ಬಂಗಾಳ ಭೇಟಿ ವೇಳೆ ಬಿಜೆಪಿ ಕಾರ‍್ಯಕರ್ತನ ನಿಗೂಢ ಸಾವು: ಅಮಿತ್ ಶಾ ಕಿಡಿ

Published : May 07, 2022, 05:42 AM ISTUpdated : May 07, 2022, 10:55 AM IST
ಬಂಗಾಳ ಭೇಟಿ ವೇಳೆ ಬಿಜೆಪಿ ಕಾರ‍್ಯಕರ್ತನ ನಿಗೂಢ ಸಾವು: ಅಮಿತ್ ಶಾ ಕಿಡಿ

ಸಾರಾಂಶ

-ಪ್ರಕರಣ ಸಿಬಿಐಗೆ ವರ್ಗಾಯಿಸಲು ಶಾ ಆಗ್ರಹ -ಟಿಎಂಸಿಯೇ ಬಿಜೆಪಿ ಕಾರ್ಯಕರ್ತರ ಹತ್ಯೆ ಮಾಡುತ್ತಿದೆ: ಶಾ ಕಿಡಿ -ವಿವಾದ ಸೃಷ್ಟಿಗೆ ಬಿಜೆಪಿಯೇ ಹತ್ಯೆ ನಡೆಸಿದೆ: ಟಿಎಂಸಿ ಶಂಕೆ

ಕೋಲ್ಕತಾ(ಜ.07): ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎರಡು ದಿನಗಳ ಬಂಗಾಳದ ಭೇಟಿಯ ಸಂದರ್ಭದಲ್ಲೇ ಕೋಲ್ಕತಾದ ಕಾಶಿಪುರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಅರ್ಜುನ್‌ ಚೌರಸಿಯಾ ನಿಗೂಢವಾಗಿ ಸಾವನ್ನಪ್ಪಿದ್ದು ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಸಾವಿನ ಪ್ರಕರಣವನ್ನು ತನಿಖೆ ನಡೆಸಲು ಸಿಬಿಐಗೆ ವರ್ಗಾಯಿಸಬೇಕು ಎಂದು ಅಮಿತ್‌ ಶಾ ಆಗ್ರಹಿಸಿದ್ದಾರೆ.

ಶಾ, ಶುಕ್ರವಾರ ಮೃತ ಚೌರಸಿಯಾ ಮನೆಗೆ ಭೇಟಿ ನೀಡಿದ್ದು, ‘ಬಂಗಾಳದಲ್ಲಿ ಹಿಂಸಾಚಾರ ಸಂಸ್ಕೃತಿ ಹಾಗೂ ಭಯದ ಮನೋವಿಕಾರ ಹೆಚ್ಚಾಗಿದೆ. ಟಿಎಂಸಿ ಸರ್ಕಾರ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ನಡೆಸುತ್ತಿದೆ’ ಎಂದು ಕಿಡಿಕಾರಿದ್ದಾರೆ.

‘ಗುರುವಾರ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಮೂರನೇ ಬಾರಿ ಅಧಿಕಾರಾವಧಿಯ ಮೊದಲ ವರ್ಷದ ಸಂಭ್ರಮವನ್ನು ಆಚರಿಸಿಕೊಂಡ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತನ ನಿಗೂಢ ಸಾವು ವರದಿಯಾಗಿದೆ. ಗೃಹ ಸಚಿವಾಲಯವು ಈ ಸಾವನ್ನು ಗಂಭೀರವಾಗಿ ಪರಿಗಣಿಸಲಿದೆ’ ಎಂದು ಶಾ ಭರವಸೆ ನೀಡಿದ್ದಾರೆ. ಈ ಭೀಕರ ಅಪರಾಧ ನಡೆಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ನಡುವೆ ಟಿಎಂಸಿ ಶಾಸಕ ಆಟಿನ್‌ ಘೋಷ್‌ ಕೂಡಾ ಮೃತರ ಮನೆಗೆ ಭೇಟಿ ಕೊಟ್ಟಿದ್ದು, ‘ಚೌರಸಿಯಾ ಟಿಎಂಸಿ ಪರವಾಗಿ ನಗರಪಾಲಿಕೆ ಚುನಾವಣೆಯಲ್ಲಿ ಪ್ರಚಾರ ನಡೆಸಿ ಬಿಜೆಪಿಗರ ಕೋಪಕ್ಕೆ ಕಾರಣವಾಗಿದ್ದ ಎಂದು ಹೇಳಿಕೆ ನೀಡಿದ್ದಾರೆ. ಶಾ ಭೇಟಿಯ ಸಮಯದಲ್ಲಿ ರಾಜ್ಯದಲ್ಲಿ ವಿವಾದ ಸೃಷ್ಟಿಸಲು ಸ್ಥಳೀಯ ಬಿಜೆಪಿ ನಾಯಕರೇ ಹತ್ಯೆಯಲ್ಲಿ ಶಾಮೀಲಾಗಿರಬಹುದು ಎಂದು ಶಂಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಕೆಎಸ್‌ಸಿಎ ಚುನಾವಣೆ - ಅಸ್ತಿತ್ವದಲ್ಲೇ ಇಲ್ಲದ ಕ್ಲಬ್‌ಗಳ ಹೆಸರು ಮತದಾನ ಪಟ್ಟಿಯಲ್ಲಿ ಪತ್ತೆ!
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌