Election ಗುವಾಹಟಿ ಪಾಲಿಕೆ ಚುನಾವೆ, 60 ಸ್ಥಾನ ಪೈಕಿ 58ರಲ್ಲಿ ಗೆದ್ದು ಬಿಜೆಪಿ ಕೂಟ ದಾಖಲೆ!

By Kannadaprabha News  |  First Published Apr 25, 2022, 5:15 AM IST

- 60 ಸ್ಥಾನಗಳ ಪೈಕಿ 58 ಸ್ಥಾನ ಬಿಜೆಪಿ ಕೂಟದ ಪಾಲು
- ಅಸ್ಸಾಂನಲ್ಲಿ ದಾಖಲೆ ಬರೆದ ಬಿಜೆಪಿ ಮೈತ್ರಿ
- 55 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಶೂನ್ಯ


ಗುವಾಹಟಿ(ಏ.25): ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 60 ಸ್ಥಾನಗಳಲ್ಲಿ 58 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮೈತ್ರಿಕೂಟ ಭಾರಿ ಜಯ ಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಪಾಲಿಕೆಯ 75 ವರ್ಷ ಇತಿಹಾಸದಲ್ಲಿ ಪಕ್ಷವೊಂದಕ್ಕೆ ಇಷ್ಟೊಂದು ಭಾರಿ ಬಹುಮತ ಬಂದಿದ್ದು ಇದೇ ಮೊದಲು.

ಬಿಜೆಪಿ 52 ಸ್ಥಾನಗಳಲ್ಲಿ ಜಯಗಳಿಸಿದರೆ, ಮಿತ್ರಪಕ್ಷ ಅಸ್ಸಾಂ ಗಣ ಪರಿಷತ್‌ 6 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಆಮ್‌ ಆದ್ಮಿ ಪಕ್ಷ ಮೊದಲ ಬಾರಿಗೆ ಖಾತೆ ತೆರೆದಿದೆ. 55 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಒಂದೇ ಒಂದು ಸ್ಥಾನವನ್ನು ಗೆಲ್ಲುವಲ್ಲೂ ವಿಫಲಗೊಂಡಿದೆ.

Tap to resize

Latest Videos

ಅಸ್ಸಾಂನ ಹಲವು ಜಿಲ್ಲೆಗಳಲ್ಲೂ ಹಿಂದೂಗಳು ಅಲ್ಪಸಂಖ್ಯಾತರು

ಗುವಾಹಟಿಯಲ್ಲಿ 9 ತಿಂಗಳ ನಂತರ ಪಾಲಿಕೆ ಚುನಾವಣೆ ನಡೆದಿತ್ತು.
‘ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದ್ದಕ್ಕೆ ಜನರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿಗೆ ಸಿಕ್ಕ ಗೆಲುವು’ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ಪಾಲಿಕೆ ಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಕೋರಿದ್ದಾರೆ. ಗೆಲುವಿಗೆ ಶ್ರಮಿಸಿದ ಎಲ್ಲರಿಗೆ ಧನ್ಯವಾದ ಹೇಳಿದ್ದಾರೆ.

ಸಂಗೀತ ವಾದ್ಯ ನುಡಿಸುವ ಮೂಲಕ ಅಸ್ಸಾಂ ರೊಂಗಾಲಿ ಬಿಹು ಆಚರಿಸಿದ ಮೋದಿ!

ಅಸ್ಸಾಂ ಪೌರಾಡಳಿತ ಚುನಾವಣೆ: 80ರ ಪೈಕಿ 73ರಲ್ಲಿ ಬಿಜೆಪಿ ಜಯಭೇರಿ
ಅಸ್ಸಾಂನ 80 ಪೌರಾಡಳಿತ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 73ರಲ್ಲಿ ಜಯಗಳಿಸಿದೆ. ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌ ಒಂದೇ ಒಂದೂ ಸಂಸ್ಥೆಯನ್ನು ಗೆಲ್ಲುವಲ್ಲಿ ವಿಫಲವಾಗಿದೆ.ಚುನಾವಣೆಯಲ್ಲಿ ಒಟ್ಟು 672 ವಾರ್ಡ್‌ಗಳಲ್ಲಿ ಬಿಜೆಪಿ ಜಯಗಳಿಸಿದೆ. ಕಾಂಗ್ರೆಸ್‌ 71ರಲ್ಲಿ ಹಾಗೂ ಉಳಿದ ಪಕ್ಷಗಳು 149 ವಾರ್ಡ್‌ಗಳಲ್ಲಿ ಜಯಗಳಿಸಿದೆ.

ಫಲಿತಾಂಶದ ನಂತರ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ‘ಈ ಗೆಲುವಿಗಾಗಿ ನಾನು ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನರೇಂದ್ರ ಮೋದಿ ಅವರ ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ಅರ್ಥ ಮಾಡಿಸುವಲ್ಲಿ ಬಿಜೆಪಿಯ ನಾಯಕರು, ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ. ಬಿಜೆಪಿಯನ್ನು ಗೆಲ್ಲಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ’ ಎಂದು ಹೇಳಿದ್ದಾರೆ.

Historic Agreement ಏನಿದು 50 ವರ್ಷ ಹಳೆಯ ಅಸ್ಸಾಂ ಮೇಘಾಲಯ ಗಡಿ ವಿವಾದ?

ಕಾಂಗ್ರೆಸ್‌ಗೆ ಮತ್ತೆ ಶಾಕ್‌: ಅಸ್ಸಾಂನ ಬೋರಾ ಟಿಎಂಸಿಗೆ
ಕಾಂಗ್ರೆಸ್‌ ಸಂಕಷ್ಟದಿನೇ ದಿನೇ ಹೆಚ್ಚಾಗುತ್ತಿದ್ದು, ಭಾನುವಾರ ಮತ್ತೊಬ್ಬ ಕಾಂಗ್ರೆಸ್‌ ನಾಯಕ ಪಕ್ಷ ತೊರೆದಿದ್ದಾರೆ. ಅಸ್ಸಾಂ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ, ರಾಜ್ಯಸಭಾ ಸಂಸದ ರಿಪುನ್‌ ಬೋರಾ ಅವರು ಭಾನುವಾರ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದು, ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೋಲ್ಕತಾದಲ್ಲಿ ಟಿಎಂಸಿ ನಾಯಕ ಅಭಿಷೇಕ್‌ ಬ್ಯಾನರ್ಜಿ ಅವರು ಬೋರಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಈ ನಡುವೆ, ಬೋರಾ ಮಾತನಾಡಿ, ‘ಕಾಂಗ್ರೆಸ್ಸಿಗರು ಬಿಜೆಪಿ ವಿರುದ್ಧ ಹೋರಾಡುವುದನ್ನು ಬಿಟ್ಟು ತಮ್ಮ ತಮ್ಮ ನಡುವೆಯೇ ಹೊಡೆದಾಡುತ್ತಿದ್ದಾರೆ’ ಎಂದು ಕಿಡಿಕಾರಿದರು.

ಇತ್ತೀಚಿಗೆ ಕಾಂಗ್ರೆಸ್‌ನ ಹಲವು ನಾಯಕರು ಪಕ್ಷ ತೊರೆದಿದ್ದಾರೆ. ಪಶ್ಚಿಮ ಬಂಗಾಳದ ಕಾಂಗ್ರೆಸ್‌ ನಾಯಕಿ, ರಾಜ್ಯಸಭಾ ಸಂಸದೆ ಸುಶ್ಮಿತಾ ದೇವ್‌ ಕಾಂಗ್ರೆಸ್‌ ತೊರೆದು ಟಿಎಂಸಿ ಸೇರ್ಪಡೆಯಾಗಿದ್ದರು. ಇನ್ನು ಜ್ಯೋತಿರಾದಿತ್ಯ ಸಿಂಧಿಯಾ, ಆರ್‌ಪಿಎನ್‌ ಸಿಂಗ್‌ ಹಾಗೂ ಜಿತಿನ್‌ ಪ್ರಸಾದ ಬಿಜೆಪಿ ಸೇರಿದ್ದರು. ಪಕ್ಷಕ್ಕೆ ಮಾಜಿ ಕೇಂದ್ರ ಸಚಿವ ಅಶ್ವನಿ ಕುಮಾರ್‌ ಕೂಡ ರಾಜೀನಾಮೆ ನೀಡಿದ್ದರು.
 

click me!