
ಹೈದರಾಬಾದ್(ಜೂ.05): ಹೈದರಾಬಾದ್ ಗ್ಯಾಂಗ್ರೇಪ್ ಪ್ರಕರಣದಲ್ಲಿ ಆಡಳಿತ ಪಕ್ಷದ ನಾಯಕನ ಅಪ್ರಾಪ್ತ ಮಗನ ಹೆಸರಿನಿಂದ ರಾಜಕೀಯ ನಡೆಯುತ್ತಿದೆ. ಬಿಜೆಪಿ ಶಾಸಕ ರಘುನಂದನ್ ರಾವ್ ಸಂತ್ರಸ್ತೆ ಮತ್ತು ನಾಯಕನ ಅಪ್ರಾಪ್ತ ಮಗನ ಗುರುತನ್ನು ಬಹಿರಂಗಪಡಿಸಿದ ಆರೋಪವಿದೆ. ಇದಕ್ಕೆ ಬಿಜೆಪಿ ಶಾಸಕರನ್ನು ಕಾಂಗ್ರೆಸ್ ಟೀಕಿಸಿದೆ.
ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮತ್ತು ಸಂಸದ ಮಾಣಿಕ್ಕಂ ಠಾಗೋರ್ ಸಂತ್ರಸ್ತೆ ಮತ್ತು ಅಪ್ರಾಪ್ತ ಆರೋಪಿಯ ಗುರುತನ್ನು ಬಹಿರಂಗಪಡಿಸಿದ್ದಕ್ಕಾಗಿ ಬಿಜೆಪಿ ಶಾಸಕ ರಘುನಂದನ್ ರಾವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಂತ್ರಸ್ತೆ ಮತ್ತು ಅಪ್ರಾಪ್ತ ಆರೋಪಿಗಳ ಛಾಯಾಚಿತ್ರಗಳನ್ನು ಒಳಗೊಂಡ ವಿಡಿಯೋವನ್ನು ಬಿಡುಗಡೆ ಮಾಡಿದ್ದಕ್ಕಾಗಿ ಮಾಣಿಕಂ ಟ್ಯಾಗೋರ್ ರಘುನಂದನ್ ರಾವ್ ಅವರನ್ನು ಟ್ವಿಟರ್‌ನಲ್ಲಿ ಟೀಕಿಸಿದ್ದಾರೆ.
ನನ್ನ ಬಳಿ ವಿಡಿಯೋ ಇದೆ ಎಂದ ಶಾಸಕರು
ತರಾತುರಿಯಲ್ಲಿ ಅಪ್ರಾಪ್ತ ಆರೋಪಿಗಳಿಗೆ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ರಘುನಂದನ್ ರಾವ್ ಹೇಳಿದ್ದಾರೆ. ಅವರು ತೆಲಂಗಾಣದಲ್ಲಿ ಆಡಳಿತಾರೂಢ (ತೆಲಂಗಾಣ ರಾಷ್ಟ್ರ ಸಮಿತಿ) ಟಿಆರ್‌ಎಸ್ ಸರ್ಕಾರದ ಹಿರಿಯ ಸದಸ್ಯರ ಪುತ್ರರಾಗಿದ್ದಾರೆ. ಪೊಲೀಸರು ಅಪ್ರಾಪ್ತ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ ನಂತರ ಸಾಕ್ಷ್ಯವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು. ಶಾಸಕರ ಪುತ್ರನ ಕೈವಾಡವಿರುವುದನ್ನು ಸಾಬೀತುಪಡಿಸುವ ವಿಡಿಯೋ ಸಾಕ್ಷ್ಯಗಳು ತಮ್ಮ ಬಳಿ ಇವೆ ಎಂದಿದ್ದಾರೆ.
ಇದರ ನಂತರ, ಕಾಂಗ್ರೆಸ್ ಸಂಸದರು ತಮ್ಮ ಟ್ವೀಟ್‌ನಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬಾತ ಎಂಐಎಂ (ಆಲ್ ಇಂಡಿಯಾ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್) ಶಾಸಕರ ಪುತ್ರ ಎಂದು ಹೇಳಲಾಗಿದೆ. ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ರಘುನಂದನ್ ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಸುರಕ್ಷತೆಗೆ ರಾಜಿ ಮಾಡಿಕೊಂಡಿದ್ದಾರೆ. ಅತ್ಯಾಚಾರ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸುವುದು ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ವಿರುದ್ಧವಾಗಿದೆ. ಟಿಆರ್‌ಎಸ್, ಬಿಜೆಪಿ ಮತ್ತು ಎಂಐಎಂ ನಡುವಿನ ಅಪವಿತ್ರ ನಂಟು ಕಾರಣವೇ? ಅಪ್ರಾಪ್ತ ಬಾಲಕಿಗೆ ನ್ಯಾಯಕ್ಕಿಂತ ಅವರ ನಂಟು ಮುಖ್ಯವೇ? ಎಂದು ಪ್ರಶ್ನಿಸಿದ್ದಾರೆ.
ಇದೇನಾ?
ಮೇ 28 ರಂದು, ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿ ಪಬ್ ಪಾರ್ಟಿ ಮುಗಿಸಿ ಹಿಂತಿರುಗುತ್ತಿದ್ದ 17 ವರ್ಷದ ಯುವತಿಯನ್ನು ಕೆಲವು ಯುವಕರು ಮನೆಗೆ ಬಿಡುವ ನೆಪದಲ್ಲಿ ಆಕೆಯನ್ನು ಮರ್ಸಿಡಿಸ್ ಕಾರಿನಲ್ಲಿ ಹಾಕಿದ್ದರು. ಇದಾದ ಬಳಿಕ ಆರೋಪಿಗಳು ಆಕೆಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಪ್ರಕರಣದಲ್ಲಿ ಐವರು ಆರೋಪಿಗಳಿದ್ದು, ಇವರಲ್ಲಿ ಮೂವರು ಅಪ್ರಾಪ್ತರು. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ