
ನವದೆಹಲಿ (ಮಾ.13): ತಮಿಳುನಾಡು ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, 10ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಗಳಿಸುವ ವಿಶ್ವಾಸವಿದೆ ಎಂದು ತಮಿಳುನಾಡು ಬಿಜೆಪಿ ಉಸ್ತುವಾರಿಯಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಬಿಜೆಪಿ ಟಿಕೆಟ್ ಬಿಡುಗಡೆಯಾಗಲಿದೆ ಎಂದು ತಿಳಿಸಿದರು. ತಮಿಳುನಾಡಿನಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂಬುದು ಸುಳ್ಳಾಗಿದ್ದು ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ.
ಮುಖ್ಯಮಂತ್ರಿ ಇ.ಪಳನಿಸ್ವಾಮಿ ಆಡಳಿತ ಬಗ್ಗೆ ತೃಪ್ತಿ ಇದ್ದು ಅವರ ಕಾಲುಗುಣ ಚೆನ್ನಾಗಿದೆ. ಸರ್ಕಾರ ಕೋವಿಡ್ ನಿರ್ವಹಣೆಯಲ್ಲಿ ಉತ್ತಮ ಸಾಧನೆ ತೋರಿದೆ. ಡಿಎಂಕೆ ಹತ್ತು ವರ್ಷದಿಂದ ಅಧಿಕಾರದಲ್ಲಿದಿರುವುದರಿಂದ ಹತಾಶೆಯಿಂದ ಮಾತನಾಡುವುದು ಸಹಜ ಎಂದು ಅಭಿಪ್ರಾಯಪಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ