ಬಿಜೆಪಿ ಕಚೇರಿಯಲ್ಲಿ ತಲೆ ತಿರುಗಿ ಬಿದ್ದ ಸಂಸದೆ ಪ್ರಜ್ಞಾ| ತನ್ನ ಅನಾರೋಗ್ಯಕ್ಕೆ ಕಾಂಗ್ರೆಸ್ ಕಾರಣ ಎಂದು ದೂರಿದ್ದ ಸಂಸದೆ| ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲು
ಭೋಪಾಲ್(ಜೂ.23): ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅರೋಗ್ಯ ಸ್ಥಿತಿ ಪದೇ ಪದೇ ಹದಗೆಡುತ್ತಿದೆ. ಸದ್ಯ ಭೋಪಾಲ್‌ನ ಬಿಜೆಪಿ ಕಚೇರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸಂಸದೆ ಇದ್ದಕ್ಕಿದ್ದಂತೆ ತಲೆ ತಿರುಗಿ ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇಲ್ಲಿನ ಇಜೆಪಿ ಕಚೇರಿಯಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಪುಣ್ಯ ತಿಥಿ ನಿಮಿತ್ತ ಪುಟ್ಟ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನಡೆಸಿದ್ದು, ಪ್ರಜ್ಞಾ ಠಾಕೂರ್ ಅತಿಥಿಯಾಗಿ ಆಗಮಿಸಿದ್ದರು. ಆದರೆ ಕಾರ್ಯಕ್ರಮದ ನಡುವೆ ಅಚಾನಕ್ಕಾಗಿ ಅವರ ಆರೋಗ್ಯ ಹದಗೆಟ್ಟಿದ್ದು, ನೋಡ ನೋಡುತ್ತಿದ್ದಂತೆಯೇ ತಲೆ ತಿರುಗಿ ಬಿದ್ದಿದ್ದಾರೆ. ಕೂಡಲೇ ಬಿಜೆಪಿ ಕಾರ್ಯಕರ್ತರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಕಾಂಗ್ರೆಸ್ ಕಿರುಕುಳದಿಂದ ನನಗೆ ಈಗ ಕಣ್ಣುಗಳೇ ಕಾಣ್ತಿಲ್ಲ: ಸಾಧ್ವಿ ಪ್ರಜ್ಞಾ
ಇನ್ನು ಭೋಪಾಲ್‌ನಿಂದ ಬಿಜೆಪಿ ಸಂಸದೆಯಾಗಿ ಆಯ್ಕೆಯಾಗಿರುವ ಪ್ರಜ್ಞಾ ಠಾಕೂರ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಎಲ್ಲರ ಗಮನ ಸೆಳೆದಿದ್ದಾರೆ. ತಮ್ಮ ಹೇಳಿಕೆಗಳಿಂದ ಬಿಜೆಪಿ ನಾಯಕರಿಗೂ ಮುಜುಗರವುಂಟು ಮಾಡಿದ್ದಾರೆ. 2019ರ ಚುನಾವಣೆಯಲ್ಲಿ ಓಪಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಜ್ಞಾ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್‌ರನ್ನು ಸೋಲಿಸಿದ್ದರೆಂಬುವುದು ಉಲ್ಲೇಖನೀಯ.