BRICS ಶೃಂಗಸಭೆ: ಭಯೋತ್ಪಾದನೆ ವಿರುದ್ಧ ಗುಡುಗಿದ ಮೋದಿ!

Published : Nov 17, 2020, 07:17 PM ISTUpdated : Nov 17, 2020, 07:19 PM IST
BRICS ಶೃಂಗಸಭೆ: ಭಯೋತ್ಪಾದನೆ ವಿರುದ್ಧ ಗುಡುಗಿದ ಮೋದಿ!

ಸಾರಾಂಶ

12ನೇ ಬ್ರಿಕ್ಸ್ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ ಮಹತ್ವದ ಭಾಷಣ ಮಾಡಿದ್ದಾರೆ. ಭಯೋತ್ಪಾದನೆ ವಿರುದ್ಧ ಮತ್ತೆ ಕಟು ಶಬ್ದಗಳಲ್ಲಿ ಗುಡುಗಿದ ಪ್ರಧಾನಿ ನರೇಂದ್ರ ಮೋದಿ, ಭದ್ರತೆ ಸೇರಿದಂತೆ ಹಲವು ವಿಚಾರಗಳ ಕುರಿತು ಬೆಳಕು ಚೆಲ್ಲಿದ್ದಾರೆ. ಈ ಬಿಕ್ಸ್ ಸಮ್ಮಿಟ್‌ನಲ್ಲಿ ಮೋದಿ ಭಾಷಣದ ಪ್ರಮುಖಾಂಶ ಇಲ್ಲಿದೆ.

ನವದೆಹಲಿ(ನ.17):  ಮಹತ್ವದ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. 12ನೇ ಬಿಕ್ರ್ಸ್ ಸಮ್ಮಿಟ್‌ನಲ್ಲಿ ಮೋದಿ, ಭಯೋತ್ಪಾದನೆ ವಿರುದ್ಧ ಒಗ್ಗಾಟ್ಟಾಗಿ ಹೋರಾಟ ಮಾಡಬೇಕೆಂದು ಪುನರುಚ್ಚರಿಸಿದ್ದಾರೆ. ಸದ್ಯ ಭಯೋತ್ಪಾದನೆ ವಿಶ್ವದ ಅತೀ ದೊಡ್ಡ ಹಾಗೂ ಗಂಭೀರ ಸಮಸ್ಯೆ. ಆದರೆ ಪಾಕಿಸ್ತಾನ ಸೇರಿದಂತೆ ಭಯೋತ್ಪಾದನೆಯನ್ನು ಪೋತ್ಸಾಹಿಸುವ ದೇಶಗಳು ಸದ್ಯದ ಪರಿಸ್ಥಿತಿಯ ಜವಾಬ್ದಾರರು ಎಂದು ಮೋದಿ ಹೇಳಿದ್ದಾರೆ.

ಪಿಎಂ ಮೋದಿಯ ಆತ್ಮನಿರ್ಭರ ಕನಸಿಗೆ ಸಾಧು ಸಂತರ ಸಾಥ್!

ಭಯೋತ್ಪಾದನೆ ನಿಗ್ರಹಕ್ಕೆ ಎಲ್ಲಾ ದೇಶಗಳು ಪಣತೊಟ್ಟಿವೆ. ಈ ನಿಟ್ಟಿನಲ್ಲಿ ರಷ್ಯಾ ಅಧ್ಯಕ್ಷತೆಯಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯತಂತ್ರಕ್ಕೆ ಅಂತಿಮ ಆಕಾರವನ್ನು ನೀಡಲು ಬ್ರಿಕ್ಸ್ ಯಶಸ್ವಿಯಾಗಿದೆ ಎಂದು ಮೋದಿ ಹೇಳಿದರು.

 

JNU ಕ್ಯಾಂಪಸ್‌ನಲ್ಲಿ ವಿವೇಕಾನಂದರ ಪ್ರತಿಮೆ ಅನಾವರಣ ಮಾಡಿದ ಮೋದಿ!.

ಕೊರೋನಾ ವೈರಸ್ ಸಾಂಕ್ರಾಮಿಕ ಬಿಕ್ಕಟ್ಟಿನ ನಡುವೆ ಜಗತ್ತು ಎದುರಿಸುತ್ತಿರುವ ಸಮಸ್ಯೆಗಳ ಸೇರಿದಂತೆ ಹಲವು ವಿಷಯಗಳಿಗೆ ಕುರಿತು ಬ್ರಿಕ್ಸ್ ಸಮ್ಮಿಟ್ ವೇದಿಕೆಯಾಗಲಿದೆ. ವರ್ಚುವಲ್ ಕಾರ್ಯಕ್ರಮದ ಮೂಲಕ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಒಂದು ವಾರದಲ್ಲಿ ಎರಡನೇ ಬಾರಿಗೆ ಪ್ರಧಾನಿ ಮೋದಿ ಹಾಗೂ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಒಂದೇ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ.

ಸ್ಥಿರತೆ, ಸುರಕ್ಷತೆ ಮತ್ತು ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಜಿಯೋಸ್ಟ್ರಾಟೆಜಿಕ್ ಬದಲಾವಣೆಗಳು ಜಗತ್ತಿನಲ್ಲಿ ನಡೆಯುತ್ತಿವೆ. ಈ ಮೂರು ಕ್ಷೇತ್ರಗಳಲ್ಲಿ ಬ್ರಿಕ್ಸ್ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಮೋದಿ ಹೇಳಿದರು. ಭಯೋತ್ಪಾದನೆ ಕುರಿತು ವಿಚಾರ ಪ್ರಸ್ತಾಪಿಸಿದ ಮೋದಿ, ಭಯೋತ್ಪಾದನೆಯನ್ನು ಪೋಷಿಸುವ ಹಾಗೂ ಬೆಂಬಲಿಸುವ ದೇಶಗಳು ತಪ್ಪಿತಸ್ಥರಾಗಿದ್ದಾರೆ.  ಈ ನಿಟ್ಟಿನಲ್ಲಿ  ಬ್ರಿಕ್ಸ್ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಮೋದಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್