ಆಂಧ್ರದಲ್ಲಿ ಮುಂದುವರಿದ ಸೇಡಿನ ರಾಜಕೀಯ, ಜಗನ್‌ ವಿರುದ್ಧ ಕೊಲೆ ಯತ್ನ ಕೇಸು!

By Kannadaprabha News  |  First Published Jul 13, 2024, 10:25 PM IST

ಜಗನ್‌ ವಿರುದ್ಧ ಕೊಲೆ ಯತ್ನ ಕೇಸು - ಜತೆಗೆ ಇಬ್ಬರು ನಿವೃತ್ತ ಐಪಿಎಸ್‌ಗಳ ಮೇಲೂ ಎಫ್ಐಆರ್‌- ಟಿಡಿಪಿ ಶಾಸಕ ರಾಜು ನೀಡಿದ ದೂರು ಆಧರಿಸಿ ಕೇಸ್‌ - ಆಂಧ್ರದಲ್ಲಿ ಮುಂದುವರಿದ ‘ಸೇಡಿನ ರಾಜಕೀಯ’


ವಿಜಯವಾಡ (ಜು.13): ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರ ಮೇಲೆ ಚಂದ್ರಬಾಬು ನಾಯ್ಡು ಸರ್ಕಾರ ಪ್ರಹಾರ ಮುಂದುವರಿಸಿದೆ. ರೆಡ್ಡಿ ಮತ್ತು ಇತರ ನಾಲ್ವರ ವಿರುದ್ಧ ಗುಂಟೂರು ಜಿಲ್ಲೆಯ ನಗರಂಪಲೆಂ ಪೊಲೀಸರು ಶುಕ್ರವಾರ ಹಳೆಯ ಘಟನೆಯೊಂದನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ.

4 ದಶಕದ ಬಳಿಕ ನಕಲಿ ಕೀ ಬಳಸಿ ಪುರಿ ಜಗನ್ನಾಥನ ರತ್ನ ಭಂಡಾರ ಓಪನ್, ಖಜಾನೆ ಲೂಟಿ ಮಾಡಲಾಗಿದ್ಯಾ?

Tap to resize

Latest Videos

ತೆಲುಗುದೇಶಂ ಶಾಸಕ ಕೆ ರಘುರಾಮ ಕೃಷ್ಣಂ ರಾಜು ಅವರ ದೂರಿನ ಮೇರೆಗೆ ಜಗನ್‌, ಮಾಜಿ ಪೊಲೀಸ್ ಮಹಾನಿರ್ದೇಶಕ (ಗುಪ್ತಚರ) ಪಿಎಸ್‌ಆರ್ ಆಂಜನೇಯುಲು, ಮಾಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಸಿಐಡಿ) ಮತ್ತು ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಯ ಮಾಜಿ ಅಧೀಕ್ಷಕಿ ಡಾ ಜಿ ಪ್ರಭಾವತಿ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಚಾರ್ಮಾಡಿ ಘಾಟ್ ಎಂಟ್ರಿಯಲ್ಲಿ ಪ್ರವಾಸಿಗರ ರಂಪಾಟ, ಎಣ್ಣೆ ಮತ್ತಿನಲ್ಲಿ ಪೊಲೀಸರ ಮುಂದೆಯೇ ಹೊಡೆದಾಟ!

2001ರಲ್ಲಿ ರಘುರಾಮ ಕೃಷ್ಣಂ ರಾಜು ಅವರನ್ನು ಆಂಧ್ರ ಸಿಐಡಿ ಸಿಬ್ಬಂದಿ ಹೈದರಾಬಾದ್‌ನಲ್ಲಿ ಪ್ರಕರಣವೊಂದರಲ್ಲಿ ಬಂಧಿಸಿದ್ದರು. ‘ಆಗ ನನಗೆ ಸಿಐಡಿ ಅಧಿಕಾರಿ ಪಿ.ವಿ. ಸುನೀಲ್ ಕುಮಾರ್, ಆಂಜನೇಯುಲು ಮತ್ತು ಇತರ ಕೆಲವು ಪೊಲೀಸ್ ಅಧಿಕಾರಿಗಳು ರಬ್ಬರ್ ಬೆಲ್ಟ್ ಮತ್ತು ಲಾಠಿಯಿಂದ ಥಳಿಸಿದ್ದರು. ಎದೆ ಮೇಲೆ ಕುಳಿತು ಉಸಿರುಗಟ್ಟಿಸಲು ಯತ್ನಿಸಿದರು. ಜಗನ್‌ ಅವರ ಸೂಚನೆ ಮೇರೆಗೆ ನನಗೆ ಹೃದಯ ಸಂಬಂಧಿ ಕಾಯಿಲೆಗೆ ಔಷಧಿಗಳನ್ನು ತೆಗೆದುಕೊಳ್ಳಲೂ ಅವಕಾಶ ನೀಡಲಿಲ್ಲ. ಪೊಲೀಸ್ ಸಿಬ್ಬಂದಿ ತನ್ನನ್ನು ಕೊಲ್ಲಲು ಪ್ರಯತ್ನಿಸಿದರು’ ಎಂದು ರಾಜು ದೂರಿದ್ದಾರೆ. ಈ ದೂರು ಆಧರಿಸಿ ಜಗನ್‌ ವಿರುದ್ಧ ಕೊಲೆ ಯತ್ನ, ಕಸ್ಟಡಿಯಲ್ಲಿ ಚಿತ್ರಹಿಂಸೆ ಮತ್ತು ಕ್ರಿಮಿನಲ್ ಪಿತೂರಿ ಮುಂತಾದ ಆರೋಪಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.

click me!