
ಪಟನಾ(ಮಾ.31): ಸತಿ-ಪತಿಗಳ ನಡುವೆ ಸಂಬಂಧ ಹದಗೆಟ್ಟಿರುವ ಸಮಯದಲ್ಲಿ ಗಂಡ ತನ್ನ ಪತ್ನಿಯನ್ನು ಭೂತ-ಪಿಶಾಚಿ ಎಂದು ಸಂಬೋಧಿಸುವುದು ಕ್ರೌರ್ಯ ಎನಿಸಿಕೊಳ್ಳುವುದಿಲ್ಲ ಎಂಬುದಾಗಿ ಪಟನಾ ಹೈಕೋರ್ಟ್ ತೀರ್ಪು ನೀಡಿದೆ.
ಈ ಕುರಿತು ಆದೇಶ ನೀಡಿದ ನ್ಯಾ.ವಿವೇಕ್ ಚೌಧರಿ, ‘ಪ್ರಕರಣದಲ್ಲಿ ಗಂಡ ಹೆಂಡತಿಯ ನಡುವೆ ಸಂಬಂಧ ಸರಿಯಿರಲಿಲ್ಲ ಎನ್ನುವುದು ಸಾಬೀತಾಗಿದೆ. ಈ ಸಮಯದಲ್ಲಿ ಇಬ್ಬರ ನಡುವೆ ಭೂತ-ಪಿಶಾಚಿ ಎಂದು ಸಂಬೋಧನೆ ನಡೆಯುವುದು ಸಾಮಾನ್ಯ. ಹಾಗಾಗಿ ಇದು ಕ್ರೌರ್ಯ ಎನಿಸಿಕೊಳ್ಳುವುದಿಲ್ಲ’ ಎಂದು ತೀರ್ಪು ನೀಡಿದರು.
ಶಾಲೆಯ ಜಾತಿ ದಾಖಲೆ ತಪ್ಪು ತಿದ್ದುವ ಅಧಿಕಾರ ಸಿವಿಲ್ ಕೋರ್ಟ್‌ಗಿದೆ: ಹೈಕೋರ್ಟ್ ತೀರ್ಪು
ಏನಿದು ಪ್ರಕರಣ?
ಬಿಹಾರದಲ್ಲಿ ನರೇಶ್ ಕುಮಾರ್ ಮತ್ತು ಜ್ಯೋತಿ ಎಂಬುವವರು 1993ರಲ್ಲಿ ವಿವಾಹವಾಗಿದ್ದರು. ಬಳಿಕ ಪತಿ ಮತ್ತು ಆತನ ತಂದೆ ಹೆಂಡತಿಯ ಮನೆಯವರಿಗೆ ಕಾರನ್ನು ವರದಕ್ಷಿಣೆಯಾಗಿ ನೀಡುವಂತೆ ಪೀಡಿಸುತ್ತಿದ್ದರು ಎಂಬುದಾಗಿ ಪತ್ನಿಯ ಮನೆಯವರು ಪ್ರಕರಣ ದಾಖಲಿಸಿದ್ದರು. ಅದರಲ್ಲಿ ಪತಿ ತನ್ನನ್ನು ಭೂತ ಪಿಶಾಚಿ ಎಂದೆಲ್ಲಾ ಸಂಬೋಧಿಸುತ್ತಿರುವುದಾಗಿ ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ನಳಂದಾ ನ್ಯಾಯಾಲಯ ಪತ್ನಿಯ ಪರವಾಗಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಗಂಡನ ಮನೆಯವರು ಪಟನಾ ಹೈಕೊರ್ಟ್ ಮೆಟ್ಟಿಲೇರಿದ್ದರು. ಆಗ ಪತಿಯು ವರದಕ್ಷಿಣೆ ಕೇಳಿರುವುದಕ್ಕೆ ಮತ್ತು ಶೋಷಣೆ ಮಾಡಿರುವುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇಲ್ಲ ಎಂದು ತಿಳಿಸಿ ವಿಚ್ಛೇದನ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ