
ನವದೆಹಲಿ(ಮಾ. 10): ಕಳೆದ ಕೆಲವು ತಿಂಗಳುಗಳಿಂದ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿರುವ ತೈಲ ಬೆಲೆಗಳನ್ನು ಇಳಿಕೆ ಮಾಡಬೇಕು ಎಂದು ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲೂ ಮಂಗಳವಾರ ಪ್ರತಿಭಟನೆ ನಡೆಸಿವೆ. ಹೀಗಾಗಿ ಎರಡೂ ಸದನಗಳ ಕಲಾಪ ಬಲಿಯಾಗಿದೆ.
ಬೆಲೆ ಏರಿಕೆ ವಿರುದ್ಧ ಲೋಕಸಭೆಯಲ್ಲಿ ಸದಸ್ಯರು ಪ್ರತಿಭಟನೆ ನಡೆಸಿದರು. ಹೀಗಾಗಿ ಕಲಾಪವನ್ನು ಮಧ್ಯಾಹ್ನ 2ಕ್ಕೆ ಮುಂದೂಡಲಾಯಿತು. ಮತ್ತೆ ಸದನ ಸಮಾವೇಶಗೊಂಡಾಗ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಗದ್ದಲ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸಭಾಧ್ಯಕ್ಷರ ಸ್ಥಾನದಲ್ಲಿದ್ದ ರಾಜೇಂದ್ರ ಆಗ್ರಾವಾಲ್ ಅವರು ಕಲಾಪವನ್ನು ಬುಧವಾರಕ್ಕೆ ಮುಂದೂಡಿದರು.
ರಾಜ್ಯಸಭೆಯಲ್ಲೂ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದವು. ಮೊದಲು ಬೆಳಗ್ಗೆ 11.20ಕ್ಕೆ, ನಂತರ ಮಧ್ಯಾಹ್ನ 2ಕ್ಕೆ ಕಲಾಪವನ್ನು ಮುಂದೂಡಲಾಯಿತು. ತೈಲ ಬೆಲೆ ಏರಿಕೆ ಕುರಿತು ಚರ್ಚೆಯಾಗಬೇಕು ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಕಲಾಪವನ್ನು ಬುಧವಾರಕ್ಕೆ ಮುಂದೂಡಿಕೆ ಮಾಡಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ