ಕಾಂಗ್ರೆಸ್ ಯಾತ್ರೆಯಲ್ಲಿ ಸಾವರ್ಕರ್‌ಗೆ ಅವಮಾನ, ರಾಹುಲ್ ಗಾಂಧಿ ಪೋಸ್ಟರ್‌ಗೆ ಚಪ್ಪಲಿ ಎಸೆತ!

By Suvarna NewsFirst Published Oct 9, 2022, 5:12 PM IST
Highlights

ಕರ್ನಾಟಕದಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಮತ್ತೆ ವೀರ ಸಾವರ್ಕರ್ ವಿಚಾರ ಮುನ್ನಲೆಗೆ ಬಂದಿದೆ. ಕೇರಳದ ಯಾತ್ರೆಯಲ್ಲೂ ಸಾವರ್ಕರ್ ಚರ್ಚೆಯಾಗಿತ್ತು. ಇದೀಗ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಸಾವರ್ಕರ್‌ಗೆ ಅವಮಾನ ಮಾಡಲಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ರಾಹುಲ್ ಗಾಂಧಿ ವಿರುದ್ಧ ಭಾರಿ ಪ್ರತಿಭಟನೆ ನಡೆಯುತ್ತಿದೆ.

ಬೆಂಗಳೂರು(ಅ.09): ಭಾರತ್ ಜೋಡೋ ಯಾತ್ರೆಯಲ್ಲಿ ಒಂದಲ್ಲಾ ಒಂದು ವಿವಾದ, ಸಮಸ್ಯೆ ಹುಟ್ಟಿಕೊಳ್ಳುತ್ತಲೇ ಇದೆ. ಇದೀಗ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ವಿವಾದ ತಲೆದೋರಿದೆ. ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ, ವೀರ ಸಾವರ್ಕರ್ ವಿರುದ್ದ ಮಾತನಾಡಿದ್ದರು. ಸಾವರ್ಕರ್ ಬ್ರಿಟೀಷರಿಗೆ ನೆರವು ನೀಡಿದ್ದರು. ಇದಕ್ಕಾಗಿ ಹಣ ಪಡೆಯುತ್ತಿದ್ದರು. ಸಾವರ್ಕರ್ ಎಂದಿಗೂ ಸ್ವಾತಂತ್ರ್ಯ ಹೋರಾಟಗಾರನಲ್ಲ ಎಂದು ರಾಹುಲ್ ಹೇಳಿದ್ದರು. ಈ ಹೇಳಿಕೆ ಇದೀಗ ಭಾರಿ ಪ್ರತಿಭಟನೆಗೆ ಕಾರಣವಾಗಿದೆ. ಇದೀಗ ಮುಂಬೈನ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಪೋಸ್ಟರ್‌ಗೆ ಚಪ್ಪಲಿ ಎಸೆದು ಆಕ್ರೋಶ ಹೋರಹಾಕಿದ್ದಾರೆ. ಚಪ್ಪಲಿ ಎಸೆತ ಅಂದೋಲನ ಆರಂಭಿಸಿರುವ ಮುಂಬೈ ಬಿಜೆಪಿ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸಿದ್ದಾರೆ. 

ರಾಹುಲ್ ಗಾಂಧಿ ಸ್ವಾತಂತ್ರ್ಯ ಹೋರಾಟಗಾರನಿಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಈ ಕುರಿತು ಆಕ್ರೋಶ ಹೊರಹಾಕಿರುವ ರಾಮ್ ಕದಮ್, ಪ್ರತಿ ಭಾರಿ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ಸಾವರ್ಕರ್‌ಗೆ ಅವಮಾನ ಮಾಡುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಇಲ್ಲ ಸಲ್ಲದ ಹೇಳಿಕೆ ನೀಡಿ ಜನರ ಭಾವನೆ ಕೆರಳಿಸುತ್ತಿದೆ ಎಂದು ಕದಮ್ ಹೇಳಿದ್ದಾರೆ. ರಾಹುಲ್ ಗಾಂಧಿ ಹೇಳಿಕೆ ಕುರಿತು ಉದ್ಧವ್ ಠಾಕ್ರೆ ಹಾಗೂ ಶಿವಸೇನೆ ನಿಲುವೇನು ಎಂದು ರಾಮ್ ಕದಮ್ ಪ್ರಶ್ನಿಸಿದ್ದಾರೆ. 

 

"ಯಾವ ಸಿಎಂ ಕೂಡ ಬೇಡ ಅನ್ನಲಾರ"; ರಾಜಸ್ಥಾನದಲ್ಲಿ ಅದಾನಿ ಹೂಡಿಕೆ ಬಗ್ಗೆ ರಾಹುಲ್‌ ಪ್ರತಿಕ್ರಿಯೆ

ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಪಾತ್ರ ಏನೂ ಇಲ್ಲ. ಆದರೆ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ ಹೋರಾಡಿದೆ. ಪ್ರಾಣ ತ್ಯಾಗ ಮಾಡಿದೆ. ಬಿಜೆಪಿ ಹೇಳುತ್ತಿರುವ ವೀರ ಸಾವರ್ಕರ್ ಬ್ರಿಟಿಷರಿಗೆ ನೆರವು ನೀಡಿದ್ದರು. ಬ್ರಿಟಿಷರಿಗೆ ನೆರವು ನೀಡಿ ಅವರಿಂದಲೇ ಹಣ ಸಹಾಯ ಪಡೆಯುತ್ತಿದ್ದರು. ಈತ ಹೇಗೆ ಸ್ವಾತಂತ್ರ್ಯ ಹೋರಾಟಗಾರ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದರು.

ಭಾರತ್‌ ಜೋಡೋ ಯಾತ್ರೆ ನಿಮಿತ್ತ ತುರುವೇಕೆರೆ ತಾಲೂಕಿನ ಅರಳೀಕೆರೆ ಪಾಳ್ಯದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಕಿಡಿಕಾರಿದರು. ಬಿಜೆಪಿಯ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ವಿರೋಧಿಸಿ ಯಾತ್ರೆಯನ್ನು ಮಾಡಲಾಗುತ್ತಿದೆಯೇ ಹೊರತು, 2024ರ ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಯಾತ್ರೆ ನಡೆಸುತ್ತಿಲ್ಲ. ಕಾಂಗ್ರೆಸ್‌ ಕೋಮುವಾದಿ ಪಕ್ಷವಲ್ಲ. ಕೋಮುವಾದವನ್ನು ಬೆಂಬಲಿಸುವುದೂ ಇಲ್ಲ. ದೇಶದ ಎಲ್ಲ ವರ್ಗದ ಜನರನ್ನು ಒಟ್ಟಾಗಿ ಕರೆದೊಯ್ಯುವ ಪಕ್ಷ ನಮ್ಮದು ಎಂದರು.

ಜೆಡಿಎಸ್‌ ಜೊತೆ ಮೈತ್ರಿ ಬಗ್ಗೆ ರಾಜ್ಯ ನಾಯಕರ ತೀರ್ಮಾನ: ರಾಹುಲ್‌ ಗಾಂಧಿ

ಇದೇ ವೇಳೆ, ಆರ್‌ಎಸ್‌ಎಸ್‌ ವಿರುದ್ಧವೂ ಹರಿಹಾಯ್ದ ರಾಹುಲ್‌, ಆರ್‌ಎಸ್‌ಎಸ್‌ನವರು ಬ್ರಿಟಿಷರಿಗೆ ಸಹಾಯ ಮಾಡುತ್ತಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್‌ಎಸ್‌ ಪಾತ್ರ ಇಲ್ಲವೇ ಇಲ್ಲ. ಆದರೆ, ಕಾಂಗ್ರೆಸ್‌ ಪಕ್ಷ ಬ್ರಿಟೀಷರ ವಿರುದ್ಧ ಹೋರಾಡಿತ್ತು. ಇದೇ ಕಾಂಗ್ರೆಸ್‌ ಮತ್ತು ಆರ್‌ಎಸ್‌ಎಸ್‌ಗೂ ಇರುವ ವ್ಯತ್ಯಾಸ ಎಂದರು. ‘ನನ್ನನ್ನು ಅಪ್ರಯೋಜಕ ಎಂದು ಬಿಂಬಿಸಲು ಬಿಜೆಪಿ ಕೋಟಿ, ಕೋಟಿ ಹಣ ಖರ್ಚು ಮಾಡುತ್ತಿದೆ’ ಎಂದು ಆರೋಪಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ತಾವು ಪಾದಯಾತ್ರೆ ಮೂಲಕ ದೇಶವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿರುವುದಾಗಿ ಪ್ರತಿಪಾದಿಸಿದ್ದಾರೆ.
 

click me!