ಸಂಸತ್‌ ಸ್ಥಾನ ಕಳ್ಕೊಂಡ ರಾಹುಲ್‌ ಗಾಂಧಿಗೆ ಈಗ ಹೊಸ ಪಾಸ್‌ಪೋರ್ಟ್‌ ಪಡೆಯಲೂ ಸಂಕಷ್ಟ!

By BK AshwinFirst Published May 24, 2023, 12:25 PM IST
Highlights

ಹೊಸ ಸಾಮಾನ್ಯ ಪಾಸ್‌ಪೋರ್ಟ್ ನೀಡುವುದಕ್ಕೆ ಯಾವುದೇ ಆಕ್ಷೇಪಣೆ ಇಲ್ಲವೇ ಎಂದು ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿದ್ದರು.

ನವದೆಹಲಿ (ಮೇ 24, 2023): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೊಸ ಪಾಸ್‌ಪೋರ್ಟ್‌ ಪಡೆಯಲು ಅರ್ಜಿ ಸಲ್ಲಿಸಲು ನಿರಾಕ್ಷೇಪಣಾ ಪತ್ರ ಪಡೆಯಲು ಮಂಗಳವಾರ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿದ್ದರು. ಕ್ರಿಮಿನಲ್‌ ಮಾನನಷ್ಟ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೊಳಗಾಗಿದ್ದ ರಾಹುಲ್‌ ಗಾಂಧಿ ಸದ್ಯ ಜಾಮೀನಿನ ಮೇಲೆ ಇದ್ದಾರೆ. ಶಿಕ್ಷೆ ಬಳಿಕ ಸಂಸತ್‌ ಸ್ಥಾನವನ್ನು ಕಳೆದುಕೊಂಡಿದ್ರು. ಈ ಹಿನ್ನೆಲೆ ಸಾಮಾನ್ಯ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಆದರೆ, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಇದಕ್ಕೆ ವಿರೋಧಿಸಿದ್ದಾರೆ. 

ಹೊಸ ಸಾಮಾನ್ಯ ಪಾಸ್‌ಪೋರ್ಟ್ ನೀಡುವುದಕ್ಕೆ ಯಾವುದೇ ಆಕ್ಷೇಪಣೆ ಇಲ್ಲವೇ ಎಂದು ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಸಂಬಂಧ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ವೈಭವ್ ಮೆಹ್ತಾ ಬುಧವಾರ ಅರ್ಜಿ ಆಲಿಸುತ್ತಿದ್ದಾರೆ. ಆದರೆ, ಇದಕ್ಕೆ ಸುಬ್ರಮಣಿಯನ್‌ ಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಹೇಳಿಕೆಗಳು ಎಲ್ಲೆ ಮೀರಬಾರದು: ರಾಹುಲ್‌ ಗಾಂಧಿಗೆ ಹೈಕೋರ್ಟ್‌ ಸಲಹೆ

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವೈಭವ್ ಮೆಹ್ತಾ ಅವರ ಮುಂದೆ ಹಾಜರಾದ ರಾಹುಲ್‌ ಗಾಂಧಿ ಪರ ವಕೀಲರು, ಅವರ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿಲ್ಲ ಮತ್ತು ಆದ್ದರಿಂದ ಅವರಿಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಬಹುದು ಎಂದು ಹೇಳಿದರು. ಆದರೆ, ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿರೋ ಅರ್ಜಿಯನ್ನು ಪರಿಗಣಿಸಿದ ಕೋರ್ಟ್‌ ರಾಹುಲ್‌ ಗಾಂಧಿಯವರ ಮನವಿಗೆ ಉತ್ತರವನ್ನು ಸಲ್ಲಿಸುವ ಹಕ್ಕು ಅವರಿಗೆ ಇದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 26ಕ್ಕೆ ಪಟ್ಟಿ ಮಾಡಲಾಗಿದೆ.

ರಾಹುಲ್‌ ಗಾಂಧಿಗೆ ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದರೆ, ನ್ಯಾಷನಲ್ ಹೆರಾಲ್ಡ್‌ನ ಮಾಲೀಕ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ಗೆ (ಎಜೆಎಲ್) ಕಾಂಗ್ರೆಸ್ ಪಕ್ಷವು ₹ 90 ಕೋಟಿ ಸಾಲವನ್ನು ₹ 50 ಲಕ್ಷ ಪರಿಗಣನೆಗೆ ಯಂಗ್ ಇಂಡಿಯನ್‌ಗೆ ನೀಡುವುದಕ್ಕೆ ಸಂಬಂಧಿಸಿದ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಅಡ್ಡಿಯಾಗಬಹುದು ಎಂದು ಸುಬ್ರಮಣಿಯನ್‌ ಸ್ವಾಮಿ ಅರ್ಜಿ ಸಲ್ಲಿಸಿದ್ದಾರೆ. 

ಇದನ್ನೂ ಓದಿ: ಮೋದಿ ಸರ್‌ನೇಮ್‌ ಕೇಸ್‌: ಜೈಲು ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ರಾಹುಲ್‌ ಗಾಂಧಿ

ಸುಬ್ರಮಣಿಯನ್ ಸ್ವಾಮಿ ಅವರು ತಮ್ಮ ಖಾಸಗಿ ದೂರಿನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಮತ್ತು ಗಾಂಧಿ ಕುಟುಂಬ ನಿಯಂತ್ರಿತ ಯಂಗ್ ಇಂಡಿಯನ್ ವಿರುದ್ಧ ವಂಚನೆ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ನಂಬಿಕೆ ಉಲ್ಲಂಘನೆ ಮತ್ತು ಆಸ್ತಿ ದುರುಪಯೋಗದ ಆರೋಪ ಮಾಡಿದ್ದಾರೆ.

ಸಂಸತ್ ಸದಸ್ಯ (ಎಂಪಿ) ಸ್ಥಾನದಿಂದ ಅನರ್ಹಗೊಂಡ ಕಾರಣ ರಾಹುಲ್ ಗಾಂಧಿ ಅವರು ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಸಲ್ಲಿಸಿದ ನಂತರ ನ್ಯಾಯಾಲಯದ ಮೊರೆ ಹೋಗಿದ್ದರು. 2019 ರಲ್ಲಿ ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಅವರು "ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ" ಎಂಬ ಹೇಳಿಕೆಗಾಗಿ ಮಾರ್ಚ್ 23 ರಂದು ಕ್ರಿಮಿನಲ್ ಮಾನನಷ್ಟಕ್ಕಾಗಿ ಶಿಕ್ಷೆಗೊಳಗಾದ ನಂತರ ವಯನಾಡು ಸಂಸದರಾಗಿದ್ದ ರಾಹುಲ್‌ ಗಾಂಧಿ ಸಂಸತ್‌ ಸ್ಥಾನವನ್ನು ಅನರ್ಹಗೊಳಿಸಲಾಯಿತು. "ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ- ಎಲ್ಲಾ ಕಳ್ಳರು 'ಮೋದಿ' ಎಂಬ ಸಾಮಾನ್ಯ ಉಪನಾಮವನ್ನೇ ಹೇಗೆ ಹೊಂದಿದ್ದಾರೆ?" ಎಂದು ಟೀಕೆ ಮಾಡಿದ್ದರು.

ಇದನ್ನೂ ಓದಿ: ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌: ‘ಮೋದಿ’ ಮಾನನಷ್ಟ ಕೇಸಿಗೆ ಹೈಕೋರ್ಟ್‌ ತಡೆ

ನಂತರ, ಬಿಜೆಪಿಯ ಮಾಜಿ ಶಾಸಕಾಂಗ ಸಭೆಯ ಸದಸ್ಯ (ಎಂಎಲ್‌ಎ) ಪೂರ್ಣೇಶ್ ಮೋದಿ, ರಾಹುಲ್‌ ಗಾಂಧಿಯವರ ಭಾಷಣಕ್ಕೆ ವಿರೋಧ ವ್ಯಕ್ತಪಡಿಸಿ ಗುಜರಾತ್‌ನ ಸೂರತ್‌ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ರು. 

ಇದನ್ನೂ ಓದಿ: ರಾಹುಲ್‌ ಗಾಂಧಿಗೆ ತೀವ್ರ ಹಿನ್ನೆಡೆ: 2 ವರ್ಷ ಜೈಲು ಶಿಕ್ಷೆ ಎತ್ತಿ ಹಿಡಿದ ಸೂರತ್‌ ಕೋರ್ಟ್‌

click me!