
ನವದೆಹಲಿ[ಫೆ.09]: 1990ರ ಆದಿಯಲ್ಲಿ ಇಸ್ಲಾಮಿ ದಂಗೆಕೋರರು ಕಾಶ್ಮೀರ ಪಂಡಿತರನ್ನು ಕಣಿವೆಯಿಂದ ಓಡಿಸುವ ಕತೆಯುಳ್ಳ, ವಿಧು ವಿನೋದ್ ಚೋಪ್ರಾ ನಿರ್ದೇಶನದ ‘ಶಿಕಾರ; ದಿ ಅನ್‌ಟೋಲ್ಡ್ ಸ್ಟೋರಿ ಆಫ್ ಕಾಶ್ಮೀರಿ ಪಂಡಿತ್ಸ್’ ಚಿತ್ರವನ್ನು ನೋಡಿ, ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಕಣ್ಣೀರಿಟ್ಟಿದ್ದಾರೆ.
ಚಿತ್ರ ಮುಗಿಯುತ್ತಿದ್ದಂತೆ ಕಣ್ಣೀರಿಡುವ ಅಡ್ವಾಣಿ ಅವರ ಮುಂದೆ ಮಂಡಿಯೂರಿ ಕುಳಿತು ಚೋಪ್ರಾ ಸಂತೈಸುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಕಾಶ್ಮೀರಿ ಪಂಡಿತರ ವಲಸೆಯನ್ನು ಶಿವಕುಮಾರ್ ಧರ್ ಹಾಗೂ ಅವರ ಪತ್ನಿ ಶಾಂತಿ ಎಂಬ ಕಾಲ್ಪನಿಕ ಪಾತ್ರಗಳ ಮೂಲಕ ಚಿತ್ರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ