
ಲಕ್ನೋ(ಜ.21): ಎಷ್ಟೇ ವಿರೋಧವಿದ್ದರೂ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿ ಮಾಡಿಯೇ ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಲಕ್ನೋದಲ್ಲಿ ಸಿಎಎ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಿಎಎ ಜಾರಿಯಿಂದ ದೇಶಕ್ಕೆ ಒಳಿತಾಗಲಿದೆ ಎಂದು ಹೇಳಿದರು.
60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವ ಕೆಲಸವನ್ನು ಮಾಡಿತ್ತು. ಅಲ್ಪಸಂಖ್ಯಾತರನ್ನು ತಮ್ಮ ವೋಟ್ ಬ್ಯಾಂಕ್ ಆಗಿ ಮಾಡಿಕೊಂಡು ಮತ್ತೊಂದು ವರ್ಗವನ್ನು ತಿರಸ್ಕರಿಸಿತ್ತು. ಆದರೆ ಬಿಜೆಪಿ ಎಲ್ಲ ಸಮುದಾಯವನ್ನು ಸಮಾನವಾಗಿ ಕಾಣುತ್ತಿದೆ ಎಂದು ಈ ವೇಳೆ ಅಮಿತ್ ಶಾ ಹೇಳಿದರು.
ಭಾರತಕ್ಕೆ ಸಿಎಎ ಅಗತ್ಯವೇ ಇರಲಿಲ್ಲ: ಬಾಂಗ್ಲಾ ಪ್ರಧಾನಿ
ಸಿಎಎ ವಿರೋಧಿಸುವವರು ಅದರ ವಿರುದ್ಧ ಆಧಾರರಹಿತ ವದಂತಿ ಹರಡುತ್ತಿದ್ದಾರೆ ಎಂದು ಗುಡುಗಿದ ಶಾ, ಸಿಎಎ ಯಾವುದೇ ವ್ಯಕ್ತಿಯ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ ಎಂದು ಮತ್ತೆ ಭರವಸೆ ನೀಡಿದರು. ಸಿಎಎ ವಿರೋಧಿಸುವವರು ತಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಶಾ ವಿಪಕ್ಷಗಳಿಗೆ ಸವಾಲು ಹಾಕಿದರು.
ಇದೇ ವೇಳೆ ರಾಮ ಮಂದಿರ ನಿರ್ಮಾಣ ಕುರಿತಾಗಿ ಮಾತನಾಡಿದ ಅಮಿತ್ ಶಾ, ಸುಪ್ರೀಂಕೋರ್ಟ್ ತೀರ್ಪಿನಂತೆ ಇನ್ನು 3 ತಿಂಗಳಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಶತಸಿದ್ಧ ಎಂದು ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ