ರಾತ್ರೋರಾತ್ರಿ ಬುಲ್ಡೋಜರ್ ಬಳಸಿ ಮನೆ ಧ್ವಂಸ ಮಾಡುವಂತಿಲ್ಲ: ಯುಪಿ ಸರ್ಕಾರಕ್ಕೆ ಸುಪ್ರೀಂ ಖಡಕ್ ಸೂಚನೆ

By Kannadaprabha News  |  First Published Nov 7, 2024, 8:02 AM IST

ಉತ್ತರ ಪ್ರದೇಶದಲ್ಲಿ ಅಧಿಕಾರಿಗಳಿಂದ ರಾತ್ರೋರಾತ್ರಿ ಮನೆ ಧ್ವಂಸ ಪ್ರಕರಣಕ್ಕೆ ಸುಪ್ರೀಂ ಕೋರ್ಟ್‌ ಖಾರವಾಗಿ ಪ್ರತಿಕ್ರಿಯಿಸಿದೆ. ಬಾಧಿತ ವ್ಯಕ್ತಿಗೆ ₹25 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ.


ನವದೆಹಲಿ: ಉತ್ತರ ಪ್ರದೇಶದಲ್ಲಿ ಅಧಿಕಾರಿಗಳಿಂದ ರಾತ್ರೋರಾತ್ರಿ ಮನೆ ಧ್ವಂಸ ಪ್ರಕರಣಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌, ನೀವು ಏಕಾಏಕಿ ಬುಲ್ಡೋಜರ್ ಬಳಸಿ ಮನೆ ಧ್ವಂಸ ಮಾಡುವಂತಿಲ್ಲ ಎಂದು ತಿಳಿಸಿದೆ.

2019ರಲ್ಲಿ ರಸ್ತೆ ಅಗಲೀಕರಣಕ್ಕಾಗಿ ವ್ಯಕ್ತಿಯೊಬ್ಬರ ಮನೆಯನ್ನು ಏಕಾಏಕಿ ಧ್ವಂಸ ಮಾಡಿದ ಯುಪಿ ಅಧಿಕಾರಿಗಳ ನಡೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಲಯ ಬಾಧಿತ ವ್ಯಕ್ತಿಗೆ ₹25 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ಅಲ್ಲದೆ, ರಾತ್ರೋರಾತ್ರಿ ಬುಲ್ಡೋಜರ್ ಬಳಸಿ ಮನೆ ಧ್ವಂಸ ಮಾಡುವಂತಿಲ್ಲ ಎಂದು ಎಲ್ಲ ರಾಜ್ಯ ಸರ್ಕಾರಗಳಿಗೆ ತಾಕೀತು ಮಾಡಿದೆ.

Tap to resize

Latest Videos

ಇದನ್ನೂ ಓದಿ: ಆರೋಪಿ ಎಂದಾಕ್ಷಣ ಅಂಥವರ ಮನೆ ಹೇಗೆ ಒಡೆಯಲಾದೀತು? ಬುಲ್ಡೋಜರ್‌ ನ್ಯಾಯಕ್ಕೆ ಸುಪ್ರೀಂ ಆಕ್ರೋಶ

ಧ್ವಂಸ ಪ್ರಶ್ನಿಸಿ ವ್ಯಕ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ। ಡಿ.ವೈ. ಚಂದ್ರಚೂಡ್‌, ನ್ಯಾ। ಜೆ.ಬಿ. ಪರ್ದಿವಾಲಾ ಹಾಗೂ ನ್ಯಾ। ಮನೋಜ್‌ ಮಿಶ್ರಾ ಅವರನ್ನೊಳಗೊಂಡ ಪೀಠ, ‘ನೀವು ರಾತ್ರೋರಾತ್ರಿ ಏಕಾಏಕಿ ಬಂದು ಮನೆಯನ್ನು ಧ್ವಂಸ ಮಾಡುವಂತಿಲ್ಲ. ಸೂಕ್ತ ನೋಟೀಸ್‌ ನೀಡದೆ ಧ್ವಂಸ ಮಾಡಿದರೆ ವಾಸವಿರುವ ಕುಟುಂಬಗಳು ಎಲ್ಲಿಗೆ ಹೋಗಬೇಕು?’ ಎಂದು ಪ್ರಶ್ನಿಸಿ, ‘ಮಹಾರಾಜಗಂಜ್ ಜಿಲ್ಲೆಯಲ್ಲಿ ನಡೆದಿರುವ ಅನಧಿಕೃತ ಧ್ವಂಸಗಳ ವಿರುದ್ಧ ತನಿಖೆ ನಡೆಸಬೇಕು’ ಎಂದು ಉತ್ತರ ಪ್ರದೇಶ ಮುಖ್ಯ ಕಾರ್ಯದರ್ಶಿಗೆ ತಿಳಿಸಿತು.

ಇದನ್ನೂ ಓದಿ: 'ಇದಕ್ಕೆ ಧೈರ್ಯ ಬೇಕು..' ಬುಲ್ಡೋಜರ್‌ ಕುರಿತು ಟೀಕೆ ಮಾಡಿದ ಅಖಿಲೇಶ್‌ ಯಾದವ್‌ಗೆ ಸಿಎಂ ಯೋಗಿ ಆದಿತ್ಯನಾಥ್‌ ಖಡಕ್‌ ಉತ್ತರ!

click me!