
ನವದೆಹಲಿ (ಡಿ.23) ಭಾರತದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಹಲವು ಮೂಲಗಳಿಂದ ದೇಣಿಗೆ ಸಂಗ್ರಹಿಸುತ್ತದೆ. ಪಕ್ಷವನ್ನು ಮುನ್ನಡೆಸಿಕೊಂಡು ಹೋಗಲು, ಚುನಾವಣೆ ಎದುರಿಸಲು, ಪಕ್ಷ ಸಂಘಟನೆ ಸೇರಿದಂತೆ ಹಲವು ಕಾರಣಗಳಿಂದ ಪಕ್ಷಗಳು ದೇಣಿಗೆ ಸಂಗ್ರಹ ಮಾಡುವುದು ಗೌಪ್ಯವಾದ ವಿಚಾರವಲ್ಲ. ವಿವಾದಿತ ಎಲೆಕ್ಟೋರಲ್ ಬಾಂಡ್‌ಗೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದ ಬಳಿಕ ಒಂದು ವರ್ಷದಲ್ಲಿ ರಾಜಕೀಯ ಪಕ್ಷಗಳು ಸಂಗ್ರಹಿಸಿದ ಪಾರ್ಟಿ ಫಂಡ್ ಸಾವಿರಾರು ಕೋಟಿ ರೂಪಾಯಿ. ಈ ಬೈಕಿ ಬಿಜೆಪಿ, ಕಾಂಗ್ರೆಸ್‌ಗಿಂತ 12 ಪಟ್ಟು ಹೆಚ್ಚು ಡೋನೇಶನ್ ಸಂಗ್ರಹಿಸುವಲ್ಲಿ ಯಶಸ್ವಿಯಾಗಿದೆ. 2024-25ರ ಸಾಲಿನಲ್ಲಿ ಬಿಜೆಪಿ ಬರೋಬ್ಬರಿ 6,088 ಕೋಟಿ ರೂಪಾಯಿ ಸಂಗ್ರಹ ಮಾಡಿದೆ.
ಕೇಂದ್ರ ಚುನಾವಣಾ ಆಯೋಗ 2024-25ರ ಸಾಲಿನಲ್ಲಿ ರಾಜಕೀಯ ಪಕ್ಷಗಳು ಸಂಗ್ರಹ ಮಾಡಿದ ದೇಣಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ಕಳೆದ ವರ್ಷ ಸಂಗ್ರಹದ ಮೊತ್ತಕ್ಕೆ ಹೋಲಿಸಿದರೆ ಸರಿಸುಮಾರು ಡಬಲ್. ಬಿಜೆಪಿ 2024-25ರ ಸಾಲಿನಲ್ಲಿ 6,088 ಕೋಟಿ ರೂಪಾಯಿ ಸಂಗ್ರಹಿಸಿದೆ. ಕಳೆದ ವರ್ಷ ಅಂದರೆ 2023-24ರ ಸಾಲಿನಲ್ಲಿ 3,967 ಕೋಟಿ ರೂಪಾಯಿ ಸಂಗ್ರಹ ಮಾಡಿತ್ತು. 2024-25ರ ಸಾಲಿನಲ್ಲಿ ಕಾಂಗ್ರೆಸ್ 522 ಕೋಟಿ ರೂಪಾಯಿ ದೇಣಿಗೆ ರೂಪದಲ್ಲಿ ಸಂಗ್ರಹ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಕಾಂಗ್ರೆಸ್ ಭಾರಿ ಕುಸಿತ ಕಂಡಿದೆ. 2023-24ರ ಸಾಲಿನಲ್ಲಿ ಕಾಂಗ್ರೆಸ್ 1,230 ಕೋಟಿ ರೂಪಾಯಿ ಸಂಗ್ರಹ ಮಾಡಿತ್ತು.
ವಿವಾದಿತ ಚುನಾವಣಾ ಬಾಂಡ್ ದೇಣಿಕೆ ಕ್ರಮಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದ ಬಳಿಕ ಈ ವರ್ಷ ಗರಿಷ್ಠ ಮೊತ್ತದ ದೇಣಿಗೆ ಸಂಗ್ರಹ ಮಾಡುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. 20,000 ರೂಪಾಯಿಗಿಂತ ಮೇಲ್ಪಟ್ಟು ದೇಣಿಗೆ ನೀಡಿದವರ ಹೆಸರು, ಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಕಂಪನಿ, ಸಂಘ ಸಂಸ್ಥೆ, ವೈಯುಕ್ತಿ ಸೇರಿದಂತೆ ಎಲ್ಲಾ ರೀತಿಯಲ್ಲಿ ದೇಣಿಗೆ ನೀಡಿದವರ ಪಟ್ಟಿ ಚುನಾವಣಾ ಆಯೋಗದ ಸೈಟ್‌ನಲ್ಲಿ ಲಭ್ಯವಿದೆ.
ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳು ಸ್ವೀಕರಿಸಿದ ದೇಣಿಗೆ ಹಣ ಶೇಕಡಾ 95ರಷ್ಟು ಎಲೆಕ್ಟೋರಲ್ ಟ್ರಸ್ಟ್ ಮೂಲಕ ಪಡೆದಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಗರಿಷ್ಠ ದೇಣಿಗೆ ನೀಡಿ ಮೊದಲ ಸ್ಥಾನದಲ್ಲಿರುವುದು ಪ್ರೂಡೆಂಟ್ ಎಲೆಕ್ಟೋರಲ್ ಟ್ರಸ್ಟ್. ಬಿಜೆಪಿಗೆ ಪ್ರೂಡೆಂಟ್ ಎಲೆಕ್ಟೋರಲ್ ಟ್ರಸ್ಟ್ 2180.7 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಇತ್ತ ಕಾಂಗ್ರೆಸ್‌ಗೆ ಇದೇ ಪ್ರೂಡೆಂಟ್ ಎಲೆಕ್ಟೋರಲ್ ಟ್ರಸ್ಟ್ 216.3 ಕೋಟಿ ರೂಪಾಯಿ ದೇಣಿಗೆ ನೀಡಿದೆ.
ಪ್ರೊಗೆಸ್ಸೀವ್ ಎಲೆಕ್ಟೋರಲ್ ಟ್ರಸ್ಟ್ 757.6 ಕೋಟಿ ರೂಪಾಯಿ, ಎಬಿ ಜನರಲ್ ಎಲೆಕ್ಟೋರಲ್ ಟ್ರಸ್ಟ್ 606 ಕೋಟಿ ರೂಪಾಯಿ, ನ್ಯೂ ಡೆಮಾಕ್ರಟಿಕ್ ಎಲೆಕ್ಟೋರಲ್ ಟ್ರಸ್ಟ್ 150 ಕೋಟಿ ರೂಪಾಯಿ, ಸೀರಮ್ ಇನ್ಸ್‌ಟಿಟ್ಯೂಟ್ ಆಫ್ ಇಂಡಿಯಾ 100 ಕೋಟಿ ರೂಪಾಯಿ, ರುಂಗ್ತಾ ಗ್ರೂಪ 95, ಬಜಾಜ್ ಗ್ರೂಪ್ 74 ಕೋಟಿ ರೂಪಾಯಿ, ಐಟಿಸಿ ಗ್ರೂಪ್ 72.5 ಕೋಟಿ ರೂಪಾಯಿ ಹಣವನ್ನು ಬಿಜೆಪಿಗೆ ದೇಣಿಗೆ ರೂಪದಲ್ಲಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ