ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ರಕ್ತಪಾತ; 19 ಮಕ್ಕಳು , 7 ಗರ್ಭಿಣಿಯರ ಹತ್ಯೆ, ಇಂಟರ್‌ನೆಟ್ ಬಂದ್

Published : Jun 10, 2026, 11:24 AM ISTUpdated : Jun 10, 2026, 11:31 AM IST
19 kids, 7 pregnant women killed in PoK firings: Intel

ಸಾರಾಂಶ

ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ, ಜಂಟಿ ಅವಾಮಿ ಕ್ರಿಯಾ ಸಮಿತಿಯು ಹಣದುಬ್ಬರ ಮತ್ತು ನಿರುದ್ಯೋಗದ ವಿರುದ್ಧ ನಡೆಸುತ್ತಿದ್ದ ಪ್ರತಿಭಟನೆಯನ್ನು ಪಾಕಿಸ್ತಾನ ಹಿಂಸಾತ್ಮಕವಾಗಿ ಹತ್ತಿಕ್ಕಿದೆ. ಈ ದಾಳಿಯಲ್ಲಿ ಮಕ್ಕಳು ಮತ್ತು ಗರ್ಭಿಣಿಯರು ಸೇರಿದಂತೆ ಹಲವರು ಸಾವನ್ನಪ್ಪಿದ್ದು, ಈ ಪ್ರದೇಶದಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ.

ನವದೆಹಲಿ: ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಭೀಕರ ರಕ್ತಪಾತ ನಡೆಸಿದೆ ಎಂದು ವರದಿಯಾಗಿದೆ. ಜಂಟಿ ಅವಾಮಿ ಕ್ರಿಯಾ ಸಮಿತಿ (ಜೆಎಎಸಿ- Joint Awami Action Committee) ನಡೆಸುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಪಾಕಿಸ್ತಾನ ಹಿಂಸೆಯ ಮಾರ್ಗದಲ್ಲಿ ರಕ್ತದ ಹೊಳೆಯನ್ನು ಹರಿಸುತ್ತಿದೆ. ಮಾನವ ಹಕ್ಕುಗಳ ಉಲ್ಲಂಘನೆ, ಹಣದುಬ್ಬರ, ನಿರುದ್ಯೋಗ ಮತ್ತು ಆರ್ಥಿಕ ಸಂಕಷ್ಟಗಳನ್ನಿಟ್ಟುಕೊಂಡು ಜೆಎಎಸಿ ಪ್ರತಿಭಟನೆ ನಡೆಸುತ್ತಿತ್ತು. ಈ ಪ್ರತಿಭಟನೆ ಹತ್ತಿಕ್ಕಲು ಪಾಕಿಸ್ತಾನ ನಡೆಸಿದ ದಾಳಿಯಲ್ಲಿ 12ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಜೂನ್ 5 ರಿಂದ ಜೂನ್ 9 ರವರೆಗೆ ಸಮಯದಲ್ಲಿ ಹಿಂಸಾಚಾರ ನಡೆದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

19 ಮಕ್ಕಳು ಮತ್ತು ಏಳು ಗರ್ಭಿಣಿಯರು ಸಾವು

ಪಾಕಿಸ್ತಾನ ನಡೆಸಿದ ಹಿಂಸಾಚಾರದಲ್ಲಿ 19 ಮಕ್ಕಳು ಮತ್ತು ಏಳು ಗರ್ಭಿಣಿಯರು ಸಾವನ್ನಪ್ಪಿರುವ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಈ ಸಂಬಂಧ ತನಿಖೆ ನಡೆಯಬೇಕೆಂದು ಅಂತರಾಷ್ಟ್ರೀಯ ಸಂಸ್ಥೆಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಜೆಎಎಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದ ವ್ಯಾಪ್ತಿಯಲ್ಲಿ ಸುಮಾರು 14 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರತಿಭಟನಾಕರರು ಯಾವುದೇ ಆಯುಧ ಸೇರಿದಂತೆ ಸಶಾಸ್ತ್ರಗಳನ್ನು ಹೊಂದಿರಲಿಲ್ಲ. ಇಂತಹ ಪ್ರತಿಭಟನಾಕಾರರ ವಿರುದ್ಧ ಪಾಕಿಸ್ತಾನ ಭದ್ರತಾ ಪಡೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

. ಯುಕೆಯಲ್ಲಿರುವ ಕಾಶ್ಮೀರಿ ವಲಸಿಗರು ಅಲ್ಲಿನ ಪಾಕಿಸ್ತಾನಿ ಮಿಷನ್ ಕಚೇರಿ ಮುಂದೆ ದೊಡ್ಡ ಮಟ್ಟದ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಬ್ರಿಟಿಷ್ ಪ್ರಜೆಗಳನ್ನು ಬಂಧಿಸಿರುವುದು ಮತ್ತು ಸಂವಹನ ನಿಷೇಧದ ಬಗ್ಗೆ ಕಳವಳ ವ್ಯಕ್ತಪಡಿಸಿ ಸುಮಾರು 30 ಬ್ರಿಟಿಷ್ ಸಂಸದರು ಯುಕೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಇಂಟರ್‌ನೆಟ್ ಬಂದ್

ಹಾಗೆಯೇ ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದ ವ್ಯಾಪ್ತಿಯಲ್ಲಿನ ಇಂಟರ್‌ನೆಟ್ ಮತ್ತು ಸಂವಹನದ ಸಂಪೂರ್ಣವಾಗಿ ನಿರ್ಬಂಧ ವಿಧಿಸಲಾಗಿದೆ. ಇಂಟರ್‌ನೆಟ್ ಬಳಕೆಯನ್ನು ತಡೆದ್ರೂ ಮಿರ್ಪುರ್, ಮುಜಫರಾಬಾದ್, ಗಿಲ್ಗಿಟ್-ಬಾಲ್ಟಿಸ್ತಾನ್, ದಾದಿಯಲ್, ರಾವಲಕೋಟ್, ಸುಧ್ನೋಟಿವರೆಗೆ ಪ್ರತಿಭಟನೆಯ ಕಾಡ್ಗಿಚ್ಚು ವ್ಯಾಪಿಸಿದೆ.

ಜಂಟಿ ಅವಾಮಿ ಕ್ರಿಯಾ ಸಮಿತಿ ಜೂನ್ 9ರಂದು ಬೃಹತ್ ಮೆರವಣಿಗೆ ಆಯೋಜನೆಗೆ ಸಿದ್ಧತೆ ಮಾಡಿಕೊಂಡಿತ್ತು. ಈ ಪ್ರತಿಭಟನೆಯನ್ನ 45 ಲಕ್ಷ ಕಾಶ್ಮೀರಿಗಳು ಭಾಗವಹಿಸಬೇಕೆಂಬ ಕರೆಗಳು ಕೇಳಿ ಬಂದಿದ್ದವು. ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದ ಎಲ್ಲಾ ಜಿಲ್ಲೆಗಳಿಗೂ ಈ ಪ್ರತಿಭಟನೆ ಕೂಗು ವ್ಯಾಪಿಸಿತ್ತು. ರಾವಲಕೋಟ್ ಭಾಗದಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಮರೆವಣಿಗೆ ಮೇಲೆ ಪಾಕಿಸ್ತಾನದ ಭದ್ರತಾ ಸಿಬ್ಬಂದಿ ಶೆಲ್ ದಾಳಿ ನಡೆಸಿದ್ದಾರೆ. ಈ ಶೆಲ್ ದಾಳಿಯಲ್ಲಿ ಮಕ್ಕಳು, ಗರ್ಭಿಣಿಯರು ಸೇರಿದಂತೆ ಒಟ್ಟು 27 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜೂನ್ ತಿಂಗಳಿನಲ್ಲೇ ಚಿನ್ನದ ಬೆಲೆಯಲ್ಲಿ ಅತಿದೊಡ್ಡ ಕುಸಿತ! ಇಂದು ಒಂದೇ ದಿನ ₹4300 ರುಪಾಯಿ ಇಳಿಕೆ
PM Modi's 12 years: ಮೋದಿ ಸಾಧನೆ ಅದೃಷ್ಟವಲ್ಲ: ಭಾರತವನ್ನ ಮರು ನಿರ್ಮಾಣ ಮಾಡಿದ 12 ವರ್ಷಗಳು