
ಬೆಂಗಳೂರು (ಮಾ.10): ಹೂಗುಚ್ಛಗಳು ನ್ಯಾಷನಲ್ ವೇಸ್ಟ್ ಎನ್ನುವ ತಮ್ಮ ಹೇಳಿಕೆಯನ್ನು ಸಂಸದ ತೇಜಸ್ವಿ ಸೂರ್ಯ ಅವರು ವಾಪಸ್ ಪಡೆಯಬೇಕು ಎಂದು ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ.ಅರವಿಂದ್ ಮನವಿ ಮಾಡಿದ್ದಾರೆ.
ತಮ್ಮ ವಿವಾಹದ ಆರತಕ್ಷತೆಗೆ ಸಾರ್ವಜನಿಕರನ್ನು ಆಹ್ವಾನಿಸುವ ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡುವಾಗ ತೇಜಸ್ವಿ ಸೂರ್ಯ ಅವರು ‘ಹೂಗುಚ್ಛಗಳು ನ್ಯಾಷನಲ್ ವೇಸ್ಟ್. ಇವುಗಳನ್ನು ನೀಡುವುದು ಬೇಡ’ ಎಂದಿದ್ದಾರೆ. ರಾಜ್ಯದಲ್ಲಿ ಸುಮಾರು 38 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪುಷ್ಪ ಬೆಳೆ ಬೆಳೆಯಲಾಗುತ್ತಿದೆ. ಇದರಿಂದ ನೇರ ಹಾಗೂ ಪರೋಕ್ಷವಾಗಿ 11 ಲಕ್ಷ ಜನರ ಜೀವನ ಅವಲಂಬಿತವಾಗಿದೆ. ಹಾಗಾಗಿ ಸಂಸದರ ಹೇಳಿಕೆಯು ಲಕ್ಷಾಂತರ ರೈತರ ಶ್ರಮಕ್ಕೆ ಧಕ್ಕೆಯಾಗುತ್ತದೆ ಎಂದಿದ್ದಾರೆ.
ಇದನ್ನೂ ಓದಿ: ಎಲ್ಲರೂ ರಿಸೆಪ್ಶನ್‌ಗೆ ಬನ್ನಿ, ಆದ್ರೆ.... ಏನು ಹೇಳಿದ್ರು ತೇಜಸ್ವಿ ಸೂರ್ಯ?
ಗುಲಾಬಿ, ಸೇವಂತಿಗೆ, ಚೆಂಡು, ಸುಗಂಧರಾಜ, ಕನಕಾಂಬರ ಇತ್ಯಾದಿ ಬಿಡಿ ಹೂ ಹಾಗೂ ಕಟ್ ಗುಲಾಬಿ, ಕಟ್ ಸೇವಂತಿಗೆ, ಜೆರ್ಬೆರ, ಆಂತುರಿಯಮ್ಸ್, ಆರ್ಕಿಡ್ಸ್ ಇತ್ಯಾದಿ ವಾಣಿಜ್ಯ ಬೆಳೆಗಳನ್ನು ಹಸಿರು ಮನೆ, ಪಾಲಿಮನೆಯಲ್ಲಿ ಬೆಳೆಲಾಗುತ್ತಿದೆ. ಇದರಿಂದ ನೇರ ಹಾಗೂ ಪರೋಕ್ಷವಾಗಿ 11 ಲಕ್ಷ ಜನರ ಜೀವನ ಅವಲಂಬಿತವಾಗಿದೆ ಎಂದು ಅವರು ವಿವರಿಸಿದ್ದಾರೆ.
ಅಲ್ಲದೆ, ರಾಜ್ಯದಲ್ಲಿ 2.8 ಲಕ್ಷ ಏಕರೆ ಪ್ರದೇಶದಲ್ಲಿ ಕಾಕಡ, ಮಲ್ಲಿಗೆ, ಮ್ಯಾರಿಗೋಲ್ಡ್, ಸಂಪಂಗಿ, ಕನಕಾಂಬರ ಸೇರಿದಂತೆ 40 ಬಗೆಯ ಹೂಗಳನ್ನು ಬೆಳೆಯಲಾಗುತ್ತದೆ. ಇದರ ಮೇಲೆ ಅವಲಂಬಿತರಾಗಿರುವ ಜನಸಂಖ್ಯೆ 52 ಲಕ್ಷಕ್ಕೂ ಹೆಚ್ಚು. ಕೃತಕ ಹೂವು ಬಳಕೆಯಿಂದ ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಿರುವಾಗ ಸಂಸದರ ಹೇಳಿಕೆಯು ಲಕ್ಷಾಂತರ ರೈತರ ಶ್ರಮಕ್ಕೆ ಧಕ್ಕೆಯಾಗುತ್ತದೆ. ಆದ್ದರಿಮದ ತಕ್ಷಣ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ