
ನವದೆಹಲಿ(ಡಿ.16): 'ನಾನು ರಾಹುಲ್ ಸಾವರ್ಕರ್ ಅಲ್ಲ..'ಎನ್ನುವ ಮೂಲಕ ರಾಹುಲ್ ಗಾಂಧಿ ವೀರ್ ಸಾವರ್ಕರ್ ಅವರದ್ದಲ್ಲ ಬದಲಿಗೆ ತಮ್ಮ ಅಜ್ಜಿ ಇಂದಿರಾ ಗಾಂಧಿ ಅವರ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಅಣಕಿಸಿದೆ.
ಇಂದಿರಾ ಗಾಂಧಿ ಸ್ವಾತಂತ್ರ್ಯ ಹೋರಾಟದಲ್ಲಿ ವೀರ್ ಸಾವರ್ಕರ್ ಪಾತ್ರವನ್ನು ಕೊಂಡಾಡಿದ್ದರು. ಕ್ರಾಂತಿಕಾರಿ ಮಾರ್ಗದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಾವರ್ಕರ್ ಸ್ಮರಣೀಯರು ಎಂದು ಇಂದಿರಾ ಗಾಂಧಿ ಹೇಳಿದ್ದರು ಎಂದು ಬಿಜೆಪಿ ನಾಯಕ ಶಾಹನವಾಜ್ ಹುಸೇನ್ ನೆನಪಿಸಿದ್ದಾರೆ.
‘ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ’!
ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಾವರ್ಕರ್ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಹನವಾಜ್ ಹುಸೇನ್, ರಾಹುಲ್ ಗಾಂಧಿ ತಮ್ಮ ಹೇಳಿಕೆಹೆ ಕ್ಷಮೆ ಕೋರಿದರೂ ಅವರನ್ನು ದೇಶದ ಜನತೆ ಕ್ಷಮಿಸುವುದಿಲ್ಲ ಎಂದು ಹೇಳಿದರು.
ಸಾವರ್ಕರ್ ಬಗ್ಗೆ ಮಾತಾಡಿದ್ರೆ ಹುಷಾರ್: ಕಾಂಗ್ರೆಸ್’ಗೆ ಎಚ್ಚರಿಸಿದ ಶಿವಸೇನೆ!
ದೆಹಲಿಯಲ್ಲ ನಡೆದ ಭಾರತ್ ಬಚಾವೋ ಆಂದೋಲನದಲ್ಲಿ 'ರೇಪ್ ಇನ್ ಇಂಡಿಯಾ' ಹೇಳಿಕೆಗೆ ಕ್ಷಮೆ ಕೇಳಲು ನನ್ನ ಹೆಸರು ರಾಹುಲ್ ಸಾವರ್ಕರ್ ಅಲ್ಲ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ