ಕೋಮುಗಲಭೆಯಾದ ಯಾವ ಕ್ಷೇತ್ರಕ್ಕೂ ಚುನಾವಣೆಯನ್ನೇ ಮಾಡೋದಿಲ್ಲ: ಕಲ್ಕತ್ತಾ ಹೈಕೋರ್ಟ್‌ ಎಚ್ಚರಿಕೆ

Published : Apr 23, 2024, 05:58 PM IST
ಕೋಮುಗಲಭೆಯಾದ ಯಾವ ಕ್ಷೇತ್ರಕ್ಕೂ ಚುನಾವಣೆಯನ್ನೇ ಮಾಡೋದಿಲ್ಲ:  ಕಲ್ಕತ್ತಾ ಹೈಕೋರ್ಟ್‌ ಎಚ್ಚರಿಕೆ

ಸಾರಾಂಶ

Calcutta High Court communal violence ರಾಮನವಮಿ ಶೋಭಾಯಾತ್ರೆಯಂದು ಯಾವ ಕ್ಷೇತ್ರದಲ್ಲಿ ಕೋಮು ಗಲಭೆಯಾಗಿದೆಯೋ ಆ ಕ್ಷೇತ್ರಗಳಿಗೆ ಚುನಾವಣೆಯನ್ನೇ ನಡೆಸೋದಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್‌ ಮಂಗಳವಾರ ಎಚ್ಚರಿಕೆ ನೀಡಿದೆ.

ನವದೆಹಲಿ (ಏ.23):  ರಾಮನವಮಿ ಆಚರಣೆ ವೇಳೆ ಕೋಮುಗಲಭೆಗೆ ಸಾಕ್ಷಿಯಾದ ಪಶ್ಚಿಮ ಬಂಗಾಳದ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಎಚ್ಚರಿಕೆ ನೀಡಿದೆ. ಏಪ್ರಿಲ್ 17 ರಂದು ಮುರ್ಷಿದಾಬಾದ್‌ನಲ್ಲಿ ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ನೇತೃತ್ವದ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. "ಜನರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಲು ಸಾಧ್ಯವಾಗದಿದ್ದರೆ, ಈ ಜಿಲ್ಲೆಗಳಲ್ಲಿ ಚುನಾವಣಾ ಆಯೋಗವು ಸಂಸತ್ತಿನ ಚುನಾವಣೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ನಾವು ಹೇಳುತ್ತೇವೆ. ಮುಂದೆ ಇರೋದು ಅದೊಂದೇ ದಾರಿ' ಎಂದು ನ್ಯಾಯಪೀಠ ಹೇಳಿದೆ.  "ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದರೂ, ಎರಡು ಗುಂಪಿನ ಜನರು ಈ ರೀತಿ ಜಗಳವಾಡುತ್ತಿದ್ದರೆ, ಅವರು ಯಾವುದೇ ಚುನಾಯಿತ ಪ್ರತಿನಿಧಿಗಳಿಗೆ ಅರ್ಹರಲ್ಲ" ಎಂದು ಅದು ಸೇರಿಸಿದೆ.
ರಾಮನವಮಿಯಂದು ಕೋಲ್ಕತ್ತಾದಲ್ಲಿ ಇದೇ ರೀತಿಯ ಮೆರವಣಿಗೆಗಳು ನಡೆದಿವೆ, ಆದರೆ ಅಲ್ಲಿ ಯಾವುದೇ ಹಿಂಸಾಚಾರ ವರದಿಯಾಗಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಕೋಲ್ಕತ್ತಾದಲ್ಲಿಯೂ 23 ಕಡೆಗಳಲ್ಲಿ ಸಂಭ್ರಮಾಚರಣೆ ನಡೆದಿದೆ ಆದರೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಎಂಸಿಸಿ ಇರುವಾಗ ರಾಜ್ಯ ಪೊಲೀಸರು ಏನು ಮಾಡ್ತಿದ್ದಾರೆ? ಕೇಂದ್ರ ಪಡೆಗಳು ಏನು ಮಾಡುತ್ತಿವೆ? ಎರಡೂ ಘರ್ಷಣೆಗಳನ್ನು ತಡೆಯಲು ಅವರಿಗೆ ಏಕೆ ಸಾಧ್ಯವಾಗಲಿಲ್ಲ. ," ಪೀಠವು ಪ್ರಶ್ನೆ ಆಮಾಡಿದೆ.

ಹಿಂಸಾಚಾರ ಸಂಬಂಧಿತ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಷ್ಟು ಜನರನ್ನು ಬಂಧಿಸಲಾಗಿದೆ ಎಂದು ಪೀಠವು ರಾಜ್ಯದ ವಕೀಲರನ್ನು ಪ್ರಶ್ನೆ ಮಾಡಿದೆ. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿವಹಿಸಿಕೊಂಡಿದೆ ಎಂದು ರಾಜ್ಯದ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಶಾಂತಿಯುತವಾಗಿ ಆಚರಿಸಲು ಸಾಧ್ಯವಾಗದ ಜನರಿಗೆ ಚುನಾವಣೆಯಲ್ಲಿ ಭಾಗವಹಿಸಲು ಅವಕಾಶ ನೀಡಬಾರದು ಎಂದು ನಾವು ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡುತ್ತೇವೆ ಎಂದು ಪೀಠವು ಉತ್ತರಿಸಿದೆ. ಯಾವುದೇ ಸ್ಥಾನದ ಚುನಾವಣೆಯನ್ನು ಮುಂದೂಡುವ ಕುರಿತು ಹೈಕೋರ್ಟ್ ಯಾವುದೇ ಆದೇಶವನ್ನು ನೀಡದಿದ್ದರೂ, ಮುರ್ಷಿದಾಬಾದ್ ವ್ಯಾಪ್ತಿಯಲ್ಲಿ ಬರುವ ಬರ್ಹಾಂಪೋರ್‌ನಲ್ಲಿ ಚುನಾವಣೆಯನ್ನು ಮುಂದೂಡಬೇಕೆಂದು ಚುನಾವಣಾ ಆಯೋಗಕ್ಕೆ ಪ್ರಸ್ತಾಪಿಸುವುದಾಗಿ ಹೇಳಿದೆ. ಕೋಮು ಘರ್ಷಣೆಯ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ. ಮುಂದಿನ ವಿಚಾರಣೆ ಶುಕ್ರವಾರ, ಏಪ್ರಿಲ್ 26 ರಂದು ನಡೆಯಲಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ
ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್