
ಇಂಫಾಲ(ಮಾ.07): ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ಪೂರ್ಣಗೊಂಡಿದೆ. ಈ ರಾಜ್ಯದಲ್ಲಿ 60 ವಿಧಾನಸಭಾ ಸ್ಥಾನಗಳಿವೆ. 2017ರಲ್ಲಿ ಕಾಂಗ್ರೆಸ್ ಗರಿಷ್ಠ ಸ್ಥಾನಗಳನ್ನು ಪಡೆದಿದ್ದರೂ ಮಣಿಪುರದಲ್ಲಿ ಬಿಜೆಪಿ ಪಕ್ಷೇತರರೊಂದಿಗೆ ಕೈಜೋಡಿಸಿ ಸರ್ಕಾರ ರಚಿಸಿತ್ತು. ಅದೇ ಸಮಯದಲ್ಲಿ, ಮಣಿಪುರದಲ್ಲಿ ಚುನಾವಣೆ ಪೂರ್ಣಗೊಂಡಿದೆ. ಮತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಹಣೆಬರಹ ಭದ್ರವಾಗಿದೆ. ಮಾರ್ಚ್ 10ರಂದು ನಿಜವಾದ ಫಲಿತಾಂಶ ಹೊರಬೀಳಲಿದೆ. ಏತನ್ಮಧ್ಯೆ, ವಿವಿಧ ಏಜೆನ್ಸಿಗಳು Exit Poll ಡೇಟಾವನ್ನು ಬಿಡುಗಡೆ ಮಾಡಿದೆ. ಹಾಗಾದ್ರೆ ಮತಗಟ್ಟೆ ಸಮೀಕ್ಷೆಗಳು ಏನು ಹೇಳಿವೆ? ಇಲ್ಲಿದೆ ವಿವರ
ಮಣಿಪುರದಲ್ಲಿ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿದ್ದು, ಇಲ್ಲಿ ಸರ್ಕಾರ ರಚಿಸಲು 31 ಸ್ಥಾನಗಳಲ್ಲಿ ಪಕ್ಷವೊಂದು ಗೆಲುವು ಸಾಧಿಸಬೇಕಿದೆ. ಇನ್ನು ಮತಗಟ್ಟೆ ಸಮೀಕ್ಷೆಗಳು ಮಣಿಪುರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ಖಚಿತ ಎಂದು ಭವಿಷ್ಯ ನುಡಿದಿವೆ.
Zee News-DESIGNBOXED ಕೊಟ್ಟ ಮತಗಟ್ಟೆ ಸಮೀಕ್ಷೆ
ಬಿಜೆಪಿ: 23-28
ಕಾಂಗ್ರೆಸ್-10-14
ಇಂಡಿಯಾ ನ್ಯೂಸ್ ಹೇಳಿದ ಭವಿಷ್ಯ
ಬಿಜೆಪಿ: 23-28
ಕಾಂಗ್ರೆಸ್: 10-14
2017ರ ವಿಧಾನಸಭಾ ಚುನಾವಣೆಯ ಫಲಿತಾಂಶ- ಮಣಿಪುರ: 60
ಬಿಜೆಪಿ+: 21
ಕಾಂಗ್ರೆಸ್: 28
ಎನ್‌ಪಿಎಫ್:04
ಇತರರು: 07
ಮ್ಯಾಜಿಕ್ ನಂಬರ್: 31
ಎಕ್ಸಿಟ್ ಪೋಲ್‌ಗಳಿಗೆ ಅಧಿಕೃತೆ ಇದೆಯೇ?
ಎಲ್ಲ ಸುದ್ದಿ ವಾಹಿನಿಗಳು ಎಕ್ಸಿಟ್ ಪೋಲ್‌ಗಳ ಮೂಲಕ ಯಾರು ಸರ್ಕಾರ ರಚಿಸಬಹುದು ಎಂದು ಹೇಳಲು ಪ್ರಯತ್ನಿಸುತ್ತವೆ. ಆದರೆ, ಇದು ಕೇವಲ ಸುದ್ದಿ ವಾಹಿನಿಗಳ ಸಮೀಕ್ಷೆಯನ್ನು ಆಧರಿಸಿದೆ ಮತ್ತು ಯಾವುದೇ ಸತ್ಯಾಸತ್ಯತೆಯನ್ನು ಹೊಂದಿಲ್ಲ. ಹೀಗಿದ್ದರೂ ಎಕ್ಸಿಟ್ ಪೋಲ್‌ಗಳ ಬಗ್ಗೆ ಜನ ಕುತೂಹಲ ಹೊಂದಿದ್ದಾರೆ.
ನಿರ್ಗಮನ ಸಮೀಕ್ಷೆಗಳನ್ನು ಹೇಗೆ ಸಿದ್ಧಪಡಿಸುವುದು?
ಮತಗಟ್ಟೆಯಿಂದ ಹೊರಬರುವ ಮತದಾರರನ್ನು ತಾವು ಯಾರಿಗೆ ಮತ ಹಾಕಿದ್ದೀರಿ ಎಂದು ಕೇಳುವ ಮೂಲಕ ಎಕ್ಸಿಟ್ ಪೋಲ್‌ಗಳನ್ನು ಸಿದ್ಧಪಡಿಸಲಾಗುತ್ತದೆ. ಮತದಾನ ಕೇಂದ್ರದಿಂದ ನಿರ್ಗಮಿಸುವ ಸಮಯದಲ್ಲಿ ಮತದಾರರಿಂದ ಪ್ರಶ್ನೆಗಳನ್ನು ಕೇಳಲಾಗುತ್ತದೆ, ಆದ್ದರಿಂದ ಅಂತಹ ಸಮೀಕ್ಷೆಗಳನ್ನು ಎಕ್ಸಿಟ್ ಪೋಲ್ ಎಂದು ಕರೆಯಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ