
ನವದೆಹಲಿ (ಸೆ.11) ಬ್ರಿಕ್ಸ್ ಶೃಂಗಸಭೆ ಹಿನ್ನಲೆಯಲ್ಲಿ ಕೆಲ ಮಹತ್ವದ ಘೋಷಣೆಳು, ನಿರ್ಧಾರಗಳು ಹೊರಬಿದ್ದಿದೆ. ಸೆಪ್ಟೆಂಬರ್ 12 ಹಾಗೂ 13ರಂದು ಸಭೆ ನಡೆಯುವ ಹಿನ್ನಲೆಯಲ್ಲಿ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಸರ್ಕಾರಿ ಕಚೇರಿಗಳಿಗೆ ರಜೆ ನೀಡಲಾಗಿದೆ. ಸಂಚಾರ ನಿರ್ಬಂಧ ಹಿನ್ನಲೆಯಲ್ಲಿ ಹಲವು ಖಾಸಗಿ ಕಂಪನಿಗಳು ವರ್ಕ್ ಫ್ರಮ್ ಹೋಮ್ ನೀಡಿದೆ. ಆದರೆ ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ ಎಂದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆ ಹಿನ್ನಲೆಯಲ್ಲಿ ಹಲವು ಕ್ರಮ ಕೈಗೊಳ್ಳಲಾಗಿದೆ.
ಈಗಾಗಲೇ ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ನಾಯಕರು ದೆಹಲಿಗೆ ಆಗಮಿಸಿದ್ದಾರೆ. ಹಲವು ಸಂಚಾರ ಮಾರ್ಗ ನಿರ್ಬಂಧಿಸಲಾಗಿದೆ. ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿದೆ. ಹೀಗಾಗಿ ಇಂದಿನಿಂದ (ಸೆ.11) ಭಾನುವಾರವರೆಗೆ (ಸೆ.13) ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ. ಸೆಪ್ಟೆಂಬರ್ 14 ರಂದು ದೆಹಲಿಯ ಶಾಲಾ ಕಾಲೇಜು ಪುನರ್ ಆರಂಭಗೊಳ್ಳಲಿದೆ. ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ದೆಹಲಿ ಲೆಫ್ಟಿನೆಂಟ್ ಗರ್ವನರ್ ತರಣಜಿತ್ ಸಿಂಗ್ ಸಂಧು ಮತ್ತೊಂದು ಘೋಷಣೆ ಮಾಡಿದ್ದಾರೆ. ಸೆಪ್ಟೆಂಬರ್ 11 ರಂದು ಸಾರ್ವತ್ರಿಕ ರಜೆ ಘೋಷಿಸಿದ್ದಾರೆ. ಬ್ರಿಕ್ಸ್ ಶೃಂಗಸಭೆ ವೀಕ್ಷಿಸಲು ರಜೆ ನೀಡಲಾಗಿದೆ. ಇತ್ತ ದೆಹಲಿ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ದೆಹಲಿ ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ ಎಂದು ಸ್ಪಷ್ಟಪಡಿಸಿದೆ. ಆದರೆ ಸುಪ್ರೀಂ ಕೋರ್ಟ್ ದೆಹಲಿ ಮೆಟ್ರೋ ನಿಲ್ದಾಣ ಬಂದ್ ಮಾಡಲಾಗಿದೆ. ಇನ್ನು ದೆಹಲಿ ಮೆಟ್ರೋ ಮ್ಯೂಸಿಯಂ ಕೂಡ ಬಂದ್ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಮೆಟ್ರೋ ನಿಲ್ದಾಣ ಹಾಗೂ ಮ್ಯೂಸಿಯಂ ಸೆಪ್ಟೆಂಬರ್ 11 ರಿಂದ 13ರ ವರೆಗೆ ಬಂದ್ ಮಾಡಲಾಗಿದೆ.
ಭಾರತ್ ಮಂಡಪಂ ಸುತ್ತ ಮುತ್ತಲಿನ 22ಕ್ಕೂ ಹೆಚ್ಚು ಮಾರ್ಗದ ಸಂಚಾರ ಬದಲಾಯಿಸಲಾಗಿದೆ. 35ಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಇದೆ. 4800ಕ್ಕೂ ಹೆಚ್ಚು ಟ್ರಾಫಿಕ್ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಮುಖವಾಗಿ ವಿವಿಐಪಿ ಕಾನ್ವೇಗಳು ಹೆಚ್ಚಾಗಿರುವ ಕಾರಣ ಭದ್ರತಾ ಪಡೆ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಟ್ರಾಫಿಕ್ ಸಂಚಾರ ಬದಲಾವಣೆಯಿಂದ ಕಚೇರಿಗೆ ತೆರಳುವರಿಗೆ ಸಮಸ್ಯೆಯಾಗಲಿದೆ. ಹೀಗಾಗಿ ಕೆಲ ಕಂಪನಿಗಳು ವರ್ಕ್ ಫ್ರಮ್ ಹೋಮ್ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ