
West Bengal By Election: ಪಶ್ಚಿಮ ಬಂಗಾಳದಲ್ಲಿ ಉಪ ಚುನಾವಣೆಯ ಮತ ಎಣಿಕೆ ವೇಳೆ ಬಾಂಬ್ ಸ್ಫೋಟಗೊಂಡಿದ್ದು, 9 ವರ್ಷದ ಬಾಲಕಿಯೊಬ್ಬಳು ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಕಾಲಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ( Kaliganj Assembly Constituency) ನಡೆದ ಉಪಚುನಾವಣೆಯ (By Election result) ಮತ ಎಣಿಕೆ ವೇಳೆ ಈ ದುರಂತ ನಡೆದಿದೆ.
ಕಾಲಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬರೋಚಾಂದ್‌ಗರ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಈ ಸ್ಫೋಟದಲ್ಲಿ (kaliganj bomb blast)ಬಾಲಕಿ ಗಂಭೀರ ಗಾಯಗೊಂಡಿದ್ದಳು. ಉಪಚುನಾವಣೆಯ (By Election) ಮತ ಎಣಿಕೆ ಕಾರ್ಯ ನಡೆಯುತ್ತಿದ್ದಾಗಲೇ ಈ ದುರಂತ ಸಂಭವಿಸಿದೆ. ಈ ಘಟನೆಗೆ ಕಾರಣವಾದವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ(CM Mamata Benerjee) ಹೇಳಿದ್ದಾರೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂತಾಪ:
ಕೃಷ್ಣನಗರ ಜಿಲ್ಲೆ ವ್ಯಾಪ್ತಿಗೆ ಬರುವ ಬರೋಚಾಂದ್‌ಗರ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ(Bomb Blast) ಪುಟ್ಟ ಬಾಲಕಿ ಜೀವ ಕಳೆದುಕೊಂಡ ವಿಚಾರ ತಿಳಿದು ಬಹಳ ನೋವಾಗಿದೆ. ಈ ನೋವಿನ ಸಮಯದಲ್ಲಿ ಬಾಲಕಿ ಕುಟುಂಬದ ಪರವಾಗಿ ನನ್ನ ಪ್ರಾರ್ಥನೆ ಹಾಗೂ ಸಂತಾಪಗಳು, ಈ ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಘಟನೆಯಲ್ಲಿ ಮೃತಪಟ್ಟ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಸ್ಫೋಟಕ್ಕೆ ಏನು ಕಾರಣ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ದೇಶದೆಲ್ಲೆಡೆ ಐದು ಕೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆದು ಫಲಿತಾಂಶ ಹೊರ ಬಿದ್ದಿದೆ. ಆ ಕ್ಷೇತ್ರಗಳು ಹಾಗೂ ಅಲ್ಲಿ ಗೆದ್ದ ಪಕ್ಷಗಳ ವಿವರ ಇಲ್ಲಿದೆ ನೋಡಿ.
| ರಾಜ್ಯ | ವಿಧಾನಸಭಾ ಕ್ಷೇತ್ರ | ಗೆದ್ದ ಪಕ್ಷ |
| ಗುಜರಾತ್ | ವಿಶಾವದರ್ ವಿಧಾನಸಭಾ ಕ್ಷೇತ್ರ | ಎಎಪಿ |
| ಪಂಜಾಬ್ | ಲೂಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರ | ಎಎಪಿ |
| ಕೇರಳ | ನಿಲಂಬೂರ್ ವಿಧಾನಸಭಾ ಕ್ಷೇತ್ರ | ಎಎಪಿ |
| ಪಶ್ಚಿಮ ಬಂಗಾಳ | ಕಾಳಿಗಂಜ್ ವಿಧಾನಸಭಾ ಕ್ಷೇತ್ರ | ಟಿಎಂಸಿ |
| ಗುಜರಾತ್ | ಕಾಡಿ ವಿಧಾನಸಭಾ ಕ್ಷೇತ್ರ | ಬಿಜೆಪಿ |
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ