ಗ್ಯಾರೆಂಟಿ ಯೋಜನೆಗಾಗಿ ದೇವಸ್ಥಾನದ ಹುಂಡಿಗೆ ಕೈ ಹಾಕಿದ ಕಾಂಗ್ರೆಸ್ ಸರ್ಕಾರ,ಭಾರಿ ಆಕ್ರೋಶ

Published : Feb 28, 2025, 09:04 PM ISTUpdated : Feb 28, 2025, 09:07 PM IST
ಗ್ಯಾರೆಂಟಿ ಯೋಜನೆಗಾಗಿ ದೇವಸ್ಥಾನದ ಹುಂಡಿಗೆ ಕೈ ಹಾಕಿದ ಕಾಂಗ್ರೆಸ್ ಸರ್ಕಾರ,ಭಾರಿ ಆಕ್ರೋಶ

ಸಾರಾಂಶ

ಉಚಿತ ಗ್ಯಾರೆಂಟಿ ಯೋಜನೆಗಳಿಂದ ಕಂಗಾಲಾಗಿರುವ ಹಿಮಾಚಲ ಪ್ರದೇಶ ಕಾಂಗ್ರೆಸ್ ಸರ್ಕಾರ ಇದೀಗ ಅಭಿವೃದ್ಧಿ ಕಾರ್ಯಗಳಿಗೆ ಹಣ ಹೊಂದಿಸಲುು ದೇವಸ್ಥಾನದ ಹುಂಡಿಗೆ ಕೈ ಹಾಕಿದೆ. ಇದು ಭಾರಿ ಆಕ್ರೋಶಕ್ಕೆ ಕಾರಣಾಗಿದೆ.

ಹಿಮಾಚಲ ಪ್ರದೇಶ(ಫೆ.28) ಉಚಿತ ಗ್ಯಾರೆಂಟಿ ಯೋಜನೆ ಜಾರಿಗೊಳಿಸಿರುವ ಹಿಮಾಚಲ ಪ್ರದೇ ಕಾಂಗ್ರೆಸ್ ಸರ್ಕಾರ ಇದೀಗ ಹಣ ಹೊಂದಿಸಲು ಹೆಣಗಾಡುತ್ತಿದೆ ಅನ್ನೋ ವರದಿಗಳು ಬಯಲಾಗಿದೆ.  ಕಾಂಗ್ರೆಸ್‌ನ ಉಚಿತ ಗ್ಯಾರೆಂಟಿಗೆ ಭಾರಿ ಹಣ ಖರ್ಚಾಗುತ್ತಿದೆ. ಇದರ ನಡುವೆ ಪ್ರವಾಹ, ಭೂಕುಸಿತ ಸೇರಿದಂತೆ ಪ್ರಾಕೃತಿಕ ವಿಕೋಪದಿಂದ ಹಿಮಾಚಲ ಕಾಂಗ್ರೆಸ್ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹಿಮಾಚಲ ಪ್ರದೇಶ ಕಾಂಗ್ರೆಸ್ ಸರ್ಕಾರದ ಬಹುತೇಕ ಎಲ್ಲಾ ಮಾರ್ಗಗಳು ಅಂತ್ಯಗೊಂಡಿದೆ. ಇದೀಗ ಕೊನೆಯದಾಗಿ ಹಿಂದೂ ದೇವಸ್ಥಾನದ ಹುಂಡಿಗೆ ಕೈ ಹಾಕಿದೆ. ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ದೇವಸ್ಥಾನಗಳು ದೇಣಿಗೆ ನೀಡುವಂತೆ ಕಾಂಗ್ರೆಸ್ ಸರ್ಕಾರ ಪತ್ರ ಬರೆದಿದೆ. ಸರ್ಕಾರದ ಆಡಳಿತದಲ್ಲಿರುವ ದೇವಸ್ಥಾನಗಳಿಗೆ ನೀಡಿರುವ ಈ ಪತ್ರ ಇದೀಗ ಕೋಲಾಹಲ ಸೃಷ್ಟಿಸಿದೆ.

ಹಿಮಾಚಲ ಪ್ರದೇಶದಲ್ಲಿ ಅತ್ಯಂತ ಪ್ರಸಿದ್ಧ ಹಾಗೂ ಪವಿತ್ರ ಹಿಂದೂ ಧಾರ್ಮಿಕ ಕೇಂದ್ರಗಳಿವೆ. ಈ ಎಲ್ಲಾ ಕ್ಷೇತ್ರಗಳು ಹಿಮಾಚಲ ಪ್ರದೇಶ ಮುಜರಾಯಿ ಇಲಾಖೆ ಆಡಳಿತಕ್ಕೊಳಪಟ್ಟಿದೆ. ಇದೀಗ ಸರ್ಕಾರ ಈ ದೇವಸ್ಥಾನಗಳಿಗೆ ಸುತ್ತೋಲೆ ಹೊರಡಿಸಿದೆ. ಮುಖ್ಯಮಂತ್ರಿ ಸುಖ ಆಶ್ರಯ ಹಾಗೂ ಮುಖ್ಯಮಂತ್ರಿ ಸುಖ ಶಿಕ್ಷಾ ಯೋಜನೆಗೆ ಹಣ ಹೊಂದಿಸುವಂತೆ ದೇವಸ್ಥಾನಗಳಿಗೆ ಪತ್ರ ಬರೆದಿದೆ. ದೇವಸ್ಥಾನದ ಟ್ರಸ್ಟ್ ಸರ್ಕಾರದ ಯೋಜನೆಗಳಿಗೆ ದೇಣಿಗೆ ನೀಡುವಂತೆ ಸುತ್ತೋಲೆಯಲ್ಲಿ ಸೂಚಿಸಿದೆ.

 

ಸರ್ಕಾರದ ಅಧೀನದಲ್ಲಿರುವ ಹಿಂದೂ ದೇವಸ್ಥಾನಗಳು ಕಡ್ಡಾಯವಾಗಿ ದೇಣಿಗೆ ನೀಡುವಂತೆ ಸೂಚಿಸಲಾಗಿದೆ. ಇದು ಹಿಮಾಚಲ ಪ್ರದೇಶದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಹಿಮಾಚಲ ಪ್ರದೇಶದ ವಿಪಕ್ಷ ಹಾಗೂ ಬಿಜೆಪಿ ಈ ನಡೆಯನ್ನು ಖಂಡಿಸಿದೆ. ಹಿಮಾಚಲ ಪ್ರದೇಶದಲ್ಲಿ ಇದುವರೆಗೆ ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ದೇವಸ್ಥಾನದ ಟ್ರಸ್ಟ್‌ನಿಂದ ಹಣ ಪಡೆಯುವ ಪದ್ಧತಿ ಇರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಸರ್ಕಾರ ದೇವಸ್ಥಾನದ ಹುಂಡಿಗೆ ಕೈಹಾಕಿದೆ. ಉಚಿತ ಗ್ಯಾರೆಂಟಿಯಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ಸಾಲ ವಿಪರೀತವಾಗಿದೆ. ಇದೀಗ ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂ ದೇವಸ್ಥಾನಗಳ ಮೇಲೆ ಕಣ್ಣಿಟ್ಟಿದೆ. ಇದಕ್ಕೆ ಮುಖ್ಯಮಂತ್ರಿ ಸುಖ ಆಶ್ರಯ ಹಾಗೂ ಸುಖ ಶಿಕ್ಷಣ ಹೆಸರಿನಡಿ ವಸೂಲಿ ಮಾಡಲಾಗುತ್ತಿದೆ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.

ಈ ಕುರಿತು ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಜೈರಾಮ ಠಾಕೂರ್, ಆತಂಕ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಹೊರಡಿಸುವ ಸುತ್ತೋಲೆಯಲ್ಲಿ, ಲಭ್ಯವಿರುವ ಎಲ್ಲಾ ಆರ್ಥಿಕ ಸಂಪನ್ಮೂಲ ಕ್ರೋಢಿಕರಿಸಲು ಖಡಕ್ ವಾರ್ನಿಂಗ್ ನೀಡಿದೆ. ದೇವಸ್ಥಾನ ಟ್ರಸ್ಟ್‌ಗಳಲ್ಲಿರುವ ಎಲ್ಲಾ ಹಣವನ್ನು ಸರ್ಕಾರಕ್ಕೆ ನೀಡಲು ಸೂಚಿಸಿದೆ ಎಂದು ಜೈರಾಮ್ ಠಾಕೂರ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರು, ಅಧ್ಯಕ್ಷರು ಸೇರಿದಂತೆ ಹಲವರು ಹಿಂದೂ ಧರ್ಮವನ್ನು ಅವಮಾನಿಸುತ್ತಾರೆ. ಸನಾತನ ಧರ್ಮವನ್ನು ಅಪಮಾನಿಸುತ್ತಾರೆ. ಮತ್ತೊಂದೆಡೆಯಿಂದ ಹಿಂದೂ ದೇವಸ್ಥಾನಗಳ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಜೈರಾಮ್ ಠಾಕೂರ್ ಆರೋಪಿಸಿದ್ದಾರೆ. ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ ತನ್ನ ಉಚಿತ ಗ್ಯಾರೆಂಟಿ ಯೋಜನೆಗಳಿಂದ ಸಾಲದಲ್ಲಿ ಮುಳುಗಿದೆ. ಇದಕ್ಕಾಗಿ ಹಿಂದೂ ಮಂದಿರದ ಮೇಲೆ ದಾಳಿ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್