ಕಪ್ಪು ಮಸಿ, ಮಾರಣಾಂತಿಕ ದಾಳಿ ರೈತರ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ: ರಾಕೇಶ್ ಟಿಕಾಯತ್

Published : May 31, 2022, 05:54 PM IST
ಕಪ್ಪು ಮಸಿ, ಮಾರಣಾಂತಿಕ ದಾಳಿ ರೈತರ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ: ರಾಕೇಶ್ ಟಿಕಾಯತ್

ಸಾರಾಂಶ

Rakesh Tikait Latest News: ಕಪ್ಪು ಶಾಯಿ ಮತ್ತು ಮಾರಣಾಂತಿಕ ದಾಳಿ" ರೈತರು ಮತ್ತು ಕಾರ್ಮಿಕರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ

ಬೆಂಗಳೂರು (ಮೇ 31):  "ಕಪ್ಪು ಶಾಯಿ ಮತ್ತು ಮಾರಣಾಂತಿಕ ದಾಳಿ" ರೈತರು ಮತ್ತು ಕಾರ್ಮಿಕರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.  ರಾಕೇಶ್‌ ಟಿಕಾಯತ್‌ ಮತ್ತು ಯುದ್ಧವೀರ್‌ ಸಿಂಗ್‌ ಮೇಲೆ ಸೋಮವಾರ ಹಲ್ಲೆ ನಡೆಸಿ ಮುಖಕ್ಕೆ ಕಪ್ಪು ಬಣ್ಣ ಎರಚಲಾಗಿತ್ತು.  ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಅವರ ಮೇಲೆ ಭರತ್‌ ಶೆಟ್ಟಿ(48), ಶಿವಕುಮಾರ್‌ (36) ಪ್ರದೀಪ್‌(32) ಎಂಬುವರು ಕಪ್ಪು ಬಣ್ಣ ಎರಚಿ, ಜೈ ಮೋದಿ.. ಜೈ ಮೋದಿ ಎಂದು ಘೋಷಣೆಗಳನ್ನು ಕೂಗಿದ್ದರು. ಘಟನೆ ಸಂಬಂಧ ಮೂವರನ್ನು ಬಂಧಿಸಿರುವ ಹೈಗ್ರೌಂಡ್‌ ಠಾಣೆ ಪೊಲೀಸರು, ವಿಚಾರಣೆಗೆ ಒಳಪಡಿಸಿದ್ದಾರೆ.

ಮಸಿ ಎರಚಿ ಹಲ್ಲೆ ಮಾಡಿದ ಕಿಡಿಗೇಡಿಗಳಿಗೆ ಶಿಕ್ಷೆಯಾಗಬೇಕಿದೆ. ಇದು ನಮ್ಮ ಬೇಡಿಕೆ. ಪತ್ರಕರ್ತರ ಸೋಗಿನಲ್ಲಿ ಬಂದು ನಮ್ಮ ಮೇಲೆ ದಾಳಿಯಾಗಿದೆ. ಕಿಡಿಗೇಡಿಗಳ ನೇರ ಗುರಿ ನಾವೇ. ಯಾಕೆಂದರೆ ನಮ್ಮ ಮೇಲೆಯೇ ಎಗರಿ ಬಂದಿದ್ದಾರೆ. ಪೊಲೀಸರು ಇಂತಹ ಘಟನೆ ತಡೆಯದೆ ಸುಮ್ಮನಿದ್ದದ್ದು ತಪ್ಪು. ಘಟನೆ ತಡೆಯುವುದು ಅವರ ಕರ್ತವ್ಯವಾಗಿತ್ತು ಎಂದು ರಾಕೇಶ್‌ ಟಿಕಾಯತ್‌ ಹೇಳಿದ್ದಾರೆ 

"ಕಪ್ಪು ಮಸಿ ಮತ್ತು ಮಾರಣಾಂತಿಕ ದಾಳಿಯು ಈ ದೇಶದ ರೈತರು, ಕಾರ್ಮಿಕರು, ದಲಿತರು, ಶೋಷಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಕೊನೆಯುಸಿರು ಇರುವವರೆಗೂ ಹೋರಾಟ ಮುಂದುವರಿಯುತ್ತದೆ" ಎಂದು ರೈತ ನಾಯಕ ಸೋಮವಾರ ತಡರಾತ್ರಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

 

 

ರೈತ ಮುಖಂಡರ ಆಕ್ರೋಶ: ರಾಷ್ಟ್ರೀಯ ನಾಯಕ ರಾಕೇಶ್‌ ಟಿಕಾಯತ್‌ ಅವರ ಕಾರ್ಯಕ್ರಮವಿರುವುದು ಗೊತ್ತಿದ್ದರೂ ಪೊಲೀಸ್‌ ಇಲಾಖೆ ಸೂಕ್ತ ಬಂದೋಬಸ್‌್ತ ವ್ಯವಸ್ಥೆ ಮಾಡಿಲ್ಲ. ಈ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡು ಸೂಕ್ತ ರಕ್ಷಣೆ ನೀಡಬೇಕಾಗಿತ್ತು. ಸ್ಥಳದಲ್ಲಿ ಪೊಲೀಸರಿದ್ದರೂ ತಡೆಯುವ ಪ್ರಯತ್ನ ನಡೆಸಲಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಕೇಳಬೇಕು ಎಂದು ಪಟ್ಟು ಹಿಡಿದು ಧರಣಿಗೆ ಮುಂದಾದರು.

ಇದನ್ನೂ ಓದಿ: ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ

ಸಾರಿಗೆ ನಿಗಮಗಳ ನೌಕರರ ಸಂಘ ನಡೆಸಿದ ಪ್ರತಿಭಟನೆಯನ್ನು ಹಿಂಪಡೆಯಲು ಲಂಚಕ್ಕೆ ಬೇಡಿಕೆಯಿಟ್ಟಿರುವ ಹಾಗೂ ಪಕ್ಷದ ನಾಯಕರ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ಆರೋಪ ಸಂಬಂಧ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಬಣದ ಕಾರ್ಯಕರ್ತರ ಮೇಲೆ ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಇತ್ತೀಚೆಗಷ್ಟೇ ಮಸಿ ಎರಚಿದ್ದರು. ಈ ಆರೋಪ ಸಂಬಂಧ ಸಂಬಂಧ ಪ್ರತಿಕ್ರಿಯೆ ನೀಡಲು ನಗರದ ಗಾಂಧಿ ಭವನದಲ್ಲಿ ಸೋಮವಾರ ಆಯೋಜಿಸಲಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು