
ಭೋಪಾಲ್(ಜೂ.02): ರಾಜಸ್ಥಾನದಲ್ಲಿ ಲಸಿಕೆ ಹಾಳು ಮಾಡುತ್ತಿರುವ ವಿಚಾರ ಸದ್ಯ ಭಾರೀ ಸದ್ದು ಮಾಡುತ್ತಿದೆ. ಕಸದ ಡಬ್ಬಿಯಲ್ಲಿ ಸಿಕ್ಕ ಲಸಿಕೆಯ ಸಿರಿಂಜ್‌ಗಳು ಗೆಹ್ಲೋಟ್ ಸರ್ಕಾರಕ್ಕೆ ಕಂಟಕವಾಗಿ ಪರಿಣಮಿಸಲಾರಂಭಿಸಿದೆ. ಬಿಜೆಪಿಯು ಸೋಶಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿಗೆ ಈ ಬಗ್ಗೆ ಪ್ರಶ್ನೆ ಎಸೆದಿದ್ದು, ಇದೇನಾ ರಾಜಸ್ಥಾನ ಮಾಡೆಲ್? ಎಂದು ಪ್ರಶ್ನಿಸಿದ್ದಾರೆ.
ಜನರ ಜೀವದ ಬಗ್ಗೆ ಕಾಂಗ್ರೆಸ್‌ಗೆ ಚಿಂತೆ ಇಲ್ಲ
ಇನ್ನು ರಾಜಸ್ಥಾನದಲ್ಲಿ ಹಾಳಾಗುತ್ತಿರುವ ಲಸಿಕೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿರುವ ಪಶ್ಚಿಮ ಬಂಗಾಳದ ಬಿಜೆಪಿ ಸಹ ಉಸ್ತುವಾರಿ ಅಮಿತ್ ಮಾಳವೀಯ ರಾಜಸ್ಥಾನದಲ್ಲಿ ಲಸಿಕೆ ಪೋಲಾಗುವ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಲಸಿಕೆ ಸಿಗದೇ ಒಂದೆಡೆ ಜನರು ಪರದಾಡುತ್ತಿದ್ದರೆ., ಮತ್ತೊಂದೆಡೆ ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಮಾತ್ರ ಈ ಬಗ್ಗೆ ತಲೆ ಕೆಡಿಸಿಕೊಳ್ಳದೆ, ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನು ಈ ವಿಚಾರದ ಬಗ್ಗೆ ಸೋಶಿಇಯಲ್ ಮಿಡಿಯಾದಲ್ಲಿ ನೆಟ್ಟಿಗರು ಧ್ವನಿ ಎತ್ತಿದ್ದು, ಲಸಿಕೆ ಯಾಕೆ ಪೋಲು ಮಾಡುತ್ತಿದ್ದೀರೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಪ್ರಶ್ನಿಸಲಾರಂಭಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ