದ ರಾಷ್ಟ್ರೀಯ ನಾಯಕರಾದ ವಿನೋದ್‌ ತಾವಡೆ ಮತ್ತು ಮನ್ಸುಖ್‌ ಮಾಂಡವಿಯಾ ಅವರು ವೀಕ್ಷಕರಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈಗಾಗಲೇ ಬಿಜೆಪಿ ನಾಯಕರು ವಿಪಕ್ಷ ನಾಯಕನ ಆಯ್ಕೆಗೆ ಗುಪ್ತ ಮತದಾನ ಮಾಡಿದ್ದಾರೆ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ವರಿಷ್ಠರಿಗೆ ವರದಿ ನೀಡಲಿದ್ದಾರೆ. ಸಂಜೆಯೇ ಶಾಸಕಾಂಗ ಪಕ್ಷದ ಸಭೆ ಕರೆದು ಘೋಷಣೆ ಮಾಡುವ ಸಾಧ್ಯತೆಯಿದೆ.

ಕುಮಾರಸ್ವಾಮಿ ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಬಿಎಸ್‌ವೈ 

ಜೆಪಿ ನಡ್ಡಾ ಇಂದು ನಾಲ್ಕು ರಾಜ್ಯಗಳ ನೂತನ ರಾಜ್ಯಾಧ್ಯಕ್ಷರನ್ನು ಘೋಷಿಸಿದೆ. ಪಂಜಾಬ್, ತೆಲಂಗಾಣ, ಆಂಧ್ರ ಪ್ರದೇಶ ಹಾಗೂ ಜಾರ್ಖಂಡ್ ರಾಜ್ಯಕ್ಕೆ ನೂತನ ರಾಜ್ಯಾಧ್ಯಕ್ಷರ ಆಯ್ಕೆ ನಡೆದಿದೆ.

ನಾಲ್ಕು ರಾಜ್ಯಗಳ ನೂತನ ಬಿಜೆಪಿ ರಾಜ್ಯಾಧ್ಯಕ್ಷರು:
ಪಂಜಾಬ್‌: ಸುನಿಲ್ ಜಖಾರ್
ತೆಲಂಗಾಣ:  ಕಿಶನ್ ರೆಡ್ಡಿ
ಆಂಧ್ರ ಪ್ರದೇಶ:ಪುರಂದೇಶ್ವರಿ
ಜಾರ್ಖಂಡ್:  ಬಬುಲಾ ಮರಂಡಿ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೆಹಬೂಬಾ...ಹಾಡಿಗೆ ನೃತ್ಯದ ವೇಳೆ ಗೋವಾ ಪಬ್‌ ದುರಂತ!
₹500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ : ಸಿಧು ಪತ್ನಿ ಆರೋಪ