
ಗಿರಿದಿಹ್ (ಜು.1): ಬಿಹಾರದಲ್ಲಿ ಸರಣಿ ಸೇತುವೆ ದುರಂತದ ಬೆನ್ನಲ್ಲೇ ಜಾರ್ಖಂಡ್‌ನಲ್ಲಿಯೂ ನಿರ್ಮಾಣ ಹಂತದ ಸೇತುವೆಯೊಂದು ಕುಸಿದಿದೆ. ಭಾರೀ ಮಳೆಗೆ ಕಾಮಗಾರಿ ಪ್ರಗತಿಯಲ್ಲಿದ್ದ ಸೇತುವೆಯ ಗರ್ಡರ್ ಕುಸಿದು ಮತ್ತು ಪಿಲ್ಲರ್ ವಾಲಿ ಈ ಘಟನೆ ಸಂಭವಿಸಿದೆ.
ಸುಮಾರು 5 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿದಿದೆ. ರಾಂಚಿಯಿಂದ ಸುಮಾರು 235 ಕಿಮೀ ದೂರದಲ್ಲಿರುವ ಡಿಯೋರಿ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ.
ಡುಮ್ರತೋಲಾ ಮತ್ತು ಕರಿಪಾರ್ಹಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಫತೇಪುರ್ ಮತ್ತು ಭೇಲ್ವಾಗತಿ ನಡುವೆ ಈ ಸೇತುವೆಯನ್ನು ನಿರ್ಮಿಸಲಾಗುತ್ತಿತ್ತು. ದುರಂತದಲ್ಲಿ ಯಾವುದೇ ಸಾವು- ನೋವು ಸಂಭವಿಸಿಲ್ಲ.‘ಭಾರೀ ಮಳೆಗೆ ಸೇತುವೆ ಕುಸಿದಿದೆ.
ಬಿಹಾರದಲ್ಲಿಂದು ಮೂರನೇ ಸೇತುವೆ ಕುಸಿತ; ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ನೆಲಕಚ್ಚಿದ ಬ್ರಿಡ್ಜ್
‘ಗರ್ಡರ್ ಕುಸಿದು ಪಿಲ್ಲರ್ ವಾಲಿದೆ. ಸೇತುವೆಯನ್ನು ಮರು ನಿರ್ಮಾಣ ಮಾಡಲು ಗುತ್ತಿಗೆದಾರರಿಗೆ ತಿಳಿಸಲಾಗುವುದು’ ಎಂದು ಗಿರಿದಿಹ್ ರಸ್ತೆ ನಿರ್ಮಾಣ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ