
ಬೆಂಗಳೂರು (ಮಾ.21): ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿ ರಾಮ್ ಮಾಧವ್ ಅವರನ್ನು ಆರ್‌ಎಸ್‌ಎಸ್‌ಗೆ ವಾಪಸ್ ಕರೆಸಿಕೊಳ್ಳಲಾಗಿದ್ದು, ಸಂಘದ ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯ ಸ್ಥಾನ ನೀಡಲಾಗಿದೆ.
ನಗರದ ಹೊರವಲಯದಲ್ಲಿನ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿ ನಡೆದ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ರಾಮ್ ಮಾಧವ್ ಅವರನ್ನು ಆರ್‌ಎಸ್‌ಎಸ್‌ಗೆ ವಾಪಸ್ ಕರೆಸಿಕೊಳ್ಳುವ ನಿರ್ಣಯ ಕೈಗೊಳ್ಳಲಾಗಿದೆ.
RSS ಅತ್ಯುನ್ನತ ಹುದ್ದೆಗೇರಿದ ಕರ್ನಾಟಕದ ದತ್ತಾತ್ರೇಯ ಹೊಸಬಾಳೆ ನಡೆದು ಬಂದ ಹಾದಿ ...
ರಾಮ್ ಮಾಧವ್ ಅವರು 2014ರಿಂದ ಬಿಜೆಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆರ್‌ಎಸ್‌ಎಸ್ ಮೂಲಕ ತಮ್ಮ ಸಾಮಾಜಿಕ ಸೇವೆ ಆರಂಭಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ