Elections 2022 Result ಸಂಪುಟ ಬದಲಾವಣೆ ಖಚಿತ, ಪಂಚ ರಾಜ್ಯ ಫಲಿತಾಂಶ ಬೆನ್ನಲ್ಲೇ ಕಟೀಲ್ ಸ್ಪಷ್ಟನೆ!

Published : Mar 10, 2022, 01:42 PM ISTUpdated : Mar 10, 2022, 01:51 PM IST
Elections 2022 Result ಸಂಪುಟ ಬದಲಾವಣೆ ಖಚಿತ, ಪಂಚ ರಾಜ್ಯ ಫಲಿತಾಂಶ ಬೆನ್ನಲ್ಲೇ ಕಟೀಲ್ ಸ್ಪಷ್ಟನೆ!

ಸಾರಾಂಶ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ ಕಟೀಲ್ ರಾಜ್ಯ ಸಂಪುಟ ಬದಲಾವಣೆ ಸಾಧ್ಯತೆ ಸುಳಿವು ನೀಡಿದ ನಳೀನ್ ಕುಮಾರ್ ಕಟೀಲ್ 5 ರಾಜ್ಯಗಳಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು

ಬೆಂಗಳೂರು(ಮಾ.10): ಪಂಚ ರಾಜ್ಯ ಚುನಾವಣೆ ಫಲಿತಾಂಶ ಅಧಿಕೃತ ಘೋಷಣೆ ಬೆನ್ನಲ್ಲೇ ಬಿಜೆಪಿ ಸಂಭ್ರಮಾಚರಣೆ ಜೋರಾಗಿದೆ. ಪಂಜಾಬ್ ಹೊರತು ಪಡಿಸಿ ಇನ್ನುಳಿದ ನಾಲ್ಕು ರಾಜ್ಯಗಳಾದ ಉತ್ತರ ಪ್ರದೇಶ, ಮಣಿಪುರ, ಉತ್ತರಖಂಡ ಹಾಗೂ ಗೋವಾದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಪಡೆದುಕೊಂಡಿದ್ದು, ಸರ್ಕಾರ ರಚಿಸುತ್ತ ದಾಪುಗಾಲಿಟ್ಟಿದೆ. ಈ ಫಲಿತಾಂಶ ಕರ್ನಾಟಕ ಬಿಜೆಪಿ ಸಂಪುಟದಲ್ಲೂ ಪರಿಣಾಮ ಬೀರಲಿದೆ ಅನ್ನೋ ಮಾತನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಕೇಸರಿ ಪತಾಕೆ ಹಾರಾಡಿದೆ. ಈ ಫಲಿತಾಂಶ ರಾಜ್ಯದಲ್ಲಿ ಸಂಪುಟ ಬದಲಾವಣೆಗೆ ಕಾರಣವಾಗಲಿದೆಯಾ ಅನ್ನೋ ಪ್ರಶ್ನೆಗೆ ನಳೀನ್ ಕುಮಾರ್ ಕಟೀಲ್ ಉತ್ತರಿಸಿದ್ದಾರೆ. ರಾಜ್ಯ ಸಂಪುಟದಲ್ಲಿ ಕೆಲ ಬದಲಾವಣೆ ಖಚಿತ. ಇದರಿಂದ ಅಭಿವೃದ್ಧಿ ಕಾರ್ಯ ಮತ್ತಷ್ಟು ಚುರುಕು ಪಡೆಯಲಿದೆ.ಆದರೆ ನಾಯಕತ್ವ ಬದಲಾವಣೆ ಇಲ್ಲ ಎಂದು ಕಟೀಲ್ ಸ್ಪಷ್ಪಪಡಿಸಿದ್ದಾರೆ.

Assembly Elections 2022 Result: 4 ರಾಜ್ಯಗಳಲ್ಲಿ ಮತ್ತೆ ಬಿಜೆಪಿ, ಪಂಜಾಬ್‌ನಲ್ಲಿ ಆಮ್‌ ಆದ್ಮಿ

ಮುಂಬರವು ಕರ್ನಾಟಕ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಕರ್ನಾಟಕ ಸಂಪುಟದಲ್ಲಿ ಕೆಲ ಬದಲಾವಣೆ ಮಾಡಲು ಕೇಂದ್ರ ಹೈಕಮಾಂಡ್ ನಿರ್ಧರಿಸಿದ್ದಾರೆ ಅನ್ನೋ ಮಾತುಗಳು ಫಲಿತಾಂಶಕ್ಕೂ ಮೊದಲೇ ಕೇಳಿಬರುತ್ತಿತ್ತು. ಇದೀಗ ಈ ಮಾತು ನಿಜವಾಗುತ್ತಿದೆ. ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಸಂಪುಟದಲ್ಲಿ ಸರ್ಜರಿ ಮಾಡಲು ಕೇಂದ್ರ ನಾಯಕರು ಆಸಕ್ತಿ ತೋರಿದ್ದಾರೆ. 

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವೇಳೆ ಎದ್ದಿದ್ದ ಆತಂಕ ಇದೀಗ ದೂರವಾಗಿದೆ. ಬಿಎಸ್ ಯಡಿಯೂರಪ್ಪ ಬದಲು ಸಿಎಂ ಆಗಿ ಬಸವರಾಜ್ ಬೊಮ್ಮಾಯಿಯನ್ನು ನೇಮಕ ಮಾಡಿದೆ. ಬೊಮ್ಮಾಯಿ ಆಡಳಿತ ರಾಜ್ಯದಲ್ಲಿ ಹೊಸ ಅಧ್ಯಾಯ ಬರೆಯುತ್ತಿದೆ. ಇತ್ತ ಉತ್ತರಖಂಡದಲ್ಲಿ ಅತ್ಯಲ್ಪ ಅವಧಿಯಲ್ಲಿ 3 ಮುಖ್ಯಮಂತ್ರಿಯನ್ನು ಬದಲಾಯಿಸಿದರು ಮತ್ತೆ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಉತ್ತರಖಂಡ ಫಲಿತಾಂಶ  ಹೈಕಮಾಂಡ್ ಹಾಗೂ ಕರ್ನಾಟಕ ಪಾಲಿಗೆ ವರವಾಗಿದೆ.

ಬುಲ್ಡೋಜರ್' ಎದುರು ಪಂಕ್ಚರ್ ಆದ 'ಸೈಕಲ್': ಅಖಿಲೇಶ್‌ಗೆ ಮುಳುವಾಗಿದ್ದು ಇದೇ ವಿಚಾರ

ಕೆಲ ನಾಯಕರಿಗೆ ಪಕ್ಷ ಸಂಘಟನೆ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ಹೀಗಾಗಿ ಸಂಪುಟದಲ್ಲಿ ಬದಲಾವಣೆ ಆಗಲಿದೆ. ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಚರ್ಚೆಗಳಾಗುತ್ತಿದೆ. ಒಟ್ಟಿನಲ್ಲಿ ರಾಜ್ಯ ಸಂಪುಟದಲ್ಲಿ ಬದಲಾವಣೆ ಖಚಿತ ಅನ್ನೋ ಮಾತನ್ನು ರಾಜ್ಯಾಧ್ಯಕ್ಷರೇ ಸ್ಪಷ್ಟಪಡಿಸಿದ್ದಾರೆ. ಆದರೆ ಸದ್ಯ ಕರ್ನಾಟಕ ಬಜೆಟ್ ಅಧಿವೇಶನ ನಡೆಯುತ್ತಿರುವ ಕಾರಣ ತಕ್ಷಣದಲ್ಲಿ ಯಾವುದೇ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ. 

ಬದಲಾವಣೆ ಕುರಿತು ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ
ಪಂಚ ರಾಜ್ಯ ಚುನಾವಣೆ ಫಲಿತಾಂಶ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದು ಅಭಿವೃದ್ಧಿಗೆ ಸಿಕ್ಕ ಗೆಲುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಜನಪರ ಆಡಳಿತಕ್ಕೆ ಈ ಫಲಿತಾಂಶ ಬಂದಿದೆ. ಈ ಫಲಿತಾಂಶದಿಂದ ಕರ್ನಾಟಕ ಸಂಪುಟದಲ್ಲಿ ಬದಲಾವಣೆಯಾಗುತ್ತಾ ಅನ್ನೋದು ಕೇಂದ್ರ ನಾಯಕರು ನಿರ್ಧರಿಸುತ್ತಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಕರ್ನಾಟಕದ ಮೇಲೆ ಪರಿಣಾಮ ಬೀರಲಿದೆ ಅನ್ನೋದು ಸ್ಪಷ್ಟ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಗೆಲುವು ಕರ್ನಾಟಕ ಬಿಜೆಪಿ ಕಾರ್ಯಕರ್ತರಿಗೆ ಹೊಸ ಶಕ್ತಿ ತುಂಬಲಿದೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಸಹಕಾರಿಯಾಗಲಿದೆ ಎಂು ಯಡಿಯೂರಪ್ಪ ಹೇಳಿದ್ದಾರೆ.

ಬಿ.ಎಸ್‌.ಯಡಿಯೂರಪ್ಪ ಅವರು ಹಾಕಿದ ಕಣ್ಣೀರಿನಲ್ಲಿ ಬಿಜೆಪಿ ಕೊಚ್ಚಿಕೊಂಡು ಹೋಗುತ್ತದೆ ಎಂಬ ಡಿಕೆಶಿ ಹೇಳಿಕೆಗೆ ತೀಕ್ಷ$್ಣ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌, ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಮಾಡಲಿಲ್ಲ ಎಂಬ ನೋವಿನಲ್ಲಿ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌ ಅವರು ಹಾಕಿದ ಕಣ್ಣೀರಿನಿಂದ ಕಾಂಗ್ರೆಸ್‌ ಪಕ್ಷ ಸರ್ವನಾಶವಾಗಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್