
Shashi Tharoor leads US delegation expose Pakistan: ಪಾಕಿಸ್ತಾನದ ಉಗ್ರ ಮುಖವಾಡ ಬಯಲು ಹೊರಟಿರುವ ಕೇಂದ್ರ ಸರ್ಕಾರದ ನಿಯೋಗಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ಆಯ್ಕೆ ಮಾಡಿದ ವಿಷಯವು ಇದೀಗ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ. ಜೊತೆಗೆ ಕಾಂಗ್ರೆಸ್‌ನೊಳಗೂ ದೊಡ್ಡ ಆಕ್ರೋಶಕ್ಕೆ ನಾಂದಿ ಹಾಡಿದೆ.
ತಾನು ತರೂರ್ ಹೆಸರು ಶಿಫಾರಸು ಮಾಡದೇ ಇದ್ದರೂ ಅವರನ್ನು ಆಯ್ಕೆ ಮಾಡಿದ ಕೇಂದ್ರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ‘ಮೋದಿ ಸರ್ಕಾರ ರಾಜಕೀಯದ ಆಟ ಆಡುತ್ತಿದೆ’ ಎಂದಿದೆ. ಆದರೆ ‘ಇದು ನನಗೆ ಗೌರವದ ಸಂಗತಿ. ರಾಷ್ಟ್ರೀಯ ಹಿತಾಸಕ್ತಿ ವಿಷಯದಲ್ಲಿ ನನ್ನ ಸೇವೆ ಅಗತ್ಯವಿದ್ದಾಗ, ನಾನು ಅದಕ್ಕೆ ಅರ್ಹನಾಗಿದ್ದೇನೆ. ನನ್ನ ಆಯ್ಕೆಯಲ್ಲಿ ರಾಜಕೀಯ ಏನೂ ಇಲ್ಲ ಎನ್ನುವ ಮೂಲಕ ಕಾಂಗ್ರೆಸ್ ತರೂರ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್‌ಗೆ ಶಾಕ್:
ವಿದೇಶಕ್ಕೆ ಕಳುಹಿಸುವ ನಿಯೋಗಕ್ಕೆ ನಿಮ್ಮ ನಿಮ್ಮ ಪಕ್ಷದಿಂದ ಸಂಸದರ ಹೆಸರು ಸೂಚಿಸಿ ಎಂದು ಕೇಂದ್ರ ಸರ್ಕಾರ ಎಲ್ಲಾ ಪಕ್ಷಗಳಿಗೆ ಸೂಚಿಸಿತ್ತು. ಅದರಂತೆ ಆನಂದ್ ಶರ್ಮಾ, ಗೌರವ್ ಗೊಗೋಯ್, ನಾಸಿರ್ ಹುಸೇನ್ ಮತ್ತು ಅಮರಿಂದರ್ ಸಿಂಗ್ ರಾಜಾ ಹೆಸರನ್ನು ಕಾಂಗ್ರೆಸ್ ಸೂಚಿಸಿತ್ತು. ಆದರೆ ಈ ನಾಲ್ವರ ಪೈಕಿ ಯಾರನ್ನೂ ತಂಡದ ನೇತೃತ್ವಕ್ಕೆ ಆಯ್ಕೆ ಮಾಡಲು ನಿರಾಕರಿಸಿದ ಕೇಂದ್ರ ಸರ್ಕಾರ, ಈ ಹಿಂದೆ ವಿಶ್ವಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ, ವಿದೇಶಾಂಗ ವ್ಯವಹಾರ ಸಚಿವರಾಗಿದ್ದ, ಅದ್ಭುತ ಮಾತುಗಾರರಾಗಿರುವ ಶಶಿ ತರೂರ್ ಅವರನ್ನು ಆಯ್ಕೆ ಮಾಡಿದೆ.
ಇದನ್ನೂ ಓದಿ: ಭಾರತೀಯನಾಗಿ ಸಿಂದೂರಕ್ಕೆ ನನ್ನ ಬೆಂಬಲ: ಕಾಂಗ್ರೆಸ್‌ಗೆ ತರೂರ್ ತಿರುಗೇಟು
ಕಾಂಗ್ರೆಸ್ ಆಕ್ರೋಶ:
ತರೂರ್ ಆಯ್ಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ನಾವು ಕಳುಹಿಸಿರುವ ಹೆಸರನ್ನು ಬಿಟ್ಟು ಬೇರೆ ಹೆಸರನ್ನು ಸರ್ಕಾರ ನಿಯೋಗಕ್ಕೆ ಆಯ್ಕೆ ಮಾಡಿದೆ. ಈ ಮೂಲಕ ಈ ಮೂಲಕ ಸರ್ಕಾರ ನಾರದ ಮುನಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದೆ. ಜೊತೆಗೆ ಇದೇ ವೇಳೆ ಶಶಿತರೂರ್ ಅವರ ಹೆಸರೆತ್ತದೆ ಕಾಲಳೆದಿರುವ ಪಕ್ಷದ ಹಿರಿಯ ನಾಯಕ ಜೈರಾಂ ರಮೇಶ್, ‘ಕಾಂಗ್ರೆಸ್‌ನಲ್ಲಿ ಇರುವುದಕ್ಕೂ ಕಾಂಗ್ರೆಸ್‌ನವರಾಗಿರುವುದಕ್ಕೂ ಭೂಮಿ-ಆಕಾಶದ ಅಂತರವಿದೆ’ ಎಂದು ಸರ್ಕಾರದ ಆಹ್ವಾನ ಒಪ್ಪಿಕೊಂಡ ತರೂರ್ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ವ್ಯಂಗ್ಯ:
ಈ ನಡುವೆ ಜೈರಾಂ ರಮೇಶ್ ಟೀಕೆಗೆ ಬಿಜೆಪಿ ಮುಖಂಡ ಅಮಿತ್ ಮಾಳವೀಯ, ‘ಶಶಿ ತರೂರ್ ವಾಕ್ಪಟುತ್ವದ ಕುರಿತು ಯಾರೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ. ವಿಶ್ವಸಂಸ್ಥೆಯ ಅಧಿಕಾರಿಯಾಗಿ, ವಿದೇಶಾಂಗ ನೀತಿಯ ಆಳವಾದ ಜ್ಞಾನ ಹೊಂದಿರುವ ಅವರನ್ನು ಯಾಕೆ ಕಾಂಗ್ರೆಸ್ ಪಕ್ಷ ಸರ್ವಪಕ್ಷಗಳ ನಿಯೋಗಕ್ಕೆ ಆಯ್ಕೆ ಮಾಡಿಲ್ಲ? ಇದಕ್ಕೆ ಅಭದ್ರತೆ, ಅಸೂಯೆ ಕಾರಣವೇ?’ ಎಂದು ಕಾಲೆಳೆದಿದ್ದಾರೆ.
ಗೌರವದ ಸಂಗತಿ- ತರೂರ್:
ಈ ನಡುವೆ ತಮ್ಮ ಆಯ್ಕೆ ಬಗ್ಗೆ ಪ್ರತಿಕ್ರಿಯಿಸಿರುವ ತರೂರ್, ‘ಇದು ನನಗೆ ಗೌರವದ ಸಂಗತಿ. ರಾಷ್ಟ್ರೀಯ ಹಿತಾಸಕ್ತಿ ವಿಷಯದಲ್ಲಿ ನನ್ನ ಸೇವೆ ಅಗತ್ಯವಿದ್ದಾಗ, ನಾನು ಅದಕ್ಕೆ ಅರ್ಹನಾಗಿದ್ದೇನೆ. ಭಾರತದಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ ಮತ್ತು ಪಾಕಿಸ್ತಾನವು ತನ್ನ ನೆಲದಲ್ಲಿ ಉಗ್ರವಾದವನ್ನು ಪೋಷಿಸುತ್ತಿದೆ ಎಂದು ನಾವು ಅಂತಾರಾಷ್ಟ್ರೀಯ ಸಮುದಾಯಕ್ಕೆ ತಿಳಿಸುತ್ತೇವೆ. ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳಿಗೆ ಬಂದಾಗ, ಯಾವುದೇ ವಿಭಜನೆ ಇಲ್ಲ. ಕೇವಲ ಕರ್ತವ್ಯ ಮುಖ್ಯ’ ಎಂದು ಪೋಸ್ಟ್ ಮಾಡಿದ್ದಾರೆ.
ಆಕ್ರೋಶಕ್ಕೆ ಕಾರಣ ಏನು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ