Drug Case ಶಾರುಖ್ ಪುತ್ರ ಆರ್ಯನ್ ಖಾನ್ ಗೆ ಕ್ಲೀನ್ ಚಿಟ್

Published : May 27, 2022, 01:37 PM ISTUpdated : May 27, 2022, 03:35 PM IST
Drug Case ಶಾರುಖ್ ಪುತ್ರ ಆರ್ಯನ್ ಖಾನ್ ಗೆ ಕ್ಲೀನ್ ಚಿಟ್

ಸಾರಾಂಶ

ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್‌ಗೆ ಎನ್‌ಸಿಬಿ ಕ್ಲೀನ್ ಚಿಟ್ ನೀಡಿದೆ.

ಮುಂಬೈ (ಮೇ. 27): ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ( Aryan Khan) ಎನ್‌ಸಿಬಿ (NCB) ಕ್ಲೀನ್ ಚಿಟ್ ನೀಡಿದೆ. ಈ ಪ್ರಕರಣದಲ್ಲಿ ಇತರ ನಾಲ್ವರೊಂದಿಗೆ ಸಂಸ್ಥೆ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಅವರ ಹೆಸರಿಲ್ಲ.

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಅಕ್ಟೋಬರ್ ಆರಂಭದಲ್ಲಿ ಬಂಧಿಸಲಾಗಿತ್ತು. ಹಲವಾರು ನ್ಯಾಯಾಲಯದ ವಿಚಾರಣೆಗಳು, ಸುದೀರ್ಘ ನಾಟಕೀಯ ಬೆಳವಣಿಗೆಗಳ ಬಳಿಕ ಅಕ್ಟೋಬರ್ 28 ರಂದು ಅವರಿಗೆ ಕೋರ್ಟ್ ಜಾಮೀನು ನೀಡಿತ್ತು. ಇದಕ್ಕೂ ಮುನ್ನ ಅವರು ಬರೋಬ್ಬರಿ 28 ದಿನ ಬಂಧನದಲ್ಲಿದ್ದರು. 

 ಅಂತಿಮವಾಗಿ ಅವರು ಅಕ್ಟೋಬರ್ 30 ರಂದು ತಮ್ಮ ತಂದೆಯ ಹುಟ್ಟುಹಬ್ಬದ ಸಮಯದಲ್ಲಿ ಜೈಲಿನಿಂದ ಹೊರಬಂದಿದ್ದರು. ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶುಕ್ರವಾರ ಬರೋಬ್ಬರಿ 6 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, 14 ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಿದೆ.

ಕಳೆದ ವರ್ಷ ಮುಂಬೈನಲ್ಲಿ ಕ್ರೂಸ್ ಶಿಪ್ ನ ಮೇಲೆ ಎನ್ ಸಿಬಿ ದಾಳಿ ನಡೆಸಿದಾಗ, ಮಾದಕ ವಸ್ತುಗಳು ಪತ್ತೆಯಾಗಿದ್ದವು. "ಆರ್ಯನ್ ಮತ್ತು ಮೋಹಕ್ ಹೊರತುಪಡಿಸಿ ಎಲ್ಲಾ ಆರೋಪಿಗಳು ಮಾದಕ ದ್ರವ್ಯಗಳನ್ನು ಹೊಂದಿದ್ದರು" ಎಂದು ಹಿರಿಯ ಎನ್‌ಸಿಬಿ ಅಧಿಕಾರಿ ಸಂಜಯ್ ಕುಮಾರ್ ಸಿಂಗ್ ಚಾರ್ಜ್ ಶೀಟ್ ನಲ್ಲಿರುವ ಹೇಳಿಕೆಯನ್ನು ತಿಳಿಸಿದ್ದಾರೆ. ಆರ್ಯನ್ ಖಾನ್ ಮತ್ತು ಇತರ ಐವರ ವಿರುದ್ಧ ಸಂಸ್ಥೆಗೆ ಸಾಕಷ್ಟು ಪುರಾವೆಗಳು ಸಿಗಲಿಲ್ಲ ಎಂದು ಅವರು ಹೇಳಿದರು.

ಕ್ರೂಸ್ ಡ್ರಗ್ಸ್ ಪ್ರಕರಣದ ಚಾರ್ಟ್‌ಶೀಟ್‌ನಲ್ಲಿ ಮುನ್ಮುನ್ ಧಮೇಚಾ ಮತ್ತು ಅರ್ಬಾಜ್ ಮರ್ಚೆಂಟ್ ಕ್ಲೀನ್ ಚಿಟ್ ಪಡೆದಿಲ್ಲ. ಇವರಿಬ್ಬರೂ ಡ್ರಗ್ಸ್ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಅರ್ಬಾಜ್ ಮರ್ಚೆಂಟ್, ಆರ್ಯನ್ ಖಾನ್ ಅವರ ಸ್ನೇಹಿತ. ಚಾರ್ಟ್ ಶೀಟ್‌ನಲ್ಲಿ 6 ಜನರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಬರೆಯಲಾಗಿದೆ. ಸಾಕ್ಷ್ಯಾಧಾರಗಳು ಪತ್ತೆಯಾಗದವರಲ್ಲಿ ಆರ್ಯನ್ ಖಾನ್, ಸಾಹು, ಆನಂದ್, ಸುನೀಲ್ ಸೆಹ್, ಅರೋರಾ ಸೇರಿದ್ದಾರೆ. ಉಳಿದ 14 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅವರಿಗೆ ಕ್ಲೀನ್ ಚಿಟ್ ಸಿಕ್ಕಿಲ್ಲ. ಇದೀಗ ಈ 14 ಜನರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎನ್ ಸಿಬಿ ಹೇಳಿದೆ.

Shah Rukh Khan Back On Set: ಮಗನ ಡ್ರಗ್ಸ್ ಕೇಸ್ ನಂತರ ಮತ್ತೆ ಕೆಲಸ ಶುರು ಮಾಡಿದ ಶಾರೂಖ್

ಏನಿದು ಪ್ರಕರಣ:
ಅಕ್ಟೋಬರ್ 2 ರಂದು, ಕ್ರೂಸ್ ಶಿಪ್ ಮೇಲೆ ಎನ್ ಸಿಬಿ ದಾಳಿ ನಡೆಸಿತ್ತು. ಇದರಲ್ಲಿ ಆರ್ಯನ್ ಖಾನ್ ಸೇರಿದಂತೆ ಒಟ್ಟು 19 ಮಂದಿಯನ್ನು ಬಂಧಿಸಲಾಗಿತ್ತು. ನಂತರ ಎಲ್ಲಾ ಆರೋಪಿಗಳು ವಿವಿಧ ಸಮಯಗಳಲ್ಲಿ ಜಾಮೀನಿನ ಮೇಲೆ ಹೊರಬಂದರು. ಒಬ್ಬ ಆರೋಪಿ ಸದ್ಯ ಜೈಲಿನಲ್ಲಿದ್ದಾನೆ. ಈ ಪ್ರಕರಣದಲ್ಲಿ ಆರ್ಯನ್ ಖಾನ್ ಮೂರು ವಾರಗಳಿಗೂ ಹೆಚ್ಚು ಕಾಲ ಜೈಲಿನಲ್ಲೇ ಇರಬೇಕಾಯಿತು.

Drugs Case: ಶಾರುಖ್‌ ಪುತ್ರನ ಬಂಧಿಸಿದ್ದ ವಾಂಖೇಡೆ ಮಾತೃ ಇಲಾಖೆಗೆ, NCB ಸೇವೆ ಅಂತ್ಯ!

ಆರ್ಯನ್ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡ್ರಗ್ಸ್ ವಹಿವಾಟು ನಡೆಸುತ್ತಿದ್ದಾರೆ ಎಂದು ಎನ್‌ಸಿಬಿ ಆರೋಪಿಸಿತ್ತು. ಆದರೆ, ಆರ್ಯನ್‌ನಿಂದ ಎನ್‌ಸಿಬಿಯಿಂದ ಡ್ರಗ್ಸ್ ವಶಪಡಿಸಿಕೊಂಡಿರಲಿಲ್ಲ. ಆರ್ಯನ್‌ನ ಸ್ನೇಹಿತ ಅರ್ಬಾಜ್ ಮರ್ಚೆಂಟ್‌ನಿಂದ ಎನ್‌ಸಿಬಿ ಡ್ರಗ್ಸ್ ಪಡೆದುಕೊಂಡಿದೆ. ಬಂಧನದ ನಂತರ ಆರ್ಯನ್ ಖಾನ್ ಅವರನ್ನು ಎನ್ ಸಿಬಿ ಕಸ್ಟಡಿಗೆ ಕಳುಹಿಸಲಾಗಿದೆ. ನಂತರ ಅವರು ಆರ್ಥರ್ ರೋಡ್ ಜೈಲಿನಲ್ಲಿ ಹಲವಾರು ದಿನಗಳವರೆಗೆ ಇದ್ದರು. ಏತನ್ಮಧ್ಯೆ, ಅವರ ಜಾಮೀನು ಅರ್ಜಿಯನ್ನು ಪದೇ ಪದೇ ತಿರಸ್ಕರಿಸಲಾಯಿತು. ಸಾಕಷ್ಟು ಕಠಿಣ ಪರಿಶ್ರಮದ ನಂತರ ಅಕ್ಟೋಬರ್ 30 ರಂದು ಆರ್ಯನ್ ಖಾನ್ ಜೈಲಿನಿಂದ ಹೊರಬಂದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!