ಸ್ವಾಂತಂತ್ರ್ಯ ಹೋರಾಟಗಾರರ ಬಗ್ಗೆ ಹೇಳಿಕೆ/ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಗೆ ಬಿಜೆಪಿ ಹೈಕಮಾಂಡ್ ನೋಟಿಸ್/ ದೇಶಾದ್ಯಂತ ಹೋರಾಟಕ್ಕೆ ಮುಂದಾದ ಕಾಂಗ್ರೆಸ್
ಬೆಂಗಳೂರು[ಫೆ. 03] ಸ್ವಾತಂತ್ರ್ಯ ಹೋರಾಟಗಾರರ ಹೋರಾಟವನ್ನು ಅಣಕಿಸುವ ರೀತಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಗೆ ಕಾರಣ ಕೇಳಿ ಬಿಜೆಪಿ ಹೈಕಮಾಂಡ್ ನೋಟಿಸ್ ನೀಡಿದೆ.
ಅನಂತ್ ಕುಮಾರ್ ಹೆಗಡೆ ಹೇಳಿಕೆ ನಂತರ ಕಾಂಗ್ರೆಸ್ ದೇಶಾದ್ಯಂತ ಹೋರಾಟಕ್ಕೆ ವೇದಿಕೆ ಸಿದ್ಧ ಮಾಡಿಕೊಂಡಿತ್ತು. ಲೋಕಸಭೆಯಲ್ಲಿಯೂ ಹೋರಾಟ ಮಾಡಲು ಅಣಿಯಾಗಿತ್ತು. ತಕ್ಷಣ ಎಚ್ಚೆತ್ತುಕೊಂಡ ಬಿಜೆಪಿ ಹೆಗಡೆಗೆ ನೋಟಿಸ್ ನೀಡಿದೆ.
ಹೆಗಡೆ ಸ್ವಾತಂತ್ರ್ಯ ಹೋರಾಟಗಾರರನ್ನು ಅವಹೇಳನ ಮಾಡಿದ್ದಾರೆ. ಆರ್ಟಿಕಲ್ 102 ಪ್ರಕಾರ ಅವರನ್ನು ಅನರ್ಹಗೊಳಿಸಿ ಎಂದು ಸುಪ್ರೀಂಕೋರ್ಟ್ ವಕೀಲ ಬ್ರಿಜೇಶ್ ಲೋಕಸಭೆ ಸ್ಪೀಕರ್ ಓಂ ಬಿರ್ಲಾಗೆ ಪತ್ರ ಬರೆದಿದ್ದರು.
ಹೆಗಡೆ ಮೇಲೆ ಗರಂ ಆಗಿದ್ದ ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ 'ಅನಂತಕುಮಾರ್ ಹೆಗಡೆಗೆ ತಲೆ ಸರಿ ಇಲ್ಲ ಸ್ವಾಸ್ಥ್ಯ ಸರಿ ಇದ್ರೂ ಹೀಗೆ ಹೇಳಿದ್ರೆ ಶಿಕ್ಷೆ ಆಗ್ಲಿ, ಸಂವಿಧಾನದ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದಿದ್ದರು.
ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.