
ಕಲ್ಲಿಕೋಟೆ: 2019ರ ಚುನಾವಣೆಯ ಫಲಿತಾಂಶವನ್ನು 2024ರಲ್ಲಿ ಮತ್ತೊಮ್ಮೆ ತೋರಲು ಬಿಜೆಪಿಗೆ ಅಸಾಧ್ಯವಾಗಲಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಕಳೆದುಕೊಳ್ಳುವ ಎಲ್ಲಾ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಹೇಳಿದ್ದಾರೆ. ಇಲ್ಲಿ ನಡೆದ ಕೇರಳ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ಕಳೆದ ಚುನಾವಣೆ ವೇಳೆ ನಡೆದ ಪುಲ್ವಾಮ ದಾಳಿ (Pulwama attack) ಮತ್ತು ಬಾಲಕೋಟ್ ದಾಳಿಯ (Balakot attack) ಲಾಭ ಪಡೆದು ಅತಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದರು. ಆದರೆ ಅದು ಈ ಬಾರಿ ಸಾಧ್ಯವಾಗುವುದಿಲ್ಲ. ಬಿಜೆಪಿಯ ಗ್ರಾಫ್ ದೇಶದಲ್ಲಿ ಕುಸಿಯುತ್ತಿದೆ. 2024ರಲ್ಲಿ ಬಿಜೆಪಿ ಬಹುಮತ ಕಳೆದುಕೊಳ್ಳುವ ಸಾಧ್ಯತೆಗಳು ದಟ್ಟವಾಗಿವೆ. ಬಿಜೆಪಿ ಬಹುತೇಕ 50 ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಇದು ಒಟ್ಟಾರೆ ವಿಪಕ್ಷಗಳ ಗಳಿಕೆಯಾಗಲಿದೆ ಎಂದು ಅವರು ಹೇಳಿದರು.
ಕಳೆದ ಸಲ ಗುಜರಾತ್ (Gujarat), ಹರಿಯಾಣ, ರಾಜಸ್ಥಾನದಲ್ಲಿ(Rajasthan) ಎಲ್ಲ ಸೀಟು ಹಾಗೂ ಮಧ್ಯಪ್ರದೇಶ, ಬಿಹಾರ, ಮಹಾರಾಷ್ಟ್ರದಲ್ಲಿ ಬಿಜೆಪಿ ಬಹುತೇಕ ಸೀಟು ಗೆದ್ದಿತ್ತು. ಈ ಬಾರಿ ಇದು ಅಸಾಧ್ಯ ಎಂದು ತರೂರ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ