
ಇಂದೋರ್ (ಮಾ.06) ಹದಿ ಹರೆಯದ ಕಾಲೇಜು ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿ ಮೋಸದ ಬಲೆಗೆ ಬೀಳಿಸುವ ಘಟನೆಗಳು ಹಲವೆಡೆ ಎಗ್ಗಿಲ್ಲದೆ ನಡೆಯುತ್ತಿದೆ ಇದೀಗ ಇಂದೋರ್ ನಗರದ ಕಾಲೇಜು ವಿದ್ಯಾರ್ಥಿನಿಯರನ್ನು ಬಾಯ್‌ಫ್ರೆಂಡ್ ಬನಾವೋ ಅಭಿಯಾನದಡಿ ಸಿಲುಕಿಸಿ ನರಕಕ್ಕೆ ತಳ್ಳುತ್ತಿರುವ ಪ್ರಕರಣವೊಂದು ಪತ್ತೆಯಾಗಿದೆ ಎಂದು ವರದಿಯಾಗಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳು ಬಾಯ್‌ಫ್ರೆಂಡ್ ಮಾಡಿ ಅಭಿಯಾನ ಆರಂಭಿಸಿದ್ದಾಳೆ. ಬಳಿಕ ತನ್ನ ರೂಂ ಮೇಟ್ಸ್, ಕಾಲೇಜು ಗೆಳತಿಯರನ್ನು ಒತ್ತಾಯಪೂರ್ವಕವಾಗಿ ಅಪರಿಚಿತ ಹುಡುಗರ ಜೊತೆ ಸಂಪರ್ಕ ಬೆಳೆಸುವಂತೆ ಮಾಡಿದ್ದಾಳೆ. ಪ್ರತಿ ದಿನ ರಾತ್ರಿ ವಿಡಿಯೋ ಕಾಲ್ ಮಾಡಿ ವರ್ಚುವಲ್ ಲೈಂಗಿಕತೆ ಪ್ರಚೋದಿಸುವ ಈ ಕ್ಯಾಂಪೇನ್ ಇಂದೋರ್‌ನಲ್ಲಿ ಆತಂಕ ಹೆಚ್ಚಿಸಿದೆ.
ಇಂದೋರ್‌ನಲ್ಲಿ ನಡೆದಿದೆ ಎನ್ನಲಾಗಿರುವ ಈ ಅಭಿಯಾನ ಹಾಗೂ ಅಕ್ರಮ ಪೋಷಕರ ಆತಂಕ ಹೆಚ್ಚಿಸಿದೆ. ಈ ಅಭಿಯಾನ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಕಾಲೇಜು ವಿದ್ಯಾರ್ಥಿನಿಯರು ಕೂಪದಲ್ಲಿ ಸಿಲುಕಿ ನರಕ ಯಾತನೆ ಅನುಭವಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಇಂದೋರ್ ಖಾಸಗಿ ಕಾಲೇಜು ಒಂದರ ವಿದ್ಯಾರ್ಥಿನಿ ಕ್ಯಾಂಪಸ್‌ನಲ್ಲಿ ಬಾಯ್‌ಫ್ರೆಂಡ್ ಮಾಡಿಕೊಳ್ಳಿ ಅಭಿಯಾನ ಆರಂಭಿಸಿದ್ದಾರೆ. ಹಾಸ್ಟೆಲ್‌ನಲ್ಲಿನ ವಿದ್ಯಾರ್ಥಿನಿಯರು, ಕಾಲೇಜಿನ ಗೆಳತಿಯರನ್ನು ಈ ಕೂಪಕ್ಕೆ ತಳ್ಳಿದ್ದಾಳೆ. ಅಪರಿಚಿತ ಹುಡುಗರ ಫೋನ್ ನಂಬರ್ ನೀಡಿ ಅವರ ಜೊತೆ ಪ್ರೀತಿ ಹಾಗೂ ಲೈಂಗಿಕತೆಗೆ ಸಹಕರಿಸಲ ಒತ್ತಾಯಿಸಿದ್ದಾಳೆ. ಪ್ರತಿ ದಿನ ರಾತ್ರಿ ಅಪರಿಚಿತ ಹುಡುಗರ ಜೊತೆ ವಿಡಿಯೋ ಕಾಲ್ ಮಾಡಿ ವರ್ಚುವಲ್ ಲೈಂಗಿಕತೆ ಮಾಡುವ ಈ ಅಭಿಯಾನ ಸದ್ದಿಲ್ಲದೆ ಹರಡುತ್ತಿದೆ ಎಂದು ಸೋಶಿಯಲ್ ಮೀಡಿಯಾಗಳಲ್ಲಿ ವರದಿಯಾಗಿದೆ.
ಹಲವು ವಿದ್ಯಾರ್ಥಿನಿಯರನ್ನು ಈ ಕೂಪಕ್ಕೆ ತಳ್ಳಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಅಭಿಯಾನ ಹಲವು ಕಾಲೇಜುಗಳಿಗೆ ವ್ಯಾಪಿಸಿದೆ ಎಂದು ಹೇಳಲಾಗುತ್ತಿದೆ. ಹಲವು ವಿದ್ಯಾರ್ಥಿನಿಯರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಹಲವು ವಿದ್ಯಾರ್ಥಿನಿಯರು ವಿಡಿಯೋ ಕಾಲ್ ಬಳಿಕ ಭೇಟಿಯಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ಉದ್ದೇಶಪೂರ್ವಕವಾಗಿ ಮಾಡಿರುವ ಕುಕೃತ್ಯ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಈ ರೀತಿಯ ಯಾವುದೇ ಘಟನೆಗಳು ನಡೆದಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಮಾಹಿತಿ ಹರಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ