ಏಕಾಂಗಿ ಸ್ಪರ್ಧೆ: ಬಿಜೆಪಿಯಿಂದ ಮಹತ್ವದ ಘೋಷಣೆ!

Published : Nov 17, 2020, 12:34 PM ISTUpdated : Nov 17, 2020, 12:49 PM IST
ಏಕಾಂಗಿ ಸ್ಪರ್ಧೆ: ಬಿಜೆಪಿಯಿಂದ ಮಹತ್ವದ ಘೋಷಣೆ!

ಸಾರಾಂಶ

ಪಂಜಾಬ್‌ನಲ್ಲಿ 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಸಂಬಂಧ ಬಿಜೆಪಿ ಮಹತ್ವದ ಘೋಷಣೆ| ಏಕಾಂಗಿಯಾಗಿ ಸ್ಪರ್ಧಿಸುತ್ತೇವೆಂದ ಬಿಜೆಪಿ| 

ಪಂಜಾಬ್(ನ.17): ಪಂಜಾಬ್‌ನಲ್ಲಿ 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 117 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದೆ. ಇತ್ತೀಚೆಗಷ್ಟೇ ಎನ್‌ಡಿಎ ಬಿಜೆಪಿಯ ಅತಿ ಹಳೆಯ ಮೈತ್ರಿ ಪಕ್ಷ ಶಿರೋಮಣಿ ಅಕಾಲಿ ದಳ ಸಂಬಂಧ ಕಡಿದುಕೊಂಡಿತ್ತು.

ಹೀಗಿರುವಾಗಲೇ ಈಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಪಂಜಾಬ್‌ನಲ್ಲಿ ಇನ್ನೆರಡು ವರ್ಷದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಏಕಾಂಗಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಸಿದ್ಧತೆ ಆರಂಭಿಸಿರುವುದಾಗಿ ಹೇಳಿದ್ದಾರೆ.''

ಅಂತೂ ಇಂತೂ ಫೈನಲ್? : ರಾಜ್ಯದಲ್ಲಿ ಶಾಲೆ ಆರಂಭ ಯಾವಾಗ..?

ನವೆಂಬರ್ 19 ರಂದು ಹತ್ತು ಜಿಲ್ಲೆಗಳಲ್ಲಿ ಪಕ್ಷದ ಕಚೇರಿ ಉದ್ಘಾಟಿಸಲಿದ್ದಾರೆ ಜೆ. ಪಿ. ನಡ್ಡಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ವರ್ಚುವಲ್ ಕಾರ್ಯಕ್ರಮದ ಮೂಲಕ ನವೆಂಬರ್ 19 ರಂದು ಹತ್ತು ಜಿಲ್ಲೆಗಳಲ್ಲಿ ಪಕ್ಷದ ಕಚೇರಿಯನ್ನೂ ಉದ್ಘಾಟಿಸಲಿದ್ದಾರೆಂದು ತರುಣ್ ತಿಳಿಸಿದ್ದಾರೆ.

ಭರ್ಜರಿ ಕಾರ್ಯಾಚರಣೆ; 200 ಕೋಟಿ ಮೌಲ್ಯದ ಡ್ರಗ್ಸ್ ವಶ!

ಕೃಷಿ ಮಸೂದೆ ವಿರೋದಿಸಿ ಮೈತ್ರಿ ಕಡಿದುಕೊಂಡಿದ್ದ ಶಿರೋಮಣಿ ಅಕಾಲಿ ದಳ

ಇದಕ್ಕೂ ಮೊದಲು ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಕೃಷಿಗೆ ಸಂಬಂಧಿಸಿ ಮೂರು ಬಿಲ್ ಪಾಸ್ ಮಾಡಿತ್ತು. ಇದನ್ನು ವಿರೋಧ ಪಕ್ಷ ಸೇರಿ ಅಕಾಲಿ ದಳವೂ ವಿರೋಧಿಸಿತ್ತು. ಅಲ್ಲದೇ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಹಾಗೂ 1992ರಿಂದ ನಡೆದು ಬಂದಿದ್ದ ಮೈತ್ರಿ ಕಡಿದುಕೊಂಡಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೆಹಬೂಬಾ...ಹಾಡಿಗೆ ನೃತ್ಯದ ವೇಳೆ ಗೋವಾ ಪಬ್‌ ದುರಂತ!
₹500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ : ಸಿಧು ಪತ್ನಿ ಆರೋಪ