ಬಿಜೆಪಿಗೆ ಹೊಸ ಅಧ್ಯಕ್ಷರ ಆಯ್ಕೆ : ಯಾರಿಗೆ ಪಟ್ಟ

Kannadaprabha News   | Asianet News
Published : Jan 20, 2020, 07:33 AM IST
ಬಿಜೆಪಿಗೆ ಹೊಸ ಅಧ್ಯಕ್ಷರ ಆಯ್ಕೆ : ಯಾರಿಗೆ ಪಟ್ಟ

ಸಾರಾಂಶ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಾಲಿ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾದಂತಾಗಿದೆ.

ನವದೆಹಲಿ [ಜ.20]: ಹಾಲಿ ಗೃಹ ಸಚಿವ ಅಮಿತ್ ಶಾ ಅವರು ಐದೂವರೆ ವರ್ಷಗಳಿಂದ ನಿರ್ವಹಿಸಿಕೊಂಡು ಬಂದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಾಲಿ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ಸೋಮವಾರ ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ. ನಡ್ಡಾ ಅವರು ಈ ಹುದ್ದೆಗೆ ನಾಮಪತ್ರ ಸಲ್ಲಿಸುವುದು ಖಚಿತ. ಇನ್ನು ನಡ್ಡಾ ಅವರಲ್ಲದೆ, ಬೇರೆ ಬಿಜೆಪಿ ಮುಖಂಡರೇನಾದರೂ ಈ ಹುದ್ದೆಗೆ ನಾಮಪತ್ರ ಸಲ್ಲಿಸಿದಲ್ಲಿ ಮಂಗಳವಾರ ಚುನಾವಣೆ ನಡೆಯಲಿದೆ. ಆದರೆ ಅನ್ಯರಾರೂ ನಾಮಪತ್ರ ಸಲ್ಲಿಸುವ ಸಾಧ್ಯತೆ ಇಲ್ಲ. ಏಕೆಂದರೆ ಈವರೆಗೆ ಈ ಹುದ್ದೆಗೆ ಚುನಾವಣೆ ನಡೆದಿಲ್ಲ ಸರ್ವಾನುಮತದಿಂದಲೇ ಆಯ್ಕೆಗಳು ನಡೆದಿವೆ. ಹೀಗಾಗಿ ನಡ್ಡಾ ಅವಿರೋಧ ಆಯ್ಕೆ ಖಚಿತವಾಗಿದೆ.

ನಡ್ಡಾ ಅವರಿಗೆ ಬೆಂಬಲ ಸೂಚಿಸಿ ಅವರ ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಪಾಲ್ಗೊಳ್ಳಲು ದೇಶದ ವಿವಿಧ ರಾಜ್ಯಗಳಿಂದ ದಿಲ್ಲಿಗೆ ಬಿಜೆಪಿ ನಾಯಕರು ದೌಡಾಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಹಾಲಿ ಅಧ್ಯಕ್ಷ ಅಮಿತ್ ಶಾ ಅವರ ಆಯ್ಕೆ ನಡ್ಡಾ ಅವರಾಗಿದ್ದಾರೆ.

20 ದಿನದಲ್ಲಿ 5000 ರ‍್ಯಾಲಿಗೆ ಬಿಜೆಪಿ ಮೆಗಾ ಪ್ಲಾನ್!...

ಶಾ ಅವರು ಐದೂವರೆ ವರ್ಷ ಬಿಜೆಪಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಅವಧಿಯಲ್ಲಿ ಬಿಜೆಪಿ ಹಿಂದೆಂದೂ ಕಾಣದಷ್ಟು ಯಶಸ್ಸು ಕಂಡಿದೆ. ಆದರೆ ಇತ್ತೀಚೆಗೆ ಕೆಲವು ರಾಜ್ಯಗಳ ವಿಧಾನಸಭೆ  ಚುನಾವಣೆಯಲ್ಲಿ ಪಕ್ಷ ಸೋತಿದೆ. ಮೋದಿ ಸರ್ಕಾರದ 2ನೇ ಅವಧಿಯಲ್ಲಿ ಶಾ ಅವರು ಗೃಹ ಸಚಿವರಾದ ನಂತರ, ‘ಏಕ ವ್ಯಕ್ತಿ, ಏಕ ಹುದ್ದೆ’ ನೀತಿಯ ಅನುಸಾರ ಅವರು ಬಿಜೆಪಿ ಅಧ್ಯಕ್ಷ ಪದವಿ ತ್ಯಜಿಸುತ್ತಿದ್ದಾರೆ.

ಶಾ ಸಚಿವರಾದ ನಂತರ ಅವರಿಗೆ ಅಧ್ಯಕ್ಷ  ಹುದ್ದೆಯನ್ನೂ ನಿಭಾಯಿಸುವುದು ಕಷ್ಟ ಎಂದು ಕೊಂಡೇ ನಡ್ಡಾ ಅವರನ್ನು ತಾತ್ಕಾಲಿಕವಾಗಿ ಕಾರ್ಯಾಧ್ಯಕ್ಷರನ್ನಾಗಿ ಜುಲೈನಲ್ಲಿ ನೇಮಿಸಲಾಗಿತ್ತು. ನಡ್ಡಾ ಹಿಮಾಚಲ ಪ್ರದೇಶದವರಾಗಿದ್ದು, 2019 ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. 

ಬಿಎಸ್‌ಪಿ-ಎಸ್‌ಪಿ ಮೈತ್ರಿಕೂಟದ ಸವಾಲು ಎದುರಿಸಿದ್ದ ಪಕ್ಷ, ಉತ್ತರಪ್ರದೇಶದ 80 ಲೋಕಸಭಾ ಕ್ಷೇತ್ರಗಳಲ್ಲಿ 62 ರಲ್ಲಿ ಗೆದ್ದಿತ್ತು. ನಡ್ಡಾ ಅವರು ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಸಚಿವರಾಗಿದ್ದರು. ಸಂಸದೀಯ ಮಂಡಳಿ ಸದಸ್ಯರಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೆಹಬೂಬಾ...ಹಾಡಿಗೆ ನೃತ್ಯದ ವೇಳೆ ಗೋವಾ ಪಬ್‌ ದುರಂತ!
₹500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ : ಸಿಧು ಪತ್ನಿ ಆರೋಪ