
ನವದೆಹಲಿ(ನ.06): ಉತ್ತರ ಪ್ರದೇಶ, ಬಿಹಾರ, ಒಡಿಶಾ, ತೆಲಂಗಾಣ, ಹರ್ಯಾಣ ಹಾಗೂ ಮಹಾರಾಷ್ಟ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಒಟ್ಟು 7 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿತ್ತು. 7ರಲ್ಲಿ 4 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿತು. ಇನ್ನು ತೆಲಂಗಾಣದ ಮನುಗೋಡು ಕ್ಷೇತ್ರದಲ್ಲಿ ಟಿಆರ್‌ಎಸ್ ಪ್ರಬಲ ಪೈಪೋಟಿ ನೀಡಿದ ಬಿಜೆಪಿಗೆ ಗೆಲುವು ದಕ್ಕಲಿಲ್ಲ. ತೀವ್ರ ಕುತೂಹಲ ಕೆರಳಿಸಿದ್ದ ಬಿಹಾರದಲ್ಲಿ ಮೊಕಮಾ ಕ್ಷೇತ್ರ ಉಳಿಸಿಕೊಳ್ಳುವಲ್ಲಿ ನಿತೀಶ್ ಕುಮಾರ್ ನೇತೃತ್ವದ ಆರ್‌ಜೆಡಿ ಯಶಸ್ವಿಯಾಗಿದೆ. ಇನ್ನು ಮಹಾರಾಷ್ಟ್ರದ ಪೂರ್ವ ಅಂಧೇರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವ ಸೇನೆ ಗೆಲುವು ದಾಖಲಿಸಿದೆ. ಇದೀಗ ದೇಶದ 6 ರಾಜ್ಯಗಳಲ್ಲಿ ಸಂಭ್ರಮಾಚರಣೆ ಆರಂಭಗೊಂಡಿದೆ.
ಹರ್ಯಾಣ
ಹರ್ಯಾಣದ ಅದಂಪುರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಇಲ್ಲಿ ಬಿಜೆಪಿ ಅಭ್ಯರ್ಥಿ ಭವ್ಯ ಬಿಶ್ನೋಯ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಅಭ್ಯರ್ಥಿ ಜಯ್ ಪ್ರಕಾಶ್ ತೀವ್ರ ಪೈಪೋಟಿ ನೀಡಿದರು. ಇತ್ತ ಆಮ್ ಆದ್ಮಿ ಪಾರ್ಟಿ ಯಾವುದೇ ಪ್ರಭಾವ ಬೀರಲಿಲ್ಲ. ಭವ್ಯ ಬಿಶ್ನೋಯ್ 16,000 ಮತಗಳ ಅಂತರದಲ್ಲಿ ಅಧಂಪುರ 7 ಕ್ಷೇತ್ರ ಗೆದ್ದುಕೊಂಡಿದ್ದಾರೆ.
Himachal Pradesh Assembly Election: ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ, ಹೋದಲೆಲ್ಲಾ ಜನಸಾಗರ!
ಉತ್ತರ ಪ್ರದೇಶ
ಉತ್ತರ ಪ್ರದೇಶದ ಗೋಲಾ ಗೋಖರ್ಣನಾಥ್ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ಶಾಸಕ ಅರವಿಂದ್ ಗಿರಿ ಅಕಾಲಿಕ ನಿಧನದಿಂದ ತೆರವಾಗಿದ್ದ ಕ್ಷೇತ್ರದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಾರ್ಟಿ ತೀವ್ರ ಸ್ಪರ್ಧೆ ನೀಡಿತ್ತು. ಚುನಾವಣೆಗೂ ಮುನ್ನ ಬಿಜೆಪಿ ಮೇಲೆ ಹಲವು ಆರೋಪಗಳನ್ನು ಅಖಿಲೇಶ್ ಯಾದವ್ ಮಾಡಿದ್ದರು. ಬಿಜೆಪಿ ಶಾಸಕ ಅರವಿಂದ್ ಗಿರಿ ಪುತ್ರ ಅಮನ್ ಗಿರಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಗೆಲುವನ್ನು ನಿಧನರಾದರ ತಂದೆಗೆ ಅರ್ಪಿಸಿದ್ದಾರೆ.
ಒಡಿಶಾ
ತೀವ್ರ ಕುತೂಹಲ ಕೆರಳಿಸಿದ್ದ ಒಡಿಶಾದ ಧಾಮನಗರ ವಿಧಾನಸಭಾ ಕ್ಷೇತ್ರ ಬಿಜೆಪಿ ಪಾಲಾಗಿದೆ. ಪ್ರತಿ ಹಂತದ ಮತ ಎಣಿಕೆಯಲ್ಲಿ ಹಾವು ಏಣಿ ಆಟದಂತಿದ್ದ ಧಾಮನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಬಿಜೆಪಿಯ ಸೂರ್ಯಬಂಶಿ ಸೂರಜ್ 80,351 ಮತಗಳನ್ನು ಪಡೆದೆ ಗೆಲುವು ದಾಖಲಿಸಿದರು. ಬಿಜೆಡಿಯ ಅಬಂತಿ ದಾಸ್ ತೀವ್ರ ಸ್ಪರ್ಧೆ ಒಡ್ಡಿದ್ದರು. ಅಬಂತಿ ದಾಸ್ ಅಂತಿಮವಾಗಿ 70,470 ಮತಗಳನ್ನು ಪಡೆದು ಸೋಲೊಪ್ಪಿಕೊಂಡರು.
ಉತ್ತರ ಪ್ರದೇಶ, ಬಿಹಾರ ಸೇರಿ 5 ರಾಜ್ಯಗಳ ಲೋಕಸಭಾ, ವಿಧಾನಸಭಾ ಉಪಚನಾವಣೆ ದಿನಾಂಕ ಘೋಷಣೆ!
ಬಿಹಾರ
ಬಿಹಾರದಲ್ಲಿ ಬಿಜೆಪಿಗೆ ಮಿಶ್ರ ಫಲಿತಾಂಶ. ಬಿಹಾರದ ಮೊಕಾಮಾ ಕ್ಷೇತ್ರ ಹಾಗೂ ಗೋಪಾಲಗಂಜ್ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಇದರಲ್ಲಿ ಮೊಕಮಾ ಕ್ಷೇತ್ರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಆರ್‌ಜೆಡಿ ಗೆಲುವು ದಾಖಲಿಸಿದ್ದರೆ, ಗೊಪಾಲ್‌ಗಂಜ್ 7ಕ್ಷೇತ್ರ ಬಿಜೆಪಿ ಪಾಲಾಗಿದೆ. ಬಿಜೆಪಿ ಮೈತ್ರಿ ಕಡಿದು ಜೆಡಿಯು ಜೊತೆ ನಿತೀಶ್ ಕುಮಾರ್ ಸರ್ಕಾರ ರಚಿಸಿದ್ದರು. ಬಳಿಕ ನಡೆದ ಮೊದಲ ಚುನಾವಣೆ ಇದಾಗಿದೆ.
ಮಹಾರಾಷ್ಟ್ರ
ಉದ್ಧವ್ ಠಾಕ್ರೆ ಸರ್ಕಾರ ಪತನಗೊಂಡ ಬಳಿಕ ನಡೆದ ಈ ಉಪಚುನಾವಣೆ ಪ್ರತಿಷ್ಠೆಯ ಕಣವಾಗಿತ್ತು. ಪೂರ್ವ ಅಂಧೇರಿ ಕ್ಷೇತ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಗೆಲುವಿನ ಸಿಹಿ ಕಂಡಿದೆ. ಶಿವಸೇನೆಯ ರುತುಜಾ ಲಕ್ತೆ ಗೆಲುವು ದಾಖಲಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಹೀಗಾಗಿ ರುತುಜಾ ಲಕ್ತೆ ಗೆಲುವು ಸುಲಭವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ