ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ಬಿಜೆಪಿ ಪಠ್ಯ!

Published : Feb 24, 2020, 09:18 AM IST
ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ಬಿಜೆಪಿ ಪಠ್ಯ!

ಸಾರಾಂಶ

ಸತತ ಎರಡು ಸಾರ್ವತ್ರಿಕ ಲೋಕಸಭಾ ಚುನಾವಣೆಗಳಲ್ಲಿ ಭರ್ಜರಿ ಬಹುಮತದೊಂದಿಗೆ ಗೆದ್ದಿರುವ ಬಿಜೆಪಿ| ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ಬಿಜೆಪಿ ಪಠ್ಯ!

ನವದೆಹಲಿ[ಫೆ.24]: ಸತತ ಎರಡು ಸಾರ್ವತ್ರಿಕ ಲೋಕಸಭಾ ಚುನಾವಣೆಗಳಲ್ಲಿ ಭರ್ಜರಿ ಬಹುಮತದೊಂದಿಗೆ ಗೆದ್ದಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯ ಸಾಧನೆ ಇಂಡೋನೇಷ್ಯಾ ಇಸ್ಲಾಮಿಕ್‌ ವಿಶ್ವ ವಿದ್ಯಾನಿಲಯದಲ್ಲಿ ಪಠ್ಯವಾಗಿದೆ.

ಪದವಿ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಸಂಬಂಧ ವಿಷಯದಲ್ಲಿ ಬಿಜೆಪಿ ಕುರಿತ ಪಠ್ಯವನ್ನು ಸೇರಿಸಲಾಗಿದೆ. ಖ್ಯಾತ ಲೇಖಕ ಶಾಂತನು ಗುಪ್ತಾ ವಿರಚಿತ ‘ಭಾರತೀಯ ಜನತಾ ಪಾರ್ಟಿ, ಭೂತ-ವರ್ತಮಾನ-ಭವಿಷ್ಯ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷ’ ಎಂಬ ಪುಸ್ತಕದ ಅಧ್ಯಾಯವೊಂದು ಪಠ್ಯವಾಗಿದೆ.

ಈ ಬಗ್ಗೆ ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಇಂಡೋನೇಷ್ಯಾ ಪ್ರಾಧ್ಯಾಪಕ ಹದ್ಸಾ ಮಿನ್‌ ಫಧಿಲ್‌, ಸತತ ಎರಡು ಬಾರಿಯ ಚುನಾವಣೆಯಲ್ಲಿ ಗೆದ್ದ ಬಿಜೆಪಿಯ ಬಗ್ಗೆ ಇಂಡೋನೇಷ್ಯಾದಲ್ಲಿ ಕುತೂಹಲ ಹೆಚ್ಚಾಗಿದೆ. ಹಾಗಾಗಿ ಈ ವಿಷಯವನ್ನು ವಿವಿ ಪಠ್ಯದಲ್ಲಿ ಅಳವಡಿಸಿಕೊಂಡಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು