
ಬಲಿಯಾ(ಮಾ.25): ಮುಸ್ಲಿಂ ಮಹಿಳೆಯರನ್ನು ತ್ರಿವಳಿ ತಲಾಖ್‌ನ ಅನಿಷ್ಟದಿಂದ ದೂರ ಮಾಡಿದ್ದಾಯ್ತು. ಮುಂದಿನ ಸರದಿ ಬುರ್ಖಾ ನಿಷೇಧದ್ದು ಎಂದು ಉತ್ತರಪ್ರದೇಶದ ಸಚಿವ ಆನಂದ್ ಸ್ವರೂಪ್ ಶುಕ್ಲಾ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬುರ್ಖಾ ಧರಿಸುವುದು ದುಷ್ಟಪದ್ಧತಿ. ಮುಂದಿನ ದಿನಗಳಲ್ಲಿ ಮುಸ್ಲಿಂ ಮಹಿಳೆಯರಿಗೆ ಈ ದುಷ್ಟಪದ್ಧತಿಯಿಂದಲೂ ಮುಕ್ತಿ ನೀಡಲಾಗುವುದು. ಈಗಾಗಲೇ ಹಲವು ದೇಶಗಳಲ್ಲಿ ಬುರ್ಖಾ ಧರಿಸುವುದಕ್ಕೆ ನಿಷೇಧ ಹೇರಲಾಗಿದೆ’ ಎಂದರು.
ಮಸೀದಿಗಳಲ್ಲಿ ದೊಡ್ಡದಾಗಿ ಧ್ವನಿವರ್ಧಕ ಬಳಸುತ್ತಿರುವ ಕಾರಣ ತಮ್ಮ ಕರ್ತವ್ಯ ನಿರ್ವಹಣೆಗೆ ಅಡ್ಡಿಯಾಗುತ್ತಿದೆ. ಹೀಗಾಗಿ ಕೋರ್ಟ್ ಅನುಮತಿ ನೀಡಿದ ಪ್ರಮಾಣದಲ್ಲಷ್ಟೇ ಧ್ವನಿವರ್ಧಕ ಬಳಕೆಗೆ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿಗೆ ದೂರಿದ ಮಾರನೇ ದಿನವೇ ಅವರು ಈ ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ