ದೀಪಾವಳಿ ನಡುವೆ ಶಾಕ್, ಬಸ್ ಅಪಘಾತದಲ್ಲಿ 12 ಪ್ರಯಾಣಿಕರು ಮೃತ, 35 ಮಂದಿಗೆ ಗಾಯ!

By Chethan Kumar  |  First Published Oct 29, 2024, 7:05 PM IST

ದೀಪಾವಳಿ ಹಬ್ಬಕ್ಕೂ ಮುನ್ನವೇ ಶಾಕ್ ಎದುರಾಗಿದೆ. ಪ್ರಯಾಣಿಕರ ಬಸ್ ಅಪಘಾತಕ್ಕೀಡಾಗಿದ್ದು 12 ಮಂದಿ ಮೃತಪಟ್ಟಿದ್ದಾರೆ. 35ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 


ಜೈಪುರ(ಅ.29) ದೇಶದೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಶುರುವಾಗಿದೆ. ಆದರೆ ಹಬ್ಬದ ಆರಂಭಕ್ಕೂ ಮುನ್ನವೇ ಅಪಘಾತದ ಆಘಾತ ಸುದ್ದಿಯೊಂದು ಬಂದಿದೆ. ಭೀಕರ ಬಸ್ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದಾರೆ. 35ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ರಾಜಸ್ಥಾನದ ಸಿಕಾರ್ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿಕ್ಕಿ ಹೊಡೆದು ಕೆಳಕ್ಕುರುಳಿದೆ. ಘಟನೆಗೆ ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಆಘಾತ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ಸೂಚಿಸಿದ್ದಾರೆ. ಇದೇ ವೇಳೆ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ರಾಜಸ್ಥಾನದ ನವಲಘಡದಿಂದ ಸುಜಾನಘಡಕ್ಕೆ ತೆರಳುದ್ದ ಬಸ್ ಅಪಘಾತಕ್ಕೀಡಾಗಿದೆ. ವೇಗವಾಗಿ ಸಂಚರಿಸುತ್ತಿದ್ದ ಬಸ್ ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಫ್ಲೈಓವರ್ ಆರಂಭಕ್ಕೂ ಮುನ್ನ ಕಟ್ಟಿರುವ ತಡೆಗೋಡೆಗೆ ಬಸ್ ಡಿಕ್ಕಿಯಾಗಿದೆ. ಹೀಗಾಗಿ ಅಪಘಾತದ ತೀವ್ರತೆಯೂ ಹೆಚ್ಚಾಗಿದೆ. ಭೀಕರ ಅಪಘಾತಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡಗಳು ಆಗಮಿಸಿ ಕಾರ್ಯಾಚರಣೆ ನಡೆಸಿದೆ. ಗಾಯಾಳುಗಳನ್ನು ಲಕ್ಷ್ಮಣಘಡದ ಆಸ್ಪತ್ರೆಗ ದಾಖಲಿಸಲಾಗಿದೆ. ಇನ್ನು ಗಂಭೀರವಾಗಿ ಗಾಯಗೊಂಡಿರುವವರನ್ನು ಜೈಪುರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Tap to resize

Latest Videos

ರಸ್ತೆ ಅಪಘಾತದಿಂದ ಸಾವು: ದೇಶಕ್ಕೇ ಕರ್ನಾಟಕ ನಂ.5, ಉತ್ತರ ಪ್ರದೇಶ ನಂ.1

ಘಟನೆ ಕುರಿತು ಟ್ವೀಟ್ ಮಾಡಿರುವ ಭಜನ್‌ಲಾಲ್ ಶರ್ಮಾ, ಲಕ್ಷ್ಮಣಘಡದ ಸಿಕಾರ್‌ನಲ್ಲಿ ನಡೆದ ಬಸ್ ಅಪಘಾತ ತೀವ್ರ ಬೇಸರ ಹಾಗೂ ಆಘಾತ ತಂದಿದೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಂತಾಪಗಳು. ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಶ್ರೀರಾಮ ಮೃತರ ಆತ್ಮಕ್ಕೆ ಶಾಂತಿ ದಯಪಾಲಿಸಲಿದೆ. ಇದೇ ವೇಳೆ ಗಾಯಾಳುಗಳು ಶ್ರೀಘ್ರವೇ ಚೇತರಿಸಿಕೊಳ್ಳಲಿ ಎಂದಿದ್ದಾರೆ.

ಜಿಲ್ಲಾ ಸೂಪರಿಡೆಂಟ್ ಪೊಲೀಸ್ ಭುವನ್ ಭೂಷಣ್ ಯಾದವ್ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದೇವೆ. ಭೀಕರ ಅಪಘಾತದ ಕಾರಣ ಕೆಲವರು ಸ್ಥಳದಲ್ಲೆ ಮೃತಪಟ್ಟಿದ್ದರು. ಆಸ್ಪತ್ರೆ ಸಾಗಿಸುವ ಮಧ್ಯೆ ಇಬ್ಬರು ಮೃತಪಟ್ಟಿದ್ದರು, ಇನ್ನು ಮೂವರು ಚಿಕಿತ್ಸೆ ನಡುವೆ ಮೃತಪಟ್ಟಿದ್ದರು. ಮೃತರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ಗಾಯಳುಗಳಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಭುವನ್ ಭೂಷಣ್ ಯಾದವ್ ಹೇಳಿದ್ದಾರೆ.

ಸೆಲ್ಫಿ ತಂದಿಟ್ಟ ಫಜೀತಿ: ಕೆರೆಯಲ್ಲಿ ಜಾರಿ ಬಿದ್ದು 12 ಗಂಟೆ ನೀರಲ್ಲಿದ್ದರೂ ಬದುಕಿಬಂದ ಯುವತಿ!
 

click me!