ರಾಜ್ಯಸಭಾ ಸಂಸದ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ, ಲೋಕಸಭಾ ಅಖಾಡಕ್ಕೆ ಬಿಜೆಪಿ ಅಧ್ಯಕ್ಷ?

By Suvarna NewsFirst Published Mar 4, 2024, 9:39 PM IST
Highlights

ಇತ್ತೀಚೆಗಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೆಪಿ ನಡ್ಡಾ ಇದೀಗ ದಿಢೀರ್ ರಾಜೀನಾಮೆ ನೀಡಿದ್ದಾರೆ.ಹಿಮಾಚಲ ಪ್ರದೇಶದಿಂದ ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಡ್ಡಾ ರಾಜೀನಾಮೆ ಭಾರಿ ಸಂಚಲನ ಸೃಷ್ಟಿಸಿದೆ.

ನವದೆಹಲಿ(ಮಾ.04)  ಲೋಕಸಭಾ ಚುನಾವಣೆ ಚಟುವಟಿಕೆ ಗರಿಗೆದರಿದೆ. ತಂತ್ರ ಪ್ರತಿತಂತ್ರಗಳನ್ನು ಹೆಣೆಯಲಾಗುತ್ತಿದೆ. ಇದೀಗ ಬಿಜೆಪಿ ನಡೆ ಕೆಲ ಅಚ್ಚರಿಗಳಿಗೂ ಕಾರಣಾಗಿದೆ. ಇತ್ತೀಚೆಗೆಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ತಮ್ಮ ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗುತರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೆಪಿ ನಡ್ಡಾ ರಾಜೀನಾಮೆ ಲೋಕಸಭಾ ಚುನಾವಣಾ ಕುತೂಹಲ ಮತ್ತಷ್ಟು ಹೆಚ್ಚಿಸಿದೆ. ಲೋಕಸಭಾ ಚುನಾವಣೆ ಸ್ಪರ್ಧಿಸುವ ನಿಟ್ಟಿನಲ್ಲಿ ಜೆಪಿ ನಡ್ಡಾ ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

ಹಿಮಾಚಲ ಪ್ರದೇಶದಿಂದ ರಾಜ್ಯಸಭೆ ಸಂಸದರಾಗಿ ಆಯ್ಕೆಯಾಗಿರುವ ಜೆಪಿ ನಡ್ಡಾ ಅವಧಿ ಏಪ್ರಿಲ್ ತಿಂಗಳಿಗೆ ಅಂತ್ಯವಾಗಲಿದೆ. ಪ್ರಸಕ್ತ ಹಿಮಾಚಲ ಪ್ರದೇಶದ ರಾಜ್ಯಸಭಾ ಸಂಸದರಾಗಿರುವ ಜೆಪಿ ನಡ್ಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗಷ್ಟೇ ಜೆಪಿ ನಡ್ಡಾ ಗುಜರಾತ್‌ನಿಂದ ಅವಿರೋಧವಾಗಿ ರಾಜ್ಯಸಭೆ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಸಂಖ್ಯಾಬಲದ ಕೊರತೆ ಕಾರಣ, ಗುಜರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ರಾಜ್ಯಸಭೆಗೆ ಗುಜರಾತ್‌ನಿಂದ ಜೆಪಿ ನಡ್ಡಾ, ರಾಜಸ್ಥಾನದಿಂದ ಸೋನಿಯಾ ಗಾಂಧಿ ಅವಿರೋಧ ಆಯ್ಕೆ!

ಬಿಜೆಪಿ ಈಗಾಗಲೇ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 195 ಅಭ್ಯರ್ಥಿಗಳ ಪಟ್ಟಿ ಬೆನ್ನಲ್ಲೇ ಇದೀಗ 2ನೇ ಪಟ್ಟಿ ಬಿಡುಗಡೆಗೆ ಸಜ್ಜಾಗಿದೆ. ಈ ಪಟ್ಟಿಯಲ್ಲಿ ಜೆಪಿ ನಡ್ಡಾ ಹೆಸರು ಇರಲಿದೆ ಅನ್ನೋ ಮಾತುಗಳು ಬಲವಾಗುತ್ತಿದೆ. ಹೀಗಾಗಿ ಜೆಪಿ ನಡ್ಡಾ ರಾಜ್ಯಸಭೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಪಿ ನಡ್ಡಾ ರಾಜೀನಾಮೆಯನ್ನು ರಾಜ್ಯಸಭಾ ಚೇರ್ಮೆನ್ ಜಗದೀಪ್ ಧನ್ಕರ್ ಅಂಗೀಕರಿಸಿದ್ದಾರೆ. 

ಇತ್ತೀಚಗೆಷ್ಟೇ ಜೆಪಿ ನಡ್ಡಾ ಅವರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅವಧಿಯನ್ನು ವಿಸ್ತರಿಸಲಾಗಿದೆ.  ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಅವಧಿ ವಿಸ್ತರಣೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಧಿಕಾರಾವಧಿಯನ್ನು 2024ರ ಜೂನ್‌ವರೆಗೆ ವಿಸ್ತರಣೆ ಮಾಡಲಾಗಿದೆ. ಇತ್ತೀಚೆಗೆ ನಡೆದ  ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕ ಅಮಿತ್‌ ಶಾ ಈ ಘೋಷಣೆ ಮಾಡಿದ್ದರು. ಈ ಮೂಲಕ ಬಿಜೆಪಿಯು 2024ರ ಲೋಕಸಭಾ ಚುನಾವಣೆಯನ್ನು ನಡ್ಡಾ ನೇತೃತ್ವದಲ್ಲೇ ಎದುರಿಸಲಿದೆ ಎಂದು ಪ್ರಕಟಿಸಿದ್ದರು.   ನಡ್ಡಾ ಅವರು 2019ರಲ್ಲಿ ಅಮಿತ್‌ ಶಾ ಅವರ ಬಳಿಕ ಮಧ್ಯಂತರ ಅವಧಿಗೆ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಬಳಿಕ 2020ರಿಂದ ಪೂರ್ಣಾವಧಿ ರಾಷ್ಟ್ರಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Narendra Modi: ಬಿಜೆಪಿ ದಿಗ್ವಿಜಯಕ್ಕೆ ಮೋದಿ ನೀಡಿದ ಸೂಚನೆ ಏನು..? ವಿಕಸಿತ ಭಾರತಕ್ಕೆ ಮೋದಿ ಸಂಕಲ್ಪ..!

click me!