Latest Videos

Odisha Election Results 2024: ನವೀನ್ ಪಟ್ನಾಯಕ್ ಕೋಟೆಗೆ ಬಜೆಪಿ ಎಂಟ್ರಿ: ಮ್ಯಾಜಿಕ್ ನಂಬರ್‌ನತ್ತ ಕಮಲ ಪಡೆ

By Mahmad RafikFirst Published Jun 4, 2024, 1:57 PM IST
Highlights

BJP reaches Majority Mark: ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ, ಬಿಜೆಪಿ 17 ಲೋಕಸಭಾ ಕ್ಷೇತ್ರ ಹಾಗೂ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತ್ತ ಬಿಜೆಡಿ 3 ಲೋಕಸಭಾ ಮತ್ತು 57 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ

ಭುವನೇಶ್ವರ: ಒಡಿಶಾದಲ್ಲಿ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮ್ಯಾಜಿಕ್ ನಂಬರ್‌ನತ್ತ ಮುನ್ನಡೆ ಕಾಯ್ದುಕೊಂಡಿದೆ. ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ, ಬಿಜೆಪಿ 17 ಲೋಕಸಭಾ ಕ್ಷೇತ್ರ ಹಾಗೂ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತ್ತ ಬಿಜೆಡಿ 3 ಲೋಕಸಭಾ ಮತ್ತು 57 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ

2019ರ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಡಿ 112, ಬಿಜೆಪಿ 23 ಸ್ಥಾನಗಳನ್ನು ಗೆದ್ದಿತ್ತು. 2019ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿತ್ತು. ಒಡಿಶಾ ಲೋಕಸಭೆ ಕ್ಷೇತ್ರಗಳಿಗೆ ಮೇ 13 ಮತ್ತು ಜೂನ್ 1 ರ ನಡುವೆ ನಾಲ್ಕು ಹಂತಗಳಲ್ಲಿ ವಿಧಾನಸಭಾ ಚುನಾವಣೆಗಳಿಗೆ ಮತ ಚಲಾಯಿಸಿದೆ.

18ನೇ ಲೋಕಸಭೆಯ 543 ಸದಸ್ಯರನ್ನು ಆಯ್ಕೆ ಮಾಡಲು ಭಾರತದಲ್ಲಿ 19 ಏಪ್ರಿಲ್ 2024 ರಿಂದ 1 ಜೂನ್ 2024 ರವರೆಗೆ ಸಾರ್ವತ್ರಿಕ ಚುನಾವಣೆಗಳು ನಡೆದಿದ್ದವು. ಚುನಾವಣೆಗಳು ಏಳು ಹಂತಗಳಲ್ಲಿ ನಡೆದಿದ್ದು ಇಂದು ಫಲಿತಾಂಶ ಪ್ರಕಟವಾಗಿದೆ. ಚುನಾವಣೆಗೂ ಮುನ್ನವೇ ಸೂರತ್‌ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.  ಅಧಿಕಾರಕ್ಕೆ ಏರಲು 272 ಸೀಟ್‌ಗಳ ಗೆಲುವು ಮ್ಯಾಜಿಕ್‌ ನಂಬರ್‌ ಆಗಿದೆ. 

Live Blog: ಪೆನ್ ಡ್ರೈವ್ ಕಮಾಲ್, ಹಾಸನದಲ್ಲಿ ಪ್ರಜ್ವಲ್ ರೇವಣ್ಣಂಗೆ ಸೋಲು 

ಈ ಬಾರಿ ಒಟ್ಟು ಶೇ. 66.33ರಷ್ಟು ಮತದಾನವಾಗಿದೆ. ಬಿಜೆಪಿ  ಏಕಾಂಗಿಯಾಗಿ 441 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಕಾಂಗ್ರೆಸ್‌ 328 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.  ಬಹುತೇಕ ಎಲ್ಲಾ ಎಕ್ಸಿಟ್‌ ಪೋಲ್‌ಗಳು ಕೂಡ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅಧಿಕಾರಯುತವಾಗಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ ಎನ್ನುವ ಸಮೀಕ್ಷೆ ನೀಡಿದ್ದವು. ದೈನಿಕ್‌ ಭಾಸ್ಕರ್‌ ನೀಡಿದ್ದ 316 ಸೀಟ್‌ಗಳು ಎಕ್ಸಿಟ್‌ ಪೋಲ್‌ನಲ್ಲಿ ಎನ್‌ಡಿಎಯ ಕನಿಷ್ಠವಾಗಿದ್ದರೆ,  ಟುಡೇಸ್‌ ಚಾಣಕ್ಯದ 400 ಸೀಟ್‌ಗಳು ಗರಿಷ್ಠವಾಗಿದ್ದವು.

click me!