* ಗ್ರೆನೇಡ್ ಸ್ಫೋಟದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ
* ವಿಧಿ ವಿಜ್ಞಾನ ಪ್ರಯೋಗಾಲಯದ ತಂಡದಿಂದ ಪರಿಶೀಲನೆ
* ಸಣ್ಣ ರಾಕೆಟ್ ಚಾಲಿತ ಗ್ರೆನೇಡ್ ಸ್ಫೋಟ
ಮೊಹಾಲಿ(ಮೇ.10): ಪಂಜಾಬ್‌ನ ಮೊಹಾಲಿಯಲ್ಲಿರುವ ಪೊಲೀಸ್ ಗುಪ್ತಚರ ವಿಭಾಗದ ಕೇಂದ್ರ ಕಚೇರಿಯ(Punjab Police's Intelligence Office) ಮೇಲೆ ಸೋಮವಾರ ಗ್ರೆನೇಡ್(Grenade) ದಾಳಿ ನಡೆಸಲಾಗಿದೆ. ಇದರಲ್ಲಿ ಭಯೋತ್ಪಾದನಾ ಸಂಘಟನೆಗಳ ಪಾತ್ರವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಕೆಟ್ ಲಾಂಚರ್ ಬಳಕೆ ಮಾಡಿ ಈ ಸ್ಫೋಟಕವನ್ನು ಉಡಾಯಿಸಲಾಗಿದ್ದು, 7.45ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಯಾವುದೇ ಆಸ್ತಿ, ಪ್ರಾಣಹಾನಿಯಾಗಿಲ್ಲ ಎಂದು ಪೊಲೀಸ್(Police) ಅಧಿಕಾರಿಗಳು ತಿಳಿಸಿದ್ದಾರೆ.
Explained: ವಿದ್ಯಾವಂತ ಮಹಿಳೆ ಕರಾಚಿಯಲ್ಲಿ ಆತ್ಮಾಹುತಿ ದಾಳಿ ನಡೆಸಲು ಕಾರಣವೇನು?
ಇಡೀ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದಾರೆ. ವಿಧಿವಿಜ್ಞಾನ ವಿಭಾಗದ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು ತನಿಖೆ ಆರಂಭಿಸಿದ್ದಾರೆ. ದಾಳಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರ ಸಲ್ಲಿಸುವಂತೆ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಈ ಸ್ಫೋಟಕ ಮತ್ತು ಏ.24ರಂದು ಬುರೈಲ್ ಜೈಲಿನಲ್ಲಿ ವಶಪಡಿಸಿಕೊಂಡ ಸ್ಫೋಟಕಕ್ಕೆ ಸಾಕಷ್ಟು ಸಾಮ್ಯತೆ ಇದೆ.