
ಈದ್ ಅಲ್-ಅಧಾ ಸಂದರ್ಭದಲ್ಲಿ ಬಿಎಸ್ಎಫ್ ಸಿಬ್ಬಂದಿ ಮತ್ತು ಪಾಕಿಸ್ತಾನ ರೇಂಜರ್ಸ್ ಸಿಬ್ಬಂದಿ ರಾಜಸ್ಥಾನದ ಬಾರ್ಮರ್‌ನಲ್ಲಿರುವ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ಸಿಹಿತಿಂಡಿಗಳನ್ನು ಹಂಚಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಬಿಎಸ್ಎಫ್ ಮತ್ತು ಪಾಕಿಸ್ತಾನ ರೇಂಜರ್ಸ್ ಸಿಬ್ಬಂದಿಗಳು ಪಂಜಾಬ್‌ನ ಅತ್ತಾರಿ-ವಾಗಾ ಗಡಿಯಲ್ಲಿ ಸಿಹಿತಿಂಡಿಗಳನ್ನು ವಿನಿಮಯ ಮಾಡಿಕೊಂಡರು. ಸಮಾರಂಭಗಳ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ಕೂಡ ಕಾಣಿಸಿಕೊಂಡಿವೆ.
ಕೊರೋನಾ, ಆಕ್ಸಿಜನ್, ಸಾವು: ರಾಹುಲ್, ಕೇಜ್ರೀವಾಲ್ ಸುಳ್ಳುಗಾರರೆಂದ ಬಿಜೆಪಿ!
ಈ ಬಾರಿ ಕೊರೋನಾ ಕಾರಣ ಹಬ್ಬದ ಸಂಭ್ರಮಕ್ಕೆ ತೆರೆ ಬಿದ್ದಿದ್ದು, ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು ಸರಳವಾಗಿ ಹಬ್ಬವನ್ನು ಆಚರಿಸಲಾಗುತ್ತಿದೆ. ಭಾರತದಲ್ಲಿ ಪಾಕ್ ಡ್ರೋನ್ ಬಂದ ನಂತರ ಗಡಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಈ ನಡುವೆಯೇ ಹಬ್ಬವನ್ನೂ ಆಚರಿಸಲಾಗಿದೆ.
ಕೇರಳದಲ್ಲಿ ಈದ್ ಪ್ರಯುಕ್ತ ಕೊರೋನಾ ನಿಯಮಗಳನ್ನು ಸರಳೀಕರಿಸಿದ್ದಕ್ಕೆ ಕೇಂದ್ರ ಈ ಸಂಬಂಧ ರಾಜ್ಯವನ್ನು ತರಾಟೆಗೆ ತೆಗೆದುಕೊಂಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ