
ಕೋಲ್ಕತಾ(ಮೇ.02): ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನೇರಾನೇರಾ ಸ್ಪರ್ಧೆಯಲ್ಲಿ ತೃಣಮೂಲ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ. ಬರೋಬ್ಬರಿ 218 ಸ್ಥಾನಗಳನ್ನು ಗೆದ್ದುಕೊಂಡು 3ನೇ ಬಾರಿಗೆ ಅಧಿಕಾರಕ್ಕೇರಿದೆ. ಆದರೆ ಸಿಎಂ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ಸೋಲು ಕಂಡಿದ್ದಾರೆ. ಇತ್ತ ಕೆಲ ಪ್ರದೇಶಗಳಲ್ಲಿ ಟಿಎಂಸಿ ಗೆಲುವನ್ನು ಬಿಜೆಪಿ ಕಸಿದುಕೊಂಡಿದೆ. ಫಲಿತಾಂಶ ಹೊರಬೀಳುತ್ತಿದ್ದಂತೆ ಬಂಗಾಳದ ಕೆಲ ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಮಮತಾ ಬ್ಯಾನರ್ಜಿಗೆ ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರ ಶುಭಾಶಯ!
ನಂದಿಗ್ರಾಮದಲ್ಲಿ ಮೊದಲು ಮಮತಾ ಬ್ಯಾನರ್ಜಿಗೆ ಗೆಲುವು ಎಂದಿದ್ದ ಚುನಾವಣಾ ಆಯೋಗ ಬಳಿಕ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಗೆಲುವು ಎಂದು ಘೋಷಿಸಿತ್ತು. ಈ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಗರಂ ಆದ್ರು. ಇತ್ತ ಟಿಎಂಸಿ ಕಾರ್ಯಕರ್ತರ ಆಕ್ರೋಶ ಕೂಡ ಹೆಚ್ಚಾಯಿತು. ಪರಿಣಾಮ ಅರಂಬಾಗ್‌ನಲ್ಲಿರುವ ಬಿಜೆಪಿ ಕಚೇರಿಗೆ ಬೆಂಕಿ ಇಡಲಾಗಿದೆ. ಈ ಹಿಂಸಾಚಾರಕ್ಕೆ ಟಿಎಂಸಿ ಗೂಂಡಾಗಳೇ ಕಾರಣ ಎಂದು ಬಿಜೆಪಿ ಆರೋಪಿಸಿದೆ.
ಇನ್ನು ಬೇಲಾಘಟ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ವಕೀಲ ಕೃಷ್ಣನಾಥ್ ಬಿಸ್ವಾಸ್ ಮನೆಗೂ ಬೆಂಕಿ ಇಡಲಾಗಿದೆ. ಬೆಜೆಪಿ ಏಳಿಗೆ ಸಹಿಸದ ತೃಣಮೂಲ ಕಾಂಗ್ರೆಸ್ ಗೂಂಡಾಗಳು ಹಿಂಸಾಚಾರ ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಆರೋಪಿಸಿದೆ.
ಪಶ್ಚಿಮ ಬಂಗಾಳ ವಿಧಾನಸಭೆಯ ಫಲಿತಾಂಶದ ಬಳಿಕ ಟಿಎಂಸಿ ಗೂಂಡಾಗಳು ಅರಂಬಾಗ್‌ನಲ್ಲಿರುವ ಬಿಜೆಪಿಯ ಪಕ್ಷದ ಕಚೇರಿಯನ್ನು ಸುಟ್ಟುಹಾಕಿದ್ದಾರೆ .. ಮುಂದಿನ 5 ವರ್ಷಗಳ ಕಾಲ ಬಂಗಾಳ ಅನುಭವಿಸಬೇಕಾಗಿರುವುದು ಇದೇನಾ ? ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಲ್ವಿಯಾ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ