
ಪ್ರತಾಪ್‌ಗಢ(ಸೆ.26): ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬಂದ ತಮ್ಮ ಮೇಲೆ ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ(Pramod Tiwari) ಅವರು ತಮ್ಮ ಬೆಂಬಲಿಗರ ಜತೆಗೂಡಿ ಹಲ್ಲೆ ನಡೆಸಿದ್ದಾರೆ ಎಂದು ಪ್ರತಾಪ್‌ಗಢದ ಬಿಜೆಪಿ ಸಂಸದ ಸಂಗಮ್ ಲಾಲ್ ಗುಪ್ತಾ(Sangal Lal Gupta) ಆರೋಪಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ದಾಳಿಯಿಂದ ಸಂಸದ ಸಂಗಮ್ ಲಾಲ್(Sangal Lal Gupta) ಅವರ ಕುರ್ತಾ ಪೂರ್ತಿ ಛಿದ್ರಗೊಂಡಿದ್ದು, ಸಣ್ಣ ಗಾಯಗಳಾಗಿವೆ.
ಈ ಪ್ರಕರಣ ಸಂಬಂಧ ಕಾಂಗ್ರೆಸ್‌ನ(Congress) ಹಿರಿಯ ಮುಖಂಡ ಪ್ರಮೋದ್ ತಿವಾರಿ ಹಾಗೂ ಅವರ ಪುತ್ರಿ ಆರಾಧನಾ ಮಿಶ್ರಾ ಸೇರಿದಂತೆ ಒಟ್ಟಾರೆ 27 ಮಂದಿಯ ವಿರುದ್ಧ ಪೊಲೀಸರು ದೂರು ದಾಖಲಿಸಿ, ತನಿಖೆಗೆ ಇಳಿದಿದ್ದಾರೆ.
ಅಲ್ಲದೆ ಈ ಕೃತ್ಯದಲ್ಲಿ ಭಾಗಿಯಾದ ಇತರ 50 ಅಪರಿಚಿತರ ವಿರುದ್ಧವೂ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಅಲ್ಲದೆ ಈ ಪ್ರಕರಣದಲ್ಲಿ ಒಬ್ಬೇ ಒಬ್ಬ ವ್ಯಕ್ತಿಯನ್ನು ಶಿಕ್ಷಿಸದೇ ಬಿಡಬಾರದು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ